Home
ಸುದ್ದಿಜಾಲ

ಭಾರತದಲ್ಲಿ ಬಹುನಿರೀಕ್ಷಿತ ನೋಕಿಯಾ G42 5G ಫೋನ್‌ ಲಾಂಚ್‌, ಸಖತ್‌ ಸ್ಟೈಲಿಶ್!

ನೋಕಿಯಾದ ಸ್ಮಾರ್ಟ್‌ಫೋನ್‌ಗಳಿಗೆ ಇತ್ತೀಚಿಗೆ ಹೆಚ್ಚಿನ ಬೇಡಿಕೆ ನಿರ್ಮಾಣ ಆಗಿದ್ದು, ಈ ನಡುವೆ ಹೊಸ ಹೊಸ ನೋಕಿಯಾ ಸ್ಮಾರ್ಟ್‌ಫೋನ್‌ಗಳು ಲಾಂಚ್‌ ಆಗುತ್ತಿವೆ. ಈ ನಡುವೆ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್‌ ಆಗಿದ್ದ ನೋಕಿಯಾ G42 5G ಸ್ಮಾರ್ಟ್‌ಫೋನ್‌ ಅನ್ನು ಭಾರತದಲ್ಲಿ ಅನಾವರಣ ಮಾಡಲಾಗಿದೆ.

ಹೌದು, HMD ಗ್ಲೋಬಲ್ ನೋಕಿಯಾ G42 5G ಅನ್ನು ಲಾಂಚ್ ಮಾಡಿದೆ. ಈ ಫೋನ್ ನೋಕಿಯಾದ G ಸರಣಿ ಫೋನ್‌ ಆಗಿದ್ದು, 90Hz ರಿಫ್ರೆಶ್‌ ರೇಟ್‌ ಹಾಗೂ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್ ಬಲ ಪಡೆದುಕೊಂಡಿದೆ. ಅಷ್ಟೇ ಅಲ್ಲದೆ 8MP ಸೆಲ್ಫಿ ಕ್ಯಾಮೆರಾ ಆಯ್ಕೆ ಸಹ ಇದೆ. ಹಾಗಿದ್ರೆ, ಈ ಫೋನ್‌ನ ಪ್ರಮುಖ ಫೀಚರ್ಸ್‌ ಹಾಗೂ ಬೆಲೆ ವಿವರದ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡಲಾಗಿದೆ ಓದಿರಿ.

ಭಾರತದಲ್ಲಿ ಬಹುನಿರೀಕ್ಷಿತ ನೋಕಿಯಾ G42 5G ಫೋನ್‌ ಲಾಂಚ್‌, ಸಖತ್‌ ಸ್ಟೈಲಿಶ್!

ನೋಕಿಯಾ G42 5G ಡಿಸ್‌ಪ್ಲೇ ವಿವರ: ಈ ಫೋನ್ 6.56 ಇಂಚಿನ ಹೆಚ್‌ಡಿ+ ಡಿಸ್‌ಪ್ಲೇ ಆಯ್ಕೆ ಪಡೆದುಕೊಂಡಿದ್ದು, ಇದು 720 x 1612 ಪಿಕ್ಸೆಲ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿದೆ. ಜೊತೆಗೆ ಈ ಫೋನ್ 90Hz ರಿಫ್ರೆಶ್ ರೇಟ್ ಆಯ್ಕೆ ಪಡೆದಿದ್ದು, 450 ನಿಟ್ಸ್ ಕನಿಷ್ಠ ಹಾಗೂ 560 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ನೊಂದಿಗೆ ಕಾಣಿಸಿಕೊಂಡಿದೆ. ಇದರೊಂದಿಗೆ ಗೊರಿಲ್ಲಾ ಗ್ಲಾಸ್ 3 ಮೂಲಕ ಹೆಚ್ಚಿನ ರಕ್ಷಣೆ ಹೊಂದಿದೆ.

