ಇಂದು ನೋಕಿಯಾ G60 5G ಫೋನ್ ಫಸ್ಟ್ ಸೇಲ್!..ಆಫರ್ ಏನಿದೆ?..ಬೆಲೆ ಎಷ್ಟು?
ಜನಪ್ರಿಯ ನೋಕಿಯಾ ಸಂಸ್ಥೆಯು ಭಾರತದಲ್ಲಿ ಇತ್ತೀಚಿಗಷ್ಟೆ ಬಿಡುಗಡೆ ಮಾಡಿರುವ ನೋಕಿಯಾ G60 5G (Nokia G60 5G) ಸ್ಮಾರ್ಟ್‌ಫೋನ್ ಫೋನ್ ಪ್ರಿಯರ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್ ಇಂದು (ನವೆಂಬರ್ 8) ಮೊದಲ ಮಾರಾಟ ಪ್ರಾರಂಭಿಸಲಿದೆ. ಅಂದಹಾಗೆ ನೋಕಿಯಾದ ಈ 5G ಫೋನ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ.

ಹೌದು, ನೋಕಿಯಾ ಕಂಪೆನಿ ಹೊಸ ನೋಕಿಯಾ G60 5G ಸ್ಮಾರ್ಟ್‌ಫೋನ್ ಇಂದು ಫಸ್ಟ್ ಸೇಲ್ ಶುರು ಮಾಡಲಿದೆ. ಇನ್ನು ಈ ಫೋನ್ ಅಧಿಕೃತ ನೋಕಿಯಾ ವೆಬ್‌ಸೈಟ್ ಹಾಗೂ ಪ್ರಮುಖ ರಿಟೇಲ್ ಸ್ಟೋರ್‌ಗಳಲ್ಲಿ ಖರೀದಿಗೆ ಲಭ್ಯವಾಗಲಿದೆ. ಆರಂಭಿಕ 6GB + 128GB ಸ್ಟೋರೇಜ್ ವೇರಿಯಂಟ್ ಬೆಲೆಯು 29,999ರೂ. ಆಗಿದೆ. ಈ ಫೋನ್ ಬ್ಲ್ಯಾಕ್ ಮತ್ತು ಐಸ್ ಬಣ್ಣಗಳ ಆಯ್ಕೆಯನ್ನು ಪಡೆದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ನೋಕಿಯಾ G60 5G ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಡಿಸ್‌ಪ್ಲೇ 500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದಿದೆ.

ಪ್ರೊಸೆಸರ್ ಪವರ್ ಯಾವುದು?
ನೋಕಿಯಾ G60 5G ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಾರ್ಯನಿರ್ವಹಿಸಲಿದೆ, ಅಲ್ಲದೆ ಕಂಪನಿಯು ಮೂರು OS ಅಪ್‌ಗ್ರೇಡ್‌ಗಳನ್ನು ನೀಡುವುದಾಗಿ ಕಂಪೆನಿ ಹೇಳಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್ ಏನಿರಲಿದೆ?
ನೋಕಿಯಾ G60 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಕೂಡ ಹೊಂಡಿದೆ.

ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್ 2.0, ಡಾರ್ಕ್ ವಿಷನ್ ಮತ್ತು AI ಪೋರ್ಟ್ರೇಟ್‌ನಂತಹ ಇಮೇಜಿಂಗ್ ಫೀಚರ್ಸ್‌ಗಳನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?
ನೋಕಿಯಾ G60 5G ಸ್ಮಾರ್ಟ್‌ಫೋನ್ 20W ವೇಗದ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್ ಬ್ಯಾಂಡ್ Wi-Fi, ಬ್ಲೂಟೂತ್ v5.1, ಮತ್ತು NFCಯನ್ನು ಬೆಂಬಲಿಸುತ್ತದೆ.

ಇದಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ 5G NSA ಆರ್ಕಿಟೆಕ್ಚರ್ ಅನ್ನು ಬಳಸುತ್ತದೆ. ಇದು ಜಿಯೀ ಟ್ರೂ 5G ಯೊಂದಿಗೆ ಹೊಂದಾಣಿಕೆಗಾಗಿ 5G SA ತಂತ್ರಜ್ಞಾನವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ
ನೋಕಿಯಾ G60 5G ಸ್ಮಾರ್ಟ್‌ಫೋನ್ 6GB RAM ಮತ್ತು 128GB ವೇರಿಯಂಟ್ ಭಾರತದಲ್ಲಿ 29,999ರೂ. ಬೆಲೆಗೆ ಲಭ್ಯವಾಗಲಿದೆ. ಈ ಫೋನ್ ಇಂದು (ನವೆಂಬರ್ 8) ಫಸ್ಟ್ ಸೇಲ್ ಪ್ರಾರಂಭಿಸಿದ್ದು, ಗ್ರಾಹಕರು ನೋಕಿಯಾ ಕಂಪೆನಿಯ ಅಧಿಕೃತ ಸ್ಟೋರ್‌ನಿಂದ ಆರ್ಡರ್ ಮಾಡಬಹುದಾಗಿದೆ.


Click it and Unblock the Notifications








