Home
ಸುದ್ದಿಜಾಲ

ಬಜೆಟ್‌ ಬೆಲೆಯಲ್ಲಿ ನೋಕಿಯಾ G21 ಸ್ಮಾರ್ಟ್‌ಫೋನ್‌ ಬಿಡುಗಡೆ!

ನೋಕಿಯಾ ಕಂಪೆನಿ ಮೊಬೈಲ್‌ ಜಗತ್ತಿನ ಎವರ್‌ಗ್ರೀನ್‌ ಬ್ರ್ಯಾಂಡ್‌ ಎನಿಸಿಕೊಂಡಿದೆ. ತನ್ನ ವಿಭಿನ್ನ ಮಾದರಿಯ ಫೋನ್‌ಗಳ ಮೂಲಕ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನವನ್ನು ಪಡೆದುಕೊಂಡಿದೆ. ಸದ್ಯ ಇದೀಗ ನೋಕಿಯಾ ಕಂಪೆನಿ ಹೊಸ ನೋಕಿಯಾ G21 ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ಚಾರ್ಜ್‌ನಲ್ಲಿ ಮೂರು ದಿನಗಳ ಬ್ಯಾಟರಿ ಅವಧಿಯನ್ನು ನೀಡುತ್ತದೆ ಎಂದು ಹೇಳಲಾಗಿದೆ. ಇದು ಟ್ರಿಪಲ್ ರಿಯರ್‌ ಕ್ಯಾಮೆರಾ ಮತ್ತು ವಾಟರ್‌ಡ್ರಾಪ್-ಶೈಲಿಯ ಡಿಸ್‌ಪ್ಲೇ ನಾಚ್ ವಿನ್ಯಾಸವನ್ನು ಹೊಂದಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಭಾರತದಲ್ಲಿ ಹೊಸ ನೋಕಿಯಾ G21 ಸ್ಮಾರ್ಟ್‌ಫೋನ್‌ ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 5,050mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನೋಕಿಯಾ G21 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 180Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಮತ್ತು 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇದು 20:9 ರಚನೆಯ ಅನುಪಾತವನ್ನು ಹೊಂದಿದ್ದು, 90Hz ರಿಫ್ರೆಶ್‌ ರೇಟ್‌ ಅನ್ನೊ ಒಳಗೊಂಡಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ನೋಕಿಯಾ G21 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಯುನಿಸೊಕ್ T606 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೋ SD ಕಾರ್ಡ್ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ G21 ಸ್ಮಾರ್ಟ್‌ಫೋನ್‌ 5,050mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11ac, ಬ್ಲೂಟೂತ್ v5.0, FM ರೇಡಿಯೋ, GPS/ A-GPS, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಆಂಬಿಯೆಂಟ್‌ ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು OZO ಸ್ಪಾಟಿಯಲ್ ಆಡಿಯೊ ಕ್ಯಾಪ್ಚರ್ ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ ಎರಡು ಮೈಕ್ರೊಫೋನ್‌ಗಳನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ನೋಕಿಯಾ G21 ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 4GB RAM + 64GB ಇಂಟರ್‌ ಸ್ಟೋರೇಜ್ ರೂಪಾಂತರ ಆಯ್ಕೆಗೆ 12,999ರೂ.ಬೆಲೆ ಹೊಂದಿದೆ. ಇನ್ನು ಈ ಫೋನ್ 6GB + 128GB ಮಾದರಿಯ ಆಯ್ಕೆಗೆ 14,999ರೂ. ಬೆಲೆ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡಸ್ಕ್ ಮತ್ತು ನಾರ್ಡಿಕ್ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಬರಲಿದೆ. ಇದು ನೋಕಿಯಾ.ಕಾಮ್‌ ಸೈಟ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ಇದು ಆಯ್ದ ಚಿಲ್ಲರೆ ಅಂಗಡಿಗಳು ಮತ್ತು ಪ್ರಮುಖ ಇ-ಕಾಮರ್ಸ್ ಸೈಟ್‌ಗಳ ಮೂಲಕವೂ ಮಾರಾಟವಾಗಲಿದೆ.

Best Mobiles in India

English summary
Nokia G21 was launched in India on Tuesday as the newest member under the Nokia G series.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+