ನೋಕಿಯಾದ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭರ್ಜರಿ ಡಿಸ್ಕೌಂಟ್..5000mAh ಬ್ಯಾಟರಿ!
ನೋಕಿಯಾ ಮೊಬೈಲ್ ಕಂಪನಿಯು ಎವರ್‌ಗ್ರೀನ್ ಮೊಬೈಲ್ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿದೆ. ನೋಕಿಯಾ ಆಂಡ್ರಾಯ್ಡ್ ಮಾದರಿಯಲ್ಲಿ ಹಲವು ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿ ಗ್ರಾಹಕರನ್ನು ತನ್ನತ್ತ ಆಕರ್ಷಿಸಿದೆ. ಸದ್ಯ ನೋಕಿಯಾ ಸಂಸ್ಥೆಯ ನೋಕಿಯಾ G42 5G ಫೋನ್ ಅಮೆಜಾನ್ ತಾಣದಲ್ಲಿ ಭಾರೀ ರಿಯಾಯಿತಿ ಪಡೆದಿದೆ.
ಹೌದು, ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ನೋಕಿಯಾ G42 5G ಮೊಬೈಲ್ ಶೇ. 24% ರಷ್ಟು ರಿಯಾಯಿತಿ ಪಡೆದುಕೊಂಡಿದೆ. ಈ ಫೋನಿನ 6GB RAM + 5GB Virtual RAM + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 16,499ರೂ. ಆಗಿದ್ದು, ಕೊಡುಗೆಯಲ್ಲಿ 12,599ರೂ. ಗಳ ಡಿಸ್ಕೌಂಟ್ ಪ್ರೈಸ್ ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಲಭ್ಯ ಇರುವ ಇತರೆ ಡಿಸ್ಕೌಂಟ್ ಪಡೆದುಕೊಂಡರೆ, ಮತ್ತಷ್ಟು ರಿಯಾಯಿತಿಯಲ್ಲಿ ಖರೀದಿಸಬಹುದಾಗಿದೆ.

ಅಂದಹಾಗೆ ನೋಕಿಯಾ G42 5G ಮೊಬೈಲ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್ ಪವರ್‌ನಲ್ಲಿ ಕಾರ್ಯ ಮಾಡಲಿದ್ದು, 5,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದುಕೊಂಡಿದೆ. ಇದು ಅಲ್ಲದೇ ಈ ಫೋನ್ ತ್ರಿವಳಿ ಕ್ಯಾಮೆರಾ ರಚನೆ ಹೊಂದಿದ್ದು, ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನಲ್ಲಿ ಇದೆ. ಇನ್ನುಳಿದಂತೆ ನೋಕಿಯಾ G42 5G ಮೊಬೈಲ್ ಫೋನಿನ ಇತರ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ನೋಕಿಯಾ G42 5G ಫೋನಿನ ಫೀಚರ್ಸ್ ಹೀಗಿವೆ
ನೋಕಿಯಾ G42 5G ಫೋನ್ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಆಯ್ಕೆ ಒಳಗೊಂಡಿದ್ದು, ಇದು 720 x 1612 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿದೆ. ಇದರ ಜೊತೆಗೆ ಈ ಫೋನ್ 90Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದ್ದು, 450 ನಿಟ್ಸ್ ಕನಿಷ್ಠ ಹಾಗೂ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ನೊಂದಿಗೆ ಕಾಣಿಸಿಕೊಂಡಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ 3 ಮೂಲಕ ಹೆಚ್ಚಿನ ರಕ್ಷಣೆ ಪಡೆದಿದೆ.
ಹಾಗೆಯೇ ನೋಕಿಯಾ G42 5G ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್, 8nm ಮೊಬೈಲ್ ಪ್ಲಾಟ್‌ಫಾರ್ಮ್ ಜೊತೆಗೆ ಅಡ್ರಿನೋ 619 GPU ಬಲ ಪಡೆದುಕೊಂಡಿದೆ. ಇದರ ಜೊತೆಗೆ 6GB RAM, 128GB ಇಂಟರ್ ಸ್ಟೋರೇಜ್ ಆಯ್ಕೆ ನೀಡಲಾಗಿದ್ದು ಹೆಚ್ಚುವರಿ ಸ್ಟೋರೇಜ್‌ಗಾಗಿ SD ಕಾರ್ಡ್ ಆಯ್ಕೆ ನೀಡಲಾಗಿದ್ದು, 1TB ವರೆಗೆ ಹೆಚ್ಚಿಗೆ ಮಾಡಬಹುದಾಗಿದೆ. ಈ ಫೋನ್ ಆಂಡ್ರಾಯ್ಡ್ 13 ಓಎಸ್ ಸಪೋರ್ಟ್ ಪಡೆದಿದೆ.

ನೋಕಿಯಾದ ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್ ನಲ್ಲಿದೆ. 2 ಮೆಗಾಪಿಕ್ಸೆಲ್ ಡೀಪ್ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸರ್ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್, ನೈಟ್ ಮೋಡ್ 2.0, AI ಪೋರ್ಟ್ರೇಟ್ ಮತ್ತು OZO 3D ಆಡಿಯೊ ಕ್ಯಾಪ್ಚರ್ ಸೌಲಭ್ಯ ಸಹ ಈ ಫೋನ್‌ನಲ್ಲಿದೆ. ಜೊತೆಗೆ 8 ಮೆಗಾಪಿಕ್ಸೆಲ್ FF ಫ್ರಂಟ್ ಕ್ಯಾಮೆರಾ ಆಯ್ಕೆ ಸ್ಪೆಷಲ್ ಎನಿಸಿದೆ.
ನೋಕಿಯಾ G42 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದ್ದು, ಒಂದು ಪೂರ್ಣ ಚಾರ್ಜಿಂಗ್‌ನಲ್ಲಿ ಮೂರು ದಿನಗಳ ಬ್ಯಾಟರಿ ಬ್ಯಾಕ್‌ಅಪ್ ಒದಗಿಸಲಿದೆ. ಅಲ್ಲದೇ ಇದು ರೀಚಾರ್ಜ್‌ಗಾಗಿ 20W ವೇಗದ ಚಾರ್ಜಿಂಗ್ (QC3.0 & PD3.0) ಅನ್ನು ಸಪೋರ್ಟ್ ಮಾಡುತ್ತದೆ.

ಇದು ಜೆಲ್ಲಿ ಕೇಸ್ ಮತ್ತು ಬಾಕ್ಸ್‌ನಲ್ಲಿ 20W ಚಾರ್ಜರ್‌ನೊಂದಿಗೆ ಪ್ಯಾಕ್ ಆಗಿದೆ. ಇದರೊಂದಿಗೆ ಈ ಫೋನ್ ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP52 ರೇಟಿಂಗ್ ಇದ್ದು, 5G SA / NSA, ಯುಎಸ್‌ಬಿ ಟೈಪ್-ಸಿC 2.0 ಪೋರ್ಟ್‌ನ ಕನೆಕ್ಟಿವಿಟಿ ಬೆಂಬಲ ಪಡೆದಿದೆ.


Click it and Unblock the Notifications








