ನೋಕಿಯಾ G21 ಫೋನ್ ಲಾಂಚ್!..ಪ್ರೊಸೆಸರ್ ಯಾವುದು?
ನೋಕಿಯಾ ಕಂಪೆನಿ ಮೊಬೈಲ್ ಮಾರುಕಟ್ಟೆಯ ಎವರ್‌ಗ್ರೀನ್ ಬ್ರ್ಯಾಂಡ್ ಎನಿಸಿಕೊಂಡಿದೆ. ಈಗಾಗಲೇ ಹಲವು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ನೋಕಿಯಾ ಕಂಪೆನಿ ಹೊಸ ನೋಕಿಯಾ G21 ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ 6.5-ಇಂಚಿನ LCD ಡಿಸ್‌ಪ್ಲೇ ಹೊಂದಿದೆ. ಇದು ಯುನಿಸೊಕ್ T606 ಪ್ರೊಸೆಸರ್ ಬಲವನ್ನು ಒಳಗೊಂಡಿದೆ. ಜೊತೆಗೆ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ.

ಹೌದು, ನೋಕಿಯಾ ಕಂಪೆನಿ ಹೊಸ ನೋಕಿಯಾ G21 ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ನಾರ್ಡಿಕ್ ಬ್ಲೂ ಮತ್ತು ಡಸ್ಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ವಿಶೇಷತೆ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ನೋಕಿಯಾ G21 ಸ್ಮಾರ್ಟ್‌ಫೋನ್ 1,600x720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5-ಇಂಚಿನ HD+ IPS ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ರಿಫ್ರೆಶ್ ರೇಟ್ ಅಗತ್ಯವಿಲ್ಲದಿದ್ದಾಗ 60Hz ರಿಫ್ರೆಶ್ ರೇಟ್‌ಗೆ ಕಡಿಮೆ ಮಾಡಬಹುದಾಗಿದೆ. ಜೊತೆಗೆ ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಈ ಡಿಸ್‌ಪ್ಲೇ 269ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿವೆ.

ಪ್ರೊಸೆಸರ್ ಯಾವುದು?
ನೋಕಿಯಾ G21 ಸ್ಮಾರ್ಟ್‌ಫೋನ್ ಯುನಿಸೊಕ್ T606 ಪ್ರೊಸೆಸರ್ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 512GB ವರೆಗೆ ಸ್ಟೋರೇಜ್ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ವಿಶೇಷ
ಇನ್ನು ಈ ಸ್ಮಾರ್ಟ್‌ಫೋನ್ ಎಲ್‌ಇಡಿ ಫ್ಲ್ಯಾಷ್ ಜೊತೆಗೆ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡು ಮತ್ತು ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ನೋಕಿಯಾ G21 ಸ್ಮಾರ್ಟ್‌ಫೋನ್ 5,050mAh ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, 4G, ಬ್ಲೂಟೂತ್ v5, GPS, A-GPS, Beidou, ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇದಲ್ಲದೆ ಅಕ್ಸಿಲೆರೊಮೀಟರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಲೈಟ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಮತ್ತು ಗೂಗಲ್ ಅಸಿಸ್ಟೆಂಟ್‌ಗೆ ಕರೆ ಮಾಡಲು ಮೀಸಲಾದ ಬಟನ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ G21 ಸ್ಮಾರ್ಟ್‌ಫೋನ್ ಬೆಲೆ EUR 170 (ಅಂದಾಜು 14,577ರೂ.) ನಿಂದ ಪ್ರಾರಂಭವಾಗುತ್ತದೆ. ಇದು ನಾರ್ಡಿಕ್ ಬ್ಲೂ ಮತ್ತು ಡಸ್ಕ್ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಪ್ರಸ್ತುತ, ಈ ಫೋನ್ ಭಾರತದಲ್ಲಿ ಇನ್ನು ಬಿಡುಗಡೆ ಆಗಿಲ್ಲ. ಇದು ಭಾರತದಲ್ಲಿ 15,000ರೂ. ಬೆಲೆಯಲ್ಲಿ ಲಭ್ಯವಾಗುವ ಸಾಧ್ಯತೆ ಇದೆ.


Click it and Unblock the Notifications








