Home
ಸುದ್ದಿಜಾಲ

ಭಾರತದಲ್ಲಿ ನೋಕಿಯಾ G60 5G ಫೋನ್‌ ಲಾಂಚ್‌! ಜಿಯೋ ಟ್ರೂ 5Gಗೆ ಬೆಂಬಲ!

ಮೊಬೈಲ್‌ ಜಗತ್ತಿನ ಎವರ್‌ಗ್ರೀನ್‌ ಬ್ರ್ಯಾಂಡ್‌ ಸ್ಮಾರ್ಟ್‌ಫೋನ್‌ ವಲಯದಲ್ಲಿಯೂ ತನ್ನದೇ ಆದ ಪ್ರಭಾವವನ್ನು ಹೊಂದಿದೆ. ಆಕರ್ಷಕ ವಿನ್ಯಾಸ ಹಾಗೂ ವಿಶೇಷ ಕ್ಯಾಮೆರಾ ಸೆಟ್‌ಅಪ್‌ಗಳ ಮೂಲಕ ನೋಕಿಯಾ ಮೊಬೈಲ್‌ಗಳು ಗಮನಸೆಳೆದಿವೆ. ಸದ್ಯ ಇದೀಗ ಭಾರತದ ಮಾರುಕಟ್ಟೆಯಲ್ಲಿ ನೋಕಿಯಾ G60 5G ಸ್ಮಾರ್ಟ್‌ಫೋನ್‌ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ 5G ನಾನ್-ಸ್ಟಾಂಡಲೋನ್ (NSA) ಆರ್ಕಿಟೆಕ್ಚರ್‌ಗೆ ಬೆಂಬಲವನ್ನು ಒಳಗೊಂಡಿದೆ. ಇದು ಜಿಯೋ ಟ್ರೂ 5G ಸ್ವತಂತ್ರ (SA) ಸಂಪರ್ಕಕ್ಕೆ ಬೆಂಬಲವನ್ನು ಸಹ ನೀಡಲಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಭಾರತದಲ್ಲಿ ಹೊಸ ನೋಕಿಯಾ G60 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 695 5G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 2 ದಿನಗಳ ಬ್ಯಾಟರಿ ಅವಧಿಯನ್ನು ಹೊಂದಿದೆ ಎಂದು ಹೇಳಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನೋಕಿಯಾ G60 5G ಸ್ಮಾರ್ಟ್‌ಫೋನ್‌ 6.58-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಮತ್ತು 20:9 ರಚನೆಯ ಅನುಪಾತವನ್ನು ಪಡೆದುಕೊಂಡಿದೆ. ಡಿಸ್‌ಪ್ಲೇ 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ, ಅಲ್ಲದೆ ಕಂಪನಿಯು ಮೂರು OS ಅಪ್‌ಗ್ರೇಡ್‌ಗಳನ್ನು ನೀಡುವುದಾಗಿ ಕಂಪೆನಿ ಹೇಳಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿರಲಿದೆ?

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಕೂಡ ಹೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಇನ್ನು ಕ್ಯಾಮೆರಾ ಫೀಚರ್ಸ್‌ಗಳಲ್ಲಿ ನೈಟ್ ಮೋಡ್ 2.0, ಡಾರ್ಕ್ ವಿಷನ್ ಮತ್ತು AI ಪೋರ್ಟ್ರೇಟ್‌ನಂತಹ ಇಮೇಜಿಂಗ್ ಫೀಚರ್ಸ್‌ಗಳನ್ನು ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಮತ್ತು ಇತರೆ ಫೀಚರ್ಸ್‌ಗಳೇನು?

ನೋಕಿಯಾ G60 5G ಸ್ಮಾರ್ಟ್‌ಫೋನ್‌ 20W ವೇಗದ ಚಾರ್ಜಿಂಗ್ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಡ್ಯುಯಲ್‌ ಬ್ಯಾಂಡ್ Wi-Fi, ಬ್ಲೂಟೂತ್ v5.1, ಮತ್ತು NFCಯನ್ನು ಬೆಂಬಲಿಸುತ್ತದೆ. ಇದಲ್ಲದೆ ಯುಎಸ್‌ಬಿ ಟೈಪ್-ಸಿ ಪೋರ್ಟ್ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಅನ್ನು ಸಹ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 5G NSA ಆರ್ಕಿಟೆಕ್ಚರ್ ಅನ್ನು ಬಳಸುತ್ತದೆ. ಇದು ಜಿಯೀ ಟ್ರೂ 5G ಯೊಂದಿಗೆ ಹೊಂದಾಣಿಕೆಗಾಗಿ 5G SA ತಂತ್ರಜ್ಞಾನವನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 29,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇದು ನೋಕಿಯಾ ಕಂಪೆನಿಯ ಅಧಿಕೃತ ಸ್ಟೋರ್‌ನಿಂದ ನವೆಂಬರ್ 7 ರವರೆಗೆ ಮುಂಗಡವಾಗಿ ಆರ್ಡರ್ ಮಾಡಲು ಲಭ್ಯವಿದೆ. ಈ ಅವಧಿಯಲ್ಲಿ ಗ್ರಾಹಕರು 3,599ರೂ. ಮೌಲ್ಯದ ನೋಕಿಯಾ ಪವರ್‌ ಇಯರ್‌ಬಡ್ಸ್‌ ಲೈಟ್‌ ಅನ್ನು ಪಡೆಯಬಹುದು. ಈ ಫೋನ್‌ ಕಪ್ಪು ಮತ್ತು ಐಸ್ ಬಣ್ಣದ ಆಯ್ಕೆಗಳಲ್ಲಿ ಬರುತ್ತದೆ. ಇದು ಇದೇ ನವೆಂಬರ್ 8 ರಂದು ನೋಕಿಯಾ.ಕಾಮ್‌ ಮತ್ತು ಪ್ರಮುಖ ಆನ್‌ಲೈನ್ ಪೋರ್ಟಲ್‌ಗಳ ಮೂಲಕ ಮಾರಾಟವಾಗಲಿದೆ.

Best Mobiles in India

English summary
Nokia G60 5G With 120Hz Display Launched in India: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+