Home
ಸುದ್ದಿಜಾಲ

ಇಂದು ನೋಕಿಯಾ G42 5G ಫಸ್ಟ್‌ ಸೇಲ್‌; ಏನಾದ್ರೂ ಆಫರ್‌ ಇದೆಯಾ?

ಜನಪ್ರಿಯ ನೋಕಿಯಾ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೋಕಿಯಾ G42 5G ಸ್ಮಾರ್ಟ್‌ಫೋನ್ ಫೋನ್‌ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಇಂದು (ಸೆಪ್ಟೆಂಬರ್ 15 ರಂದು) ಮಧ್ಯಾಹ್ನ 12 ಗಂಟೆಯಿಂದ ಅಮೆಜಾನ್ ಇ ಕಾಮರ್ಸ್‌ ತಾಣದಲ್ಲಿ ಮೊದಲ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ನೋಕಿಯಾದ ಈ 5G ಫೋನ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.

ಹೌದು, ನೋಕಿಯಾ ಸಂಸ್ಥೆಯ ನೋಕಿಯಾ G42 5G ಮೊಬೈಲ್‌ ಇಂದು ಫಸ್ಟ್‌ ಸೇಲ್‌ ಶುರು ಮಾಡಲಿದೆ. ಇನ್ನು ಈ ಫೋನ್ ಅಧಿಕೃತವಾಗಿ ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಖರೀದಿಗೆ ಲಭ್ಯವಾಗಲಿದ್ದು, ಗ್ರಾಹಕರು ಈ ಫೋನ್‌ ಅನ್ನು ಗ್ರೇ ಮತ್ತು ಪರ್ಪಲ್ ಬಣ್ಣಗಳಲ್ಲಿ ಖರೀದಿ ಮಾಡಬಹುದಾಗಿದೆ. ಅಂದಹಾಗೆ ಈ ಫೋನಿನ ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸಲ್‌ ಸೆನ್ಸಾರ್ ನಲ್ಲಿದೆ.

ಇಂದು ನೋಕಿಯಾ G42 5G ಫಸ್ಟ್‌ ಸೇಲ್‌; ಏನಾದ್ರೂ ಆಫರ್‌ ಇದೆಯಾ?

ಇನ್ನು ಈ ಫೋನ್‌ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ವರ್ಚುವಲ್‌ RAM ಸೌಲಭ್ಯ ಕೂಡಾ ಪಡೆದುಕೊಂಡಿದೆ. ಹಾಗೆಯೇ ಇದು 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದುಕೊಂಡಿದೆ. ಹಾಗಾದರೆ ಈ ಫೋನಿನ ಬೆಲೆ ಎಷ್ಟು? ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ನೋಕಿಯಾ G42 5G ಡಿಸ್‌ಪ್ಲೇ ಮಾಹಿತಿ :
ನೋಕಿಯಾ G42 5G ಮೊಬೈಲ್‌ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಪಡೆದುಕೊಂಡಿದ್ದು, ಇದು 720 x 1612 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಒಳಗೊಂಡಿದೆ. ಅಲ್ಲದೇ ಈ ಫೋನ್ 90Hz ರಿಫ್ರೆಶ್ ರೇಟ್ ಆಯ್ಕೆ ಹೊಂದಿದ್ದು, 450 ನಿಟ್ಸ್ ಕನಿಷ್ಠ ಹಾಗೂ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಸಾಮರ್ಥ್ಯ ಪಡೆದಿದೆ. ಜೊತೆಗೆ ಸ್ಕ್ರೀನ್‌ ರಕ್ಷಣೆಗಾಗಿ ಗೊರಿಲ್ಲಾ ಗ್ಲಾಸ್ 3 ಸೌಲಭ್ಯ ಸಹ ಇದೆ.

