ನಾಳೆ ನೋಕಿಯಾದ ಈ ಸ್ಮಾರ್ಟ್‌ಫೋನ್ ಅಗ್ಗದ ಬೆಲೆಯಲ್ಲಿ ಖರೀದಿಗೆ ಲಭ್ಯ!
ನೋಕಿಯಾ ಕಂಪನಿಯು ಇತ್ತೀಚಿಗೆ ಬಿಡುಗಡೆ ಮಾಡಿರುವ ನೋಕಿಯಾ G42 5G ಫೋನಿನ 4 GB RAM +128 GB ವೇರಿಯಂಟ್ ಈಗಾಗಲೇ ಕಲರ್ ಹಾಗೂ ಬೆಲೆಯಿಂದ ಗ್ರಾಹಕರ ಗಮನ ಸೆಳೆದಿದೆ. ನಾಳೆ (ಮಾರ್ಚ್ 8 ರಂದು) ಅಮೆಜಾನ್ ಇ ಕಾಮರ್ಸ್ ತಾಣದಲ್ಲಿ ಈ ಫೋನಿನ ಫಸ್ಟ್ ಸೇಲ್ ಪ್ರಾರಂಭ ಆಗಲಿದೆ.
ಹೌದು, ನೋಕಿಯಾ ಸಂಸ್ಥೆಯ ಇತ್ತೀಚಿನ ನೋಕಿಯಾ G42 5G ಫೋನಿನ 4 GB RAM +128 GB ವೇರಿಯಂಟ್ ಫೋನಿನ ಫಸ್ಟ್ ಸೇಲ್ ಮಾರ್ಚ್ 8 ರಂದು ಶುರುವಾಗಿಲಿದೆ. ಖರೀದಿದಾರರಿಗೆ ಅಮೆಜಾನ್ ತಾಣದಲ್ಲಿ ಖರೀದಿ ಮಾಡಬಹುದಾಗಿದ್ದು, ಈ ಫೋನಿನ ಬೆಲೆಯು 9,999ರೂ. ಗಳು ಆಗಿದೆ.

ಅಂದಹಾಗೆ ಈ ಫೋನ್ ಸ್ನಾಪ್‌ಡ್ರಾಗನ್ 480+ 8nm SoC ಪ್ರೊಸೆಸರ್ ಪಡೆದಿದ್ದು, ಇದರ ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ಅದೇ ರೀತಿ ಈ ಫೋನ್ 5000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಕೂಡಾ ಹೊಂದಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ನೋಕಿಯಾ G42 5G - ಫೀಚರ್ಸ್
ನೋಕಿಯಾ G42 5G ಫೋನಿನ ನೂತನ ವೇರಿಯಂಟ್ 6.56 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಪಡೆದಿದೆ. ಈ ಡಿಸ್‌ಪ್ಲೇಯು 720 x 1612 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯ ವನ್ನು ಪಡೆದುಕೊಂಡಿದೆ. ಜೊತೆಗೆ ಡಿಸ್‌ಪ್ಲೇಯು 20:9 ರಚನೆಯ ಅನುಪಾತವನ್ನು ಒಳಗೊಂಡಿದ್ದು, 90Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದೆ. ಇದಲ್ಲದೆ ಡಿಸ್‌ಪ್ಲೇ 450 ನಿಟ್ಸ್ ಬ್ರೈಟ್‌ನೆಸ್ ಹೊಂದಿದ್ದು. ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಇದೆ.
ಹಾಗೆಯೇ ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ 8nm SoC ಪ್ರೊಸೆಸರ್ ಪವರ್ ಜೊತೆಗೆ ಲಭ್ಯ ಇದ್ದು, ಪೂರಕವಾಗಿ ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 4GB RAM (2 GB ವರ್ಚುವಲ್ RAM) ಮತ್ತು 128 GB ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯ. ಇದರೊಂದಿಗೆ ಮೆಮೊರಿ ಕಾರ್ಡ್ ಬೆಂಬಲದೊಂದಿಗೆ 1 TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ.
ನೋಕಿಯಾ G42 5G ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್ ಸೆನ್ಸಾರ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ FF ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಈ ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದಕ್ಕೆ ಅನುಗುಣವಾಗಿ 20W ವೇಗದ ಚಾರ್ಜಿಂಗ್ ಸಪೋರ್ಟ್ ಜೊತೆಗೆ ಕೆಲಸ ನಿರ್ವಹಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G SA / NSA, ಡ್ಯುಯಲ್ 4G VoLTE, Wi-Fi 802.11 ac (2.4GHz + 5GHz), ಬ್ಲೂಟೂತ್ 5.1, GPS/ GLONASS/ Beidou, USB ಟೈಪ್-C 2.0 ಬೆಂಬಲಿಸಲಿದೆ. ಇದು ಪರ್ಪಲ್ ಮತ್ತು ಸೋ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯ.


Click it and Unblock the Notifications








