ಭಾರತದಲ್ಲಿ ಮೊದಲ 5G ಫೋನ್ ಪರಿಚಯಿಸಲು ನೋಕಿಯಾ ಕಂಪೆನಿ ತಯಾರಿ!

|

ನೋಕಿಯಾ ಕಂಪೆನಿ ಮೊಬೈಲ್‌ ಮಾರುಕಟ್ಟೆಯ ಎವರ್‌ಗ್ರೀನ್‌ ಬ್ರ್ಯಾಂಡ್‌ ಆಗಿದೆ. ಭಾರತದ ಮಾರುಕಟ್ಟೆಯಲ್ಲಿ ಕೂಡ ನೋಕಿಯಾ ಕಂಪೆನಿಯ ಮೊಬೈಲ್‌ಗಳಿಗೆ ಭಾರಿ ಬೇಡಿಕೆಯಿದೆ. ಇದಕ್ಕೆ ತಕ್ಕಂತೆ ನೋಕಿಯಾ ಕಂಪೆನಿ ಹೊಸ ಮಾದರಿಯ ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಇದೀಗ ಭಾರತದಲ್ಲಿ ತನ್ನ ಮೊದಲ 5G ಫೋನ್‌ ಪರಿಚಯಿಸಲು ಸಿದ್ಧತೆ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗಲಿದೆ ಎಂದು ನೋಕಿಯಾ ಇಂಡಿಯಾ ವೆಬ್‌ಸೈಟ್‌ನಲ್ಲಿ ಲೈವ್‌ ಆಗಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಭಾರತದಲ್ಲಿ ನೋಕಿಯಾ G60 5G ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ನೋಕಿಯಾ ಕಂಪೆನಿ ಭಾರತದಲ್ಲಿ ಪರಿಚಯಿಸಲಿರುವ ಮೊದಲ 5G ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 695SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಪಡೆದಿರಲಿದೆ ಎನ್ನಲಾಗಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನಿರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಹೇಗಿದೆ?

ಡಿಸ್‌ಪ್ಲೇ ರಚನೆ ಹೇಗಿದೆ?

ನೋಕಿಯಾ G60 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ IPS LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ ವಾಟರ್‌ಡ್ರಾಪ್ ನಾಚ್ ಅನ್ನು ಹೊಂದಿದೆ. ಇದು 120Hz ರಿಫ್ರೆಶ್ ರೇಟ್‌ ಮತ್ತು 500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. ಜೊತೆಗೆ ಈ ಡಿಸ್‌ಪ್ಲೇ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ನೊಂದಿಗೆ ಬರಲಿದೆ ಎಂದು ವರದಿಯಾಗಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12OS ನಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೆ ಮೂರು ವರ್ಷಗಳ ಆಂಡ್ರಾಯ್ಡ್‌ ಒಎಸ್‌ ಅಪ್‌ಗ್ರೇಡ್‌ ಮತ್ತು ಮೂರು ವರ್ಷಗಳ ಮಾಸಿಕ ಸೆಕ್ಯುರ್‌ ಅಪ್ಡೇಟ್‌ ಅನ್ನು ಕೂಡ ನೀಡಲಿದೆ ಎಂದು ಹೇಳಲಾಗಿದೆ. ಹಾಗೆಯೇ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಅನ್ನು ಒಳಗೊಂಡಿರಲಿದೆ.

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ಕ್ಯಾಮೆರಾ ಸೆಟ್‌ಅಪ್‌ ಏನಿದೆ?

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅಲ್ಟ್ರಾ-ವೈಡ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಯೂನಿಟ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ G60 5G ಸ್ಮಾರ್ಟ್‌ಫೋನ್‌ 20W ವೇಗದ ಚಾರ್ಜಿಂಗ್‌ ಬೆಂಬಲಿಸುವ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿರಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ eSIM ಬೆಂಬಲದೊಂದಿಗೆ ಡ್ಯುಯಲ್ ಸಿಮ್, 5G, ವೈಫೈ 6, ಬ್ಲೂಟೂತ್ 5.1, GPS, USB ಟೈಪ್-ಸಿ ಪೋರ್ಟ್ ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ G60 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬೆಲೆ ಎಷ್ಟಿರಲಿದೆ ಎಂಬುದರ ಮಾಹಿತಿ ಇನ್ನು ಕೂಡ ಬಹಿರಂಗವಾಗಿಲ್ಲ. ಆದರೆ ಈ ಸ್ಮಾರ್ಟ್‌ಫೋನ್‌ ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆಯಾಗುವುದ ಕನ್ಫರ್ಮ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌ ಮತ್ತು ಐಸ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಯ ದಿನಾಂಕ ಸದ್ಯದಲ್ಲೇ ಬಹಿರಂಗವಾಗುವ ಸಾಧ್ಯತೆಯಿದೆ.

Best Mobiles in India

English summary
Nokia is set to launch its first-ever 5G phone in India soon

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X