Just In
Don't Miss
- News
ಬೆಂಗಳೂರಿಗೆ ಮೋದಿ: 3 ದಿನ ಈ ರಸ್ತೆಗಳಲ್ಲಿ ಸಂಚಾರಕ್ಕೆ ನಿಷೇಧ, ಯಾವುದೆಲ್ಲಾ ತಿಳಿಯಿರಿ
- Sports
Ranji Trophy: ಪಂಜಾಬ್ ವಿರುದ್ಧ ಗೆದ್ದ ಸೌರಾಷ್ಟ್ರ: ಸೆಮಿಫೈನಲ್ನಲ್ಲಿ ಕರ್ನಾಟಕ-ಸೌರಾಷ್ಟ್ರ ಮುಖಾಮುಖಿ
- Finance
ಅದಾನಿ ಸ್ಟಾಕ್ ಕುಸಿತ: 'ನಿಯಂತ್ರಕರು ಅವರ ಕೆಲಸ ಮಾಡುತ್ತಾರೆ', ಎಂದ ವಿತ್ತ ಸಚಿವೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಬಹುಬೇಡಿಕೆಯ ಟೊಯೊಟಾ ಹೈರೈಡರ್ ಎಸ್ಯುವಿ
- Movies
ಹಣೆಯ ಮೇಲೆ ಗಾಯ! ಗಾಯಕಿ ವಾಣಿ ಜಯರಾಂ ಸಾವಿನ ಬಗ್ಗೆ ಅನುಮಾನ
- Lifestyle
ನವಣೆ ಬಳಿಸಿದರೆ ಕ್ಯಾನ್ಸರ್ನಿಂದ ಫೈಲ್ಸ್ವರೆಗೆ ಕಾಯಿಲೆ ತಡೆಗಟ್ಟಬಹುದು,ಗೊತ್ತಾ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಭಾರತದಲ್ಲಿ ನೋಕಿಯಾ G11 ಪ್ಲಸ್ ಬಿಡುಗಡೆ! ಬೆಲೆ ಎಷ್ಟು? ಫೀಚರ್ಸ್ ಹೇಗಿದೆ?
ಟೆಕ್ ಮಾರುಕಟ್ಟೆಯಲ್ಲಿ ನೋಕಿಯಾ ಕಂಪೆನಿಯ ಫೋನ್‌ಗಳಿಗೆ ಈಗಲೂ ಒಳ್ಳೆ ಡಿಮ್ಯಾಂಡ್ ಇದೆ. ತನ್ನ ಆಕರ್ಷಕ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ಎವರ್‌ಗ್ರೀನ್ ಬ್ರಾಂಡ್ ಎನಿಸಿಕೊಂಡಿದೆ. ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ನೋಕಿಯಾ ಕಂಪೆನಿ ಸದ್ದಿಲ್ಲದೆ ಹೊಸ ನೋಕಿಯಾ G11 ಪ್ಲಸ್ ಫೋನ್ ಲಾಂಚ್ ಮಾಡಿದೆ. ಸದ್ಯ ಭಾರತದ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿರುವ ಈ ಸ್ಮಾರ್ಟ್‌ಫೋನ್ ಮೂರು ದಿನಗಳ ಬ್ಯಾಟರಿ ಬ್ಯಾಕ್‌ಅಪ್ ಸಾಮರ್ಥ್ಯವನ್ನು ಪಡೆದಿದೆ.

ಹೌದು, ನೋಕಿಯಾ ಕಂಪೆನಿ ಭಾರತದಲ್ಲಿ ಹೊಸ ನೋಕಿಯಾ G11 ಪ್ಲಸ್ ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಇದು ಯುನಿಸೊಕ್ T606 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಈ ಫೋನಿನ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದು ಭಾರತದಲ್ಲಿ 12,499ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?
ನೋಕಿಯಾ G11 ಪ್ಲಸ್ ಸ್ಮಾರ್ಟ್‌ಫೊನ್ 6.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 720x1,600 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 90Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ ವಾಟರ್-ಡ್ರಾಪ್ ನಾಚ್ ಡಿಸ್‌ಪ್ಲೇ ವಿನ್ಯಾಸವನ್ನು ಹೊಂದಿದ್ದು, 180Hz ಟಚ್ ಸ್ಯಾಪ್ಲಿಂಗ್ ರೇಟ್ ಪಡೆದಿದೆ.