ನೋಕಿಯಾ G42 5G ಪ್ರೊಸೆಸರ್ ಯಾವುದು :
ನೋಕಿಯಾ G42 5G ಮೊಬೈಲ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್ ನಲ್ಲಿ ಕೆಲಸ ಮಾಡಲಿದ್ದು, ಅಡ್ರಿನೋ 619 GPU ಸಪೋರ್ಟ್‌ ಕೂಡಾ ಪಡೆದುಕೊಂಡಿದೆ. ಹಾಗೆಯೇ ಆಂಡ್ರಾಯ್ಡ್ 13 ಓಎಸ್‌ ಸಪೋರ್ಟ್‌ ಪಡೆದಿರುವ ಈ ಫೋನ್‌ 6GB RAM + 128GB ಆಂತರೀಕ ಸ್ಟೋರೇಜ್‌ ಆಯ್ಕೆ ಪಡೆದಿದ್ದು, ಹೆಚ್ಚಿನ ಸಂಗ್ರಹಕ್ಕಾಗಿ ಎಸ್‌ಡಿ ಕಾರ್ಡ್ ಆಯ್ಕೆ ಲಭ್ಯ ಇದೆ.

ನೋಕಿಯಾ G42 5G ಕ್ಯಾಮೆರಾ ರಚನೆ :
ನೋಕಿಯಾ G42 5G ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್‌ ಸೆನ್ಸಾರ್‌ನಲ್ಲಿದೆ. ಸೆಕೆಂಡರಿ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸೆಲ್‌ ಸೆನ್ಸರ್‌ ಸಾಮರ್ಥ್ಯ ಪಡೆದಿವೆ. ಇದರೊಂದಿಗೆ ಮುಂಭಾಗದಲ್ಲಿ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ. ಜೊತೆಗೆ ಎಲ್‌ಇಡಿ ಫ್ಲ್ಯಾಶ್‌, ನೈಟ್ ಮೋಡ್ 2.0, AI ಪೋರ್ಟ್ರೇಟ್ ಮತ್ತು OZO 3D ಆಡಿಯೊ ಕ್ಯಾಪ್ಚರ್ ಸೌಲಭ್ಯ ಇವೆ.

ನೋಕಿಯಾ G42 5G ಬ್ಯಾಟರಿ ಹಾಗೂ ಇತರೆ:
ನೋಕಿಯಾ G42 5G ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, 20W ಚಾರ್ಜರ್‌ ಪಡೆದಿದೆ. ಒಂದು ಪೂರ್ಣ ಚಾರ್ಜಿಂಗ್‌ನಲ್ಲಿ ಮೂರು ದಿನಗಳ ಬ್ಯಾಟರಿ ಬ್ಯಾಕ್‌ಅಪ್‌ ಒದಗಿಸಲಿದೆ. ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 3.5 ಎಂಎಂ ಆಡಿಯೊ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP52 ರೇಟಿಂಗ್‌ ಇದ್ದು, 5G SA / NSA, ಡ್ಯುಯಲ್ 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1 ಆಯ್ಕೆಗಳಿವೆ.

ನೋಕಿಯಾ G42 5G ಬೆಲೆ ಎಷ್ಟು ಹಾಗೂ ಲಭ್ಯತೆ ಮಾಹಿತಿ :
ನೋಕಿಯಾ G42 5G ಫೋನ್‌ 6GB + 128GB ಸಾಮರ್ಥ್ಯದ ಸಿಂಗಲ್‌ ವೇರಿಯಂಟ್‌ ಆಯ್ಕೆ ಪಡೆದಿದ್ದು, ಇದರ ಬೆಲೆಯು 12,599ರೂ. ಆಗಿದೆ. ಇನ್ನು ಈ ಫೋನ್ ಗ್ರೇ ಮತ್ತು ಪರ್ಪಲ್ ಬಣ್ಣಗಳ ಆಯ್ಕೆ ಪಡೆದಿದ್ದು, ಗ್ರಾಹಕರು ಅಮೆಜಾನ್‌ ಪ್ಲಾಟ್‌ಫಾರ್ಮ್ ಮೂಲಕ ಖರೀದಿ ಮಾಡಬಹುದು.

Best Mobiles in India

English summary
Nokia G42 5G goes on sale today via amazon. check Price and features details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+