ನೋಕಿಯಾ G42 5G ಪ್ರೊಸೆಸರ್ ಮಾಹಿತಿ: ಇದರ ಪ್ರೊಸೆಸರ್‌ ಬಗ್ಗೆ ಹೇಳುವುದಾದರೆ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 480+ ಪ್ರೊಸೆಸರ್, 8nm ಮೊಬೈಲ್ ಪ್ಲಾಟ್‌ಫಾರ್ಮ್ ಜೊತೆಗೆ ಅಡ್ರಿನೋ 619 GPU ಬಲ ಪಡೆದುಕೊಂಡಿದೆ. ಅಷ್ಟೇ ಅಲ್ಲದೆ 6GB RAM, 128GB ಇಂಟರ್‌ ಸ್ಟೋರೇಜ್‌ ಆಯ್ಕೆ ನೀಡಲಾಗಿದ್ದು ಹೆಚ್ಚುವರಿ ಸ್ಟೋರೇಜ್‌ಗಾಗಿ SD ಕಾರ್ಡ್ ಆಯ್ಕೆ ನೀಡಲಾಗಿದ್ದು, 1TB ವರೆಗೆ ಹೆಚ್ಚಿಗೆ ಮಾಡಬಹುದಾಗಿದೆ. ಈ ಫೋನ್‌ ಆಂಡ್ರಾಯ್ಡ್ 13ನಲ್ಲಿ ರನ್‌ ಆಗಲಿದೆ.

ನೋಕಿಯಾ G42 5G ಕ್ಯಾಮೆರಾ ರಚನೆ : ಈ ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದ್ದು, f/1.8 ದ್ಯುತಿರಂಧ್ರದೊಂದಿಗೆ 50 ಮೆಗಾಪಿಕ್ಸೆಲ್‌ AF ಮುಖ್ಯ ಕ್ಯಾಮೆರಾ, 2 ಮೆಗಾಪಿಕ್ಸೆಲ್‌ ಡೀಪ್‌ ಮತ್ತು 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಸೆನ್ಸರ್‌ ಹೊಂದಿದೆ. ಇದರೊಂದಿಗೆ ಎಲ್‌ಇಡಿ ಫ್ಲ್ಯಾಶ್‌, ನೈಟ್ ಮೋಡ್ 2.0, AI ಪೋರ್ಟ್ರೇಟ್ ಮತ್ತು OZO 3D ಆಡಿಯೊ ಕ್ಯಾಪ್ಚರ್ ಸೌಲಭ್ಯ ಸಹ ಈ ಫೋನ್‌ನಲ್ಲಿದೆ. ಜೊತೆಗೆ 8 ಮೆಗಾಪಿಕ್ಸೆಲ್‌ FF ಫ್ರಂಟ್ ಕ್ಯಾಮೆರಾ ಆಯ್ಕೆ ವಿಶೇಷ ಎನಿಸಿದೆ.

ನೋಕಿಯಾ G42 5G ಬ್ಯಾಟರಿ ಸಾಮರ್ಥ್ಯ ಹಾಗೂ ಇತರೆ: ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಒಂದು ಪೂರ್ಣ ಚಾರ್ಜಿಂಗ್‌ನಲ್ಲಿ ಮೂರು ದಿನಗಳ ಬ್ಯಾಟರಿ ಬ್ಯಾಕಪ್‌ ನೀಡಲಿದೆ. ಜೊತೆಗೆ ತ್ವರಿತ ರೀಚಾರ್ಜ್‌ಗಾಗಿ 20W ವೇಗದ ಚಾರ್ಜಿಂಗ್ (QC3.0 & PD3.0) ಅನ್ನು ಬೆಂಬಲಿಸುತ್ತದೆ. ಇದು ಜೆಲ್ಲಿ ಕೇಸ್ ಮತ್ತು ಬಾಕ್ಸ್‌ನಲ್ಲಿ 20W ಚಾರ್ಜರ್‌ನೊಂದಿಗೆ ಪ್ಯಾಕ್‌ ಆಗಿದೆ.

ಇದರೊಂದಿಗೆ ಈ ಫೋನ್‌ ಹೈಬ್ರಿಡ್ ಡ್ಯುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೊ ಎಸ್ಡಿ) ಆಯ್ಕೆ ಹಾಗೂ 3.5 ಎಂಎಂ ಆಡಿಯೊ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP52 ರೇಟಿಂಗ್‌ ಇದ್ದು, 5G SA / NSA, ಡ್ಯುಯಲ್ 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್/ ಗ್ಲೋನಾಸ್, ಯುಎಸ್‌ಬಿ ಟೈಪ್-ಸಿC 2.0 ಪೋರ್ಟ್‌ನ ಕನೆಕ್ಟಿವಿಟಿ ಬೆಂಬಲ ಪಡೆದಿದೆ.

