Home
ಸುದ್ದಿಜಾಲ

ನೋಕಿಯಾ ಕಂಪೆನಿಯಿಂದ ಮೂರು ಹೊಸ ಬಜೆಟ್ ಸ್ಮಾರ್ಟ್‌ಫೋನ್‌ ಬಿಡುಗಡೆ!

ನೋಕಿಯಾ ಕಂಪೆನಿ ಮೊಬೈಲ್‌ ಮಾರುಕಟ್ಟೆಯ ಎವರ್‌ಗ್ರೀನ್‌ ಬ್ರಾಂಡ್‌ ಎನಿಸಿಕೊಂಡಿದೆ. ಮೊಬೈಲ್‌ ಮಾರುಕಟ್ಟೆಯಲ್ಲಿ ನೋಕಿಯಾ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಂದ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಪ್ರಸಿದ್ಧಿ ಪಡೆದಿದೆ. ಸದ್ಯ ಇದೀಗ ತನ್ನ ಮೂರು ಹೊಸ ಬಜೆಟ್ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳನ್ನು ನೋಕಿಯಾ C2 2 ನೇ ಆವೃತ್ತಿ, ನೋಕಿಯಾ C21 ಮತ್ತು ನೋಕಿಯಾ C21 ಪ್ಲಸ್‌ ಸ್ಮಾರ್ಟ್‌ಫೋನ್‌ ಎಂದು ಹೆಸರಿಸಲಾಗಿದೆ. ಇದರಲ್ಲಿ ನೋಕಿಯಾ C2 2 ನೇ ಆವೃತ್ತಿ ಮತ್ತು ನೋಕಿಯಾ C21 ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿವೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಮೂರು ಹೊಸ ಬಜೆಟ್‌ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ವಿಭಿನ್ನ ಮಾದರಿಯ ಫೀಚರ್ಸ್‌ಗಳನ್ನು ಪಡೆದುಕೊಂಡಿವೆ. ಇದರಲ್ಲಿ ನೋಕಿಯಾ C21 ಮತ್ತು ನೋಕಿಯಾ C21 ಪ್ಲಸ್‌ ಸ್ಮಾರ್ಟ್‌ಫೋನ್‌ಗಳು 6.5-ಇಂಚಿನ HD+ ಡಿಸ್ಪ್ಲೇಯನ್ನು ಹೊಂದಿವೆ. ಆದರೆ ನೋಕಿಯಾ C2 2 ನೇ ಆವೃತ್ತಿ ಸ್ಮಾರ್ಟ್‌ಫೋನ್‌ 5.7 ಇಂಚಿನ FWVGA ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಮೂರು ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು? ಇವುಗಳ ಬೆಲೆ ಹೇಗಿದೆ ಅನ್ನೊದರ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ನೋಕಿಯಾ C2 2ನೇ ಆವೃತ್ತಿ ಸ್ಮಾರ್ಟ್‌ಫೋನ್‌

ನೋಕಿಯಾ C2 2ನೇ ಆವೃತ್ತಿ ಸ್ಮಾರ್ಟ್‌ಫೋನ್‌

ನೋಕಿಯಾ C2 2ನೇ ಆವೃತ್ತಿ ಸ್ಮಾರ್ಟ್‌ಫೋನ್‌ 5.7 ಇಂಚಿನ FWVGA ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಡ್-ಕೋರ್ ಮೀಡಿಯಾಟೆಕ್‌ SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 1GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಹಿಂಬದಿಯಲ್ಲಿ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ಕ್ಯಾಮೆರಾ ಹೊಂದಿದೆ. ಇದು ಫಿಕ್ಸ್ಡ್‌ ಫೋಕಸ್ ಲೆನ್ಸ್ ಮತ್ತು ಎಲ್‌ಇಡಿ ಫ್ಲ್ಯಾಷ್ ಅನ್ನು ಹೊಂದಿದೆ. ಇದಲ್ಲದೆ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 2400mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ನೋಕಿಯಾ C21 ಸ್ಮಾರ್ಟ್‌ಫೋನ್‌

ನೋಕಿಯಾ C21 ಸ್ಮಾರ್ಟ್‌ಫೋನ್‌

ನೋಕಿಯಾ C21 ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್‌ ಯೂನಿಸೋಕ್‌ SC9863A SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB ಮತ್ತು 3GB RAM ಆಯ್ಕೆಗಳ್ಳನ್ನು ಹೊಂದಿದ್ದು 32GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು ಫೀಕ್ಸ್ಡ್ ಫೋಕಸ್ ಲೆನ್ಸ್ ಮತ್ತು ಎಲ್ಇಡಿ ಫ್ಲ್ಯಾಷ್‌ನೊಂದಿಗೆ ಬರಲಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 3000mAh ಬ್ಯಾಟರಿಯನ್ನು ಹೊಂದಿದೆ.

ನೋಕಿಯಾ C21 ಪ್ಲಸ್‌ ಸ್ಮಾರ್ಟ್‌ಫೋನ್‌

ನೋಕಿಯಾ C21 ಪ್ಲಸ್‌ ಸ್ಮಾರ್ಟ್‌ಫೋನ್‌

ನೋಕಿಯಾ C21 ಪ್ಲಸ್‌ ಸ್ಮಾರ್ಟ್‌ಫೋನ್‌ 6.5 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಯೂನಿಸೋಕ್‌ SC9863A SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 11 (Go Edition) ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 2GB RAM ಮತ್ತು 32GB ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ 4000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ C2 2ನೇ ಆವೃತ್ತಿಯ ಸ್ಮಾರ್ಟ್‌ಫೋನ್‌ ಬೆಲೆ EUR 79 (ಅಂದಾಜು 6,700ರೂ) ಹೊಂದಿದೆ. ಇನ್ನು ನೋಕಿಯಾ C21 ಸ್ಮಾರ್ಟ್‌ಫೋನ್‌ EUR 99 (ಅಂದಾಜು 8,400ರೂ) ನಲ್ಲಿ ಲಭ್ಯವಿದೆ. ಹಾಗೂ ನೋಕಿಯಾ C21 ಪ್ಲಸ್‌ ಸ್ಮಾರ್ಟ್‌ಫೋನ್‌ ಬೆಲೆ EUR 119 (ಅಂದಾಜು 10,100ರೂ)ಆಗಿದೆ. ಇದರಲ್ಲಿ ನೋಕಿಯಾ C2 2ನೇ ಆವೃತ್ತಿ ಮತ್ತು ನೋಕಿಯಾ C21 ಪ್ಲಸ್‌ ಫೋನ್‌ಗಳು ಏಪ್ರಿಲ್‌ನಿಂದ ಮಾರಾಟಕ್ಕೆ ಲಭ್ಯವಿರುತ್ತದೆ. ಆದರೆ ನೋಕಿಯಾ C21 ಸ್ಮಾರ್ಟ್‌ಫೋನ್‌ ಮಾರ್ಚ್ ಅಂತ್ಯದಿಂದ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ ನೋಕಿಯಾ C2 2ನೇ ಆವೃತ್ತಿ, ನೋಕಿಯಾ C21, ನೋಕಿಯಾ C21 ಪ್ಲಸ್‌ ಸ್ಮಾರ್ಟ್‌ಫೋನ್‌ ಬಿಡುಗಡೆ ದಿನಾಂಕ ಮತ್ತು ಲಭ್ಯತೆಯನ್ನು ಇನ್ನೂ ಬಹಿರಂಗಪಡಿಸಿಲ್ಲ.

Best Mobiles in India

English summary
Nokia launched three new budget smartphones at MWC 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+