ಬಹುನಿರೀಕ್ಷಿತ ನೋಕಿಯಾ G50 ಸ್ಮಾರ್ಟ್‌ಫೋನ್ ಫೀಚರ್ಸ್‌ ಲೀಕ್!

|

ಮೊಬೈಲ್‌ ಮಾರುಕಟ್ಟೆಯಲ್ಲಿ ಎವರ್‌ಗ್ರೀನ್ ಸಂಸ್ಥೆಯಾಗಿ ಗುರುತಿಸಿಕೊಂಡಿರುವ ನೋಕಿಯಾ ಹಲವು ಶ್ರೇಣಿಯ ಫೋನ್‌ಗಳ ಮೂಲಕ ಗ್ರಾಹಕರ ಮನ ಗೆದ್ದಿದೆ. ಆ ಪೈಕಿ ಬಜೆಟ್‌ ದರದಿಂದ ಹೈ ಎಂಡ್ ಮಾಡೆಲ್‌ ವರೆಗೂ ಭಿನ್ನ ಫೋನ್‌ಗಳ ಲಿಸ್ಟ್‌ ಹೊಂದಿದೆ. ನೋಕಿಯಾದ G ಸರಣಿಯ ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಪ್ರೈಸ್‌ಟ್ಯಾಗ್ ಹೊಂದದ್ದು, ಆಕರ್ಷಕ ಫೀಚರ್ಸ್‌ಗಳನ್ನು ಒಳಗೊಂಡಿವೆ. ಅದರ ಮುಂದಿನ ಭಾಗವಾಗಿ ಕಂಪನಿಯ G ಸರಣಿಯ ಮತ್ತೊಂದು ಅಗ್ಗದ ಫೋನ್ ಅನಾವರಣ ಮಾಡಲು ಸಜ್ಜಾಗಿದೆ.

ಬಹುನಿರೀಕ್ಷಿತ ನೋಕಿಯಾ G50 ಸ್ಮಾರ್ಟ್‌ಫೋನ್ ಫೀಚರ್ಸ್‌ ಲೀಕ್!

ಹೌದು, ನೋಕಿಯಾ ಹೆಚ್‌ಎಮ್‌ಡಿ ಗ್ಲೋಬಲ್ ನೂತನವಾಗಿ ನೋಕಿಯಾ G50 ಸ್ಮಾರ್ಟ್‌ಫೋನ್ ಲಾಂಚ್ ಮಾಡಲಿದೆ. ಈಗಾಗಲೇ ನೋಕಿಯಾ G50 ಫೋನ್ ಫೋನ್‌ ಪ್ರಿಯರನ್ನು ಆಕರ್ಷಿಸಿದ್ದು, ಬರಲಿರುವ ಹೊಸ ನೋಕಿಯಾ G50 ಸ್ಮಾರ್ಟ್‌ಫೋನ್ ಅಪ್‌ಡೇಟ್ ಫೀಚರ್ಸ್‌ಗಳೊಂದಿದೆ ಲಗ್ಗೆ ಇಡಲಿದೆ ಎನ್ನಲಾಗಿದೆ. ಈ ಪೋನಿನಲ್ಲಿ ಬಿಗ್ ಬ್ಯಾಟರಿ, ಹೆಚ್ಚಿನ ರೆಸಲ್ಯೂಶನಿನ ಡಿಸ್‌ಪ್ಲೇ, ಅಧಿಕ RAM ನಂತಹ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದು ಬಂದಿದೆ.

ಬಹುನಿರೀಕ್ಷಿತ ನೋಕಿಯಾ G50 ಸ್ಮಾರ್ಟ್‌ಫೋನ್ ಫೀಚರ್ಸ್‌ ಲೀಕ್!

ಟ್ವಿಟ್ಟರ್ ನಲ್ಲಿನ ಲೀಕ್ ಮಾಹಿತಿ ಪ್ರಕಾರ ನೋಕಿಯಾ G50 ರೌಂಡ್ ಕ್ಯಾಮೆರಾ ರಚನೆಯೊಂದಿಗೆ ಬರಲಿದೆ. ಇದು ಮೂರು ಕ್ಯಾಮೆರಾ ಸೆನ್ಸಾರ್ ಹೊಂದಿರಲಿದೆ. ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್, ಸೆಕೆಂಡರಿ ಕ್ಯಾಮೆರಾವು 5 ಮೆಗಾ ಪಿಕ್ಸಲ್ ಮತ್ತು ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯ ದಲ್ಲಿ ಇರಲಿದೆ ಎಂದು ಹೇಳಲಾಗಿದೆ. ಹಾಗೆಯೇ ಫ್ಲಾಶ್ ಲೈಟ್ ಪಡೆದಿರಲಿದೆ. ಇನ್ನು ಮುಂಭಾಗದ ಸೆಲ್ಫಿ ಕ್ಯಾಮೆರಾವು 8 ಮೆಗಾ ಪಿಕ್ಸಲ್ ಸಾಮರ್ಥ್ಯ ಹೊಂದಿರಲಿದೆ ಎನ್ನಲಾಗಿದೆ.

