Home
ಸುದ್ದಿಜಾಲ

Nokia: ನೋಕಿಯಾದ ಈ ಫೋನ್‌ಗೆ ಸಿಗ್ತಾ ಇದೆ 25% ಡಿಸ್ಕೌಂಟ್‌!..128GB ಸ್ಟೊರೇಜ್‌ ಅಯ್ಕೆ!

ಭಾರತದಲ್ಲಿ ಸದ್ದು ಮಾಡಿದ್ದ ನೋಕಿಯಾ G42 5G ಸ್ಮಾರ್ಟ್‌ಫೋನ್‌ ಇದೀಗ ಭಾರಿ ಡಿಸ್ಕೌಂಟ್‌ ಪಡೆದುಕೊಂಡಿದೆ. ಇ-ಕಾಮರ್ಸ್‌ ಸೈಟ್‌ ಅಮೆಜಾನ್‌ನಲ್ಲಿ ಭರ್ಜರಿ ರಿಯಾಯಿತಿ ಪಡೆದುಕೊಳ್ಳುವ ಮೂಲಕ ಗ್ರಾಹಕರ ಹುಬ್ಬೇರುವಂತೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಒಳಗೊಂಡಿದೆ.

ಹೌದು, Nokia G42 5G ಸ್ಮಾರ್ಟ್‌ಫೋನ್‌ ಮೇಲೆ ಅಮೆಜಾನ್‌ನಲ್ಲಿ 25% ಡಿಸ್ಕೌಂಟ್‌ ಪಡೆದುಕೊಂಡಿದೆ. ಇದರಿಂದ ನೋಕಿಯಾ G42 5G ಸ್ಮಾರ್ಟ್‌ಫೋನ್‌ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾಪಿಕ್ಸೆಲ್‌ ನಲ್ಲಿದೆ. ಹಾಗಾದ್ರೆ ನೋಕಿಯಾ G42 5G ಸ್ಮಾರ್ಟ್‌ಫೋನ್‌ ಬೆಲೆ ಎಷ್ಟು ಇಳಿಕೆಯಾಗಿದೆ? ಇದರ ಫೀಚರ್ಸ್‌ ಏನಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನೋಕಿಯಾದ ಈ ಫೋನ್‌ಗೆ ಸಿಗ್ತಾ ಇದೆ 25% ಡಿಸ್ಕೌಂಟ್‌!..128GB ಸ್ಟೊರೇಜ್‌ ಅಯ್ಕೆ!

ನೋಕಿಯಾ G42 5G ಮೇಲಿನ ಡಿಸ್ಕೌಂಟ್‌ ಎಷ್ಟಿದೆ?
ನೋಕಿಯಾ G42 5G ಸ್ಮಾರ್ಟ್‌ಫೋನಿನ 6GB RAM ಮತ್ತು 128GB ಆಯ್ಕೆಯನ್ನು ಅಮೆಜಾನ್‌ನಲ್ಲಿ 15,999 ರೂ ಗಳಿಗೆ ಪಟ್ಟಿ ಮಾಡಲಾಗಿದೆ. ಆದರೆ 25% ಡಿಸ್ಕೌಂಟ್‌ ಘೋಷಣೆ ಮಾಡಿರುವುದರಿಂದ ಇದರ ಬೆಲೆ ಇದೀಗ 11,999ರೂ ಗಳಿಗೆ ಇಳಿಕೆಯಾಗಿದೆ. ಇನ್ನು ಸ್ಮಾರ್ಟ್‌ಫೋನ್‌ ಮೇಲೆ ವಿವಿದ ಬ್ಯಾಂಕ್‌ ಕಾರ್ಡ್‌ ಆಫರ್‌ಗಳನ್ನು ಸಹ ನೀಡಲಾಗುತ್ತಿದೆ. ಇದು ಇದರ ಬೆಲೆಯನ್ನು ಇನ್ನಷ್ಟು ಕಡಿಮೆ ಮಾಡಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 5GB Virtual RAM ವಿಸ್ತರಣೆಗೆ ಅವಕಾಶವಿರುವುದರಿಂದ, 11GB RAM ನಿಮಗೆ ಲಭ್ಯವಾಗಲಿದೆ.

ನೋಕಿಯಾ G42 5G ಫೀಚರ್ಸ್‌ ಹೇಗಿದೆ?
ನೋಕಿಯಾ G42 5G ಸ್ಮಾರ್ಟ್‌ಫೋನ್‌ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 720 x 1612 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಇನ್ನು ಫೋನ್ 90Hz ರಿಫ್ರೆಶ್ ರೇಟ್ ಬೆಂಬಲಿಸಲಿದ್ದು, 450 ನಿಟ್ಸ್ ಕನಿಷ್ಠ ಹಾಗೂ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್‌ನೊಂದಿಗೆ ಕಾಣಿಸಿಕೊಂಡಿದೆ. ಇದಲ್ಲದೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್‌ ಸಹ ಪಡೆದಿದೆ.

ನೋಕಿಯಾದ ಈ ಫೋನ್‌ಗೆ ಸಿಗ್ತಾ ಇದೆ 25% ಡಿಸ್ಕೌಂಟ್‌!..128GB ಸ್ಟೊರೇಜ್‌ ಅಯ್ಕೆ!

ನೋಕಿಯಾ G42 5G ಪ್ರೊಸೆಸರ್‌ ಯಾವುದು?
ನೋಕಿಯಾ G42 5G ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಅಡ್ರಿನೋ 619 GPU ಸಪೊರ್ಟ್‌ ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 13 ಓಎಸ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ನೋಕಿಯಾ G42 5G ಕ್ಯಾಮೆರಾ ರಚನೆ
ನೋಕಿಯಾ G42 5G ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ನಲ್ಲಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೀಪ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸರ್‌ ಹೊಂದಿದೆ. ಜೊತೆಗೆ ಎಲ್‌ಇಡಿ ಫ್ಲ್ಯಾಶ್‌, ನೈಟ್ ಮೋಡ್ 2.0, AI ಪೋರ್ಟ್ರೇಟ್ ಮತ್ತು OZO 3D ಆಡಿಯೊ ಕ್ಯಾಪ್ಚರ್ ಸೌಲಭ್ಯ ಸಹ ನೀಡಲಾಗಿದೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್‌ FF ಸೆಲ್ಫಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ನೋಕಿಯಾದ ಈ ಫೋನ್‌ಗೆ ಸಿಗ್ತಾ ಇದೆ 25% ಡಿಸ್ಕೌಂಟ್‌!..128GB ಸ್ಟೊರೇಜ್‌ ಅಯ್ಕೆ!

ನೋಕಿಯಾ G42 5G ಬ್ಯಾಟರಿ ಮತ್ತು ಇತರೆ ಫೀಚರ್ಸ್‌

ನೋಕಿಯಾ G42 5G ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದೆ. ಇದು 20W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಫೋನ್‌ ಸಿಂಗಲ್‌ ಫುಲ್‌ ಚಾರ್ಜಿಂಗ್‌ನಲ್ಲಿ ಮೂರು ದಿನಗಳ ಬ್ಯಾಟರಿ ಬ್ಯಾಕ್‌ಅಪ್‌ ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಪೋನ್‌ ಜ್ಯಾಕ್‌ ಅನ್ನು ಒಳಗೊಂಡಿದೆ.

Best Mobiles in India

English summary
Nokia G42 5G Get Massive Discount in amazon Website: Offer Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+