ಪ್ರೊಸೆಸರ್ ಕಾರ್ಯವೈಖರಿ ಹೇಗಿರಲಿದೆ?
ನೋಕಿಯಾ G11 ಪ್ಲಸ್ ಸ್ಮಾರ್ಟ್‌ಫೋನ್ ಯುನಿಸೊಕ್ T606 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಬ್ಲೋಟ್‌ವೇರ್-ಫ್ರೀ ಆಂಡ್ರಾಯ್ಡ್ 12 ಓಎಸ್‌ನಲ್ಲಿ ರನ್ ಆಗಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶವನ್ನು ಕೂಡ ನೀಡಿದೆ. ಇದರೊಂದಿಗೆ ಕಂಪನಿಯು ಎರಡು ಓಎಸ್ ಅಪ್ಡೇಟ್ ಮತ್ತು ಮೂರು ವರ್ಷಗಳ ಮಂತ್ಲಿ ಸೆಕ್ಯುರಿಟಿ ಅಪ್ಡೇಟ್‌ಗಳನ್ನು ನೀಡುವ ಭರವಸೆ ನೀಡಿದೆ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ನೋಕಿಯಾ G11 ಪ್ಲಸ್ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು ಆಟೋಫೋಕಸ್ ಮತ್ತು f/1.8 ಲೆನ್ಸ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಫಿಕ್ಸ್ಡ್-ಫೋಕಸ್ ಡೆಪ್ತ್ ಸೆನ್ಸಾರ್ ಅನ್ನು ಪಡೆದುಕೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಬ್ಯಾಕ್‌ಅಪ್ ಏನಿದೆ?
ನೋಕಿಯಾ G11 ಪ್ಲಸ್ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು USB ಟೈಪ್-C ಪೋರ್ಟ್ ಮೂಲಕ 10W ಚಾರ್ಜಿಂಗ್ ವೇಗವನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 3 ದಿನಗಳ ಬ್ಯಾಟರಿ ಬ್ಯಾಕ್‌ಅಪ್ ನೀಡಲಿದೆ ಎಂದು ನೋಕಿಯಾ ಕಂಪೆನಿ ಹೇಳಿಕೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್-ಸಿಮ್ 4G, ಡ್ಯುಯಲ್-ಬ್ಯಾಂಡ್ ವೈ-ಫೈ ಮತ್ತು ಬ್ಲೂಟೂತ್ v5.0, GPS, ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿದೆ.

ಇತರೆ ಫೀಚರ್ಸ್‌ಗಳೇನು?
ಈ ಸ್ಮಾರ್ಟ್‌ಫೋನ್ IP52 ರೇಟಿಂಗ್ ಅನ್ನು ಹೊಂದಿದ್ದು, ನೀರು ಮತ್ತು ದೂಳಿನಿಂದ ರಕ್ಷಣೆ ನೀಡಲಿದೆ. ಜೊತೆಗೆ ರಿಯರ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಕೂಡ ಹೊಂದಿದೆ. ಇದಲ್ಲದೆ ಫೇಸ್ ಅನ್‌ಲಾಕ್ ಫೀಚರ್ಸ್ ಕೂಡ ಒಳಗೊಂಡಿದೆ. ಇದು FM ರೇಡಿಯೊವನ್ನು ಕೂಡ ಬೆಂಬಲಿಸಲಿದ್ದು, ಇದಕ್ಕಾಗಿ 3.5mm ಹೆಡ್‌ಫೋನ್ ಜ್ಯಾಕ್ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ G11 ಪ್ಲಸ್ ಸ್ಮಾರ್ಟ್‌ಫೋನ್ ಭಾರತದಲ್ಲಿ 4GB RAM + 64GB ಸ್ಟೋರೇಜ್ ಆಯ್ಕೆಗೆ 12,499ರೂ. ಬೆಲೆಯನ್ನು ಹೊಂದಿದೆ. ಇದರ ಸೇಲ್ ಡೇಟ್ ಇನ್ನು ಬಹಿರಂಗವಾಗಿಲ್ಲ. ಈ ಸ್ಮಾರ್ಟ್‌ಫೋನ್ ಚಾರ್ಕೋಲ್ ಗ್ರೇ ಮತ್ತು ಲೇಕ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಪ್ರಮುಖ ರಿಟೇಲ್ ಸ್ಟೋರ್ ಮತ್ತು ಆನ್‌ಲೈನ್ ಸ್ಟೋರ್‌ಗಳಲ್ಲಿ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಹೇಳಲಾಗಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470