ಲೀಕ್ ಮಾಹಿತಿಯಂತೆ ನೋಕಿಯಾ G50 ಫೋನ್‌ 6.82 ಇಂಚಿನ ಡಿಸ್‌ಪ್ಲೇಯನ್ನು ಹೊಂದಿರಲಿದ್ದು, ಈ ಡಿಸ್‌ಪ್ಲೇಯು 1640 × 720 ಪಿಕ್ಸಲ್ ರೆಸಲ್ಯೂಶನ್ ಹೊಂದಿರಲಿದೆ ಎಂದು ಹೇಳಲಾಗಿದೆ. ಇನ್ನು ಡಿಸ್‌ಪ್ಲೇಯು ಎಲ್‌ಸಿಡಿ ಮಾದರಿಯಲ್ಲಿದ್ದು, ವಾಟರ್‌ಡ್ರಾಪ್ ಸ್ಟೈಲ್‌ ನಾಚ್ ಪಡೆದಿರಲಿದೆ. ಇದರೊಂದಿಗೆ ಈ ಫೋನ್ ಫಿಂಗರ್‌ಪ್ರಿಂಟ್ ಸೈಡ್-ಮೌಂಟೆಡ್ ಆಯ್ಕೆ ಪಡೆದಿರಲಿದೆ. ಇನ್ನು ಈ ಫೋನ್ ಎಸ್‌ಒಸಿ ಸ್ನಾಪ್‌ಡ್ರಾಗನ್ 480 5 ಜಿ ಪ್ರೊಸೆಸರ್‌ ಬಲವನ್ನು ಪಡೆದಿರಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಇರಲಿದೆ. ಹಾಗೆಯೇ ಈ ಫೋನ್ 4GB RAM ಮತ್ತು 128 GB ಆಂತರಿಕ ಸ್ಟೋರೇಜ್ ಪಡೆದಿರಲಿದ್ದು, ಎಸ್‌ಡಿ ಕಾರ್ಡ್‌ ಮೂಲಕ ಬಾಹ್ಯ ಮೆಮೊರಿ ವಿಸ್ತರಿಸಲು ಅವಕಾಶ ಹೊಂದಿರಲಿದೆ ಎನ್ನಲಾಗಿದೆ.

ಬಹುನಿರೀಕ್ಷಿತ ನೋಕಿಯಾ G50 ಸ್ಮಾರ್ಟ್‌ಫೋನ್ ಫೀಚರ್ಸ್‌ ಲೀಕ್!

ಇನ್ನು ಈ ಫೋನ್ 4850mAh ಬ್ಯಾಟರಿ ಸಾಮರ್ಥ್ಯವನ್ನು ಒಳಗೊಂಡಿದ್ದು, ಅದಕ್ಕೆ ಪೂರಕವಾದ ಫಾಸ್ಟ್ ಚಾರ್ಜಿಂಗ್ ನೀಡುವ ಸಾಧ್ಯತೆಗಳು ಇವೆ. ಇನ್ನು ಈ ಫೋನ್ 8,85mm ನಷ್ಟು ತೆಳುವಾದ ರಚನೆ ಪಡೆದಿದ್ದು, ಇದರ ತೂಕ 190 ಗ್ರಾಂ ಇರಲಿದೆ. ಹಾಗೆಯೇ ಬ್ಲೂಟೂತ್ 5.0, NFC ಮತ್ತು 5G ಅನ್ನು ಒಳಗೊಂಡಿದೆ. ಜೊತೆಗೆ USB C ಟೈಪ್ ಫೋರ್ಟ್‌ ಇರಲಿದ್ದು, 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಒಳಗೊಂಡಿರಲಿದೆ. ಈ ಫೋನ್ ಓಶಿಯನ್ ಬ್ಲೂ ಮತ್ತು ಮಿಡ್‌ನೈಟ್ ಬ್ಲ್ಯಾಕ್ ಬಣ್ಣದ ಆಯ್ಕೆಯಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳು ಇವೆ.

ನೋಕಿಯಾದ ಈ ಹೊಸ ಫೋನ್ ಸಾಫ್ಟ್‌ವೇರ್ ಅಪ್‌ಡೇಟ್‌ಗಳ ಮೇಲೆ 2 ವರ್ಷಗಳ ಗ್ಯಾರಂಟಿ ಮತ್ತು ಭದ್ರತಾ ಅಪ್‌ಡೇಟ್‌ಗಳ ಮೇಲೆ 3 ವರ್ಷದ ಗ್ಯಾರಂಟಿಯೊಂದಿಗೆ ಬರುತ್ತದೆ ಎಂದು ಲೀಕ್ ಮಾಹಿತಿಗಳಿಂದ ತಿಳಿದು ಬಂದಿದೆ. ಇದರ ಅಂದಾಜು ಬೆಲೆ EUR 230 ಎನ್ನಲಾಗಿದೆ (ಭಾರತದಲ್ಲಿ ಅಂದಾಜು 19,800ರೂ. ಎಂದು ಊಹಿಸಲಾಗಿದೆ).

ಇನ್ನು ನೋಕಿಯಾ ಕಂಪನಿಯು ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೋಕಿಯಾ G10 ಸ್ಮಾರ್ಟ್‌ಫೋನ್‌ 720x1,600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5-ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G 25 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4GB RAM ಮತ್ತು 32GB, 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿದ್ದು, ಇದರಲ್ಲಿ ,ಮುಖ್ಯ ಕ್ಯಾಮೆರಾ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

Most Read Articles
Best Mobiles in India

English summary
NOKIA G50 Specifications Leaked: Expected Price.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X