ನೋಕಿಯಾ G42 5G ಬೆಲೆ ಹಾಗೂ ಲಭ್ಯತೆ: ಈ ಫೋನ್‌ 6GB + 128GB ನ ಒಂದೇ ವೇರಿಯಂಟ್‌ನಲ್ಲಿ ಕಾಣಿಸಿಕೊಂಡಿದ್ದು,12,599ರೂ.ಗಳ ಬೆಲೆ ಹೊಂದಿದೆ. ಹಾಗೆಯೇ ಗ್ರೇ ಮತ್ತು ಸೋ ಪರ್ಪಲ್ ಬಣ್ಣಗಳಲ್ಲಿ ಇದು ಲಭ್ಯ ಇದೆ. ಈ ಫೋನ್‌ ಅನ್ನು ನೀವು ಸೆಪ್ಟೆಂಬರ್ 15 ರಿಂದ ಅಮೆಜಾನ್‌ ಮೂಲಕ ಖರೀದಿ ಮಾಡಬಹುದು.
C3.0 & PD3.0) ಅನ್ನು ಬೆಂಬಲಿಸುತ್ತದೆ. ಇದು ಜೆಲ್ಲಿ ಕೇಸ್ ಮತ್ತು ಬಾಕ್ಸ್‌ನಲ್ಲಿ 20W ಚಾರ್ಜರ್‌ನೊಂದಿಗೆ ಪ್ಯಾಕ್‌ ಆಗಿದೆ.

ಇದರೊಂದಿಗೆ ಈ ಫೋನ್‌ ಹೈಬ್ರಿಡ್ ಡ್ಯುಯಲ್ ಸಿಮ್ (ನ್ಯಾನೋ + ನ್ಯಾನೋ / ಮೈಕ್ರೊ ಎಸ್ಡಿ) ಆಯ್ಕೆ ಹಾಗೂ 3.5 ಎಂಎಂ ಆಡಿಯೊ ಜಾಕ್, ಸೈಡ್-ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸಾರ್, IP52 ರೇಟಿಂಗ್‌ ಇದ್ದು, 5G SA / NSA, ಡ್ಯುಯಲ್ 4G VoLTE, ವೈ-ಫೈ 802.11 ac (2.4GHz + 5GHz), ಬ್ಲೂಟೂತ್ ಆವೃತ್ತಿ 5.1, ಜಿಪಿಎಸ್/ ಗ್ಲೋನಾಸ್, ಯುಎಸ್‌ಬಿ ಟೈಪ್-ಸಿC 2.0 ಪೋರ್ಟ್‌ನ ಕನೆಕ್ಟಿವಿಟಿ ಬೆಂಬಲ ಪಡೆದಿದೆ.

ಭಾರತದಲ್ಲಿ ಬಹುನಿರೀಕ್ಷಿತ ನೋಕಿಯಾ G42 5G ಫೋನ್‌ ಲಾಂಚ್‌, ಸಖತ್‌ ಸ್ಟೈಲಿಶ್!

ನೋಕಿಯಾ G42 5G ಬೆಲೆ ಹಾಗೂ ಲಭ್ಯತೆ: ಈ ಫೋನ್‌ 6GB + 128GB ನ ಒಂದೇ ವೇರಿಯಂಟ್‌ನಲ್ಲಿ ಕಾಣಿಸಿಕೊಂಡಿದ್ದು, 12,599ರೂ.ಗಳ ಬೆಲೆ ಹೊಂದಿದೆ. ಹಾಗೆಯೇ ಗ್ರೇ ಮತ್ತು ಪರ್ಪಲ್ ಬಣ್ಣಗಳಲ್ಲಿ ಇದು ಲಭ್ಯ ಇದೆ. ಈ ಫೋನ್‌ ಅನ್ನು ನೀವು ಸೆಪ್ಟೆಂಬರ್ 15 ರಿಂದ ಅಮೆಜಾನ್‌ ಮೂಲಕ ಖರೀದಿ ಮಾಡಬಹುದು.

Best Mobiles in India

English summary
HMD Global has launched the Nokia G42 5G. This phone is a Nokia G series phone and is powered by a 90Hz refresh rate and Snapdragon 480+ SoC processor.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+