ನೋಕಿಯಾ ಸಂಸ್ಥೆಯಿಂದ ಹೊಸ ಟ್ಯಾಬ್ಲೆಟ್‌ ಬಿಡುಗಡೆ! ವಿಶೇಷತೆ ಏನು?

|

ನೋಕಿಯಾ ಕಂಪೆನಿ ಮೊಬೈಲ್‌ ಮಾರುಕಟ್ಟೆಯ ಎವರ್‌ಗ್ರೀನ್‌ ಬ್ರಾಂಡ್‌ ಎನಿಸಿಕೊಂಡಿದೆ. ಸ್ಮಾರ್ಟ್‌ಫೋನ್‌ ಮಾತ್ರವಲ್ಲದೆ ಸ್ಮಾರ್ಟ್‌ ಟ್ಯಾಬ್‌, ಸ್ಮಾರ್ಟ್‌ಟಿವಿ ಮೂಲಕವೂ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ಹೊಸ ಟ್ಯಾಬ್‌ ನೋಕಿಯಾ T20 ಅನ್ನು ಲಾಂಚ್‌ ಮಾಡಿದೆ. ಇನ್ನು ಈ ಹೊಸ ನೋಕಿಯಾ ಟ್ಯಾಬ್ಲೆಟ್ 2K ಡಿಸ್ಪ್ಲೇ ಹೊಂದಿದೆ. ಇದು 8 ಮೆಗಾಪಿಕ್ಸೆಲ್ ರಿಯರ್ ಕ್ಯಾಮೆರಾ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಟ್ಯಾಬ್ಲೆಟ್ ಡ್ಯುಯಲ್ ಮೈಕ್ರೊಫೋನ್‌ ಮತ್ತು ಸ್ಟೀರಿಯೋ ಸ್ಪೀಕರ್‌ಗಳನ್ನು ಒಳಗೊಂಡಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಹೊಸ ನೋಕಿಯಾ T20 ಟ್ಯಾಬ್ಲೆಟ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಹೊಸ ಟ್ಯಾಬ್ಲೆಟ್‌ 4GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಜೊತೆಗೆ ಗೂಗಲ್ ಕಿಡ್ಸ್ ಸ್ಪೇಸ್ ಮತ್ತು ಒಂದು ದಿನದ ಬ್ಯಾಟರಿ ಬಾಳಿಕೆಯನ್ನು ಒಳಗೊಂಡಿದೆ. ಈ ಟ್ಯಾಬ್ಲೆಟ್‌ ರಗಡ್ ಕೇಸ್ + ಫ್ಲಿಪ್ ಕವರ್, ಸ್ಟ್ಯಾಂಡ್ ಮತ್ತು ನೋಕಿಯಾ ಮೈಕ್ರೋ ಇಯರ್‌ಬಡ್ಸ್ ಪ್ರೊ ಅನ್ನು ಹೊಂದಿದೆ. ಇನ್ನುಳಿದಂತೆ ಈ ಹೊಸ ನೋಕಿಯಾ T20 ಟ್ಯಾಬ್ಲೆಟ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ನೋಕಿಯಾ T20 ಟ್ಯಾಬ್ಲೆಟ್‌ 2,000x1,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 10.4-ಇಂಚಿನ 2K ಇನ್-ಸೆಲ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯನ್ನು ಗಟ್ಟಿಯಾದ ಗ್ಲಾಸ್‌ ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಆಕ್ಟಾ-ಕೋರ್ ಯುನಿಸೋಕ್ ಟಿ 610SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಎರಡು ವರ್ಷಗಳ ಓಎಸ್ ಅಪ್‌ಗ್ರೇಡ್‌ಗಳು ಮತ್ತು ಮೂರು ವರ್ಷಗಳ "ಸಕಾಲಿಕ" ಭದ್ರತಾ ಅಪ್‌ಡೇಟ್‌ಗಳನ್ನು ಪಡೆಯುವ ಭರವಸೆ ಇದೆ. ಜೊತೆಗೆ 3GBRAM ಮತ್ತು 64GB ಸ್ಟೋರೇಜ್‌ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೊ ಎಸ್ಡಿ ಕಾರ್ಡ್ ಮೂಲಕ 512 GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ

ಕ್ಯಾಮೆರಾ

ಇನ್ನು ಈ ಟ್ಯಾಬ್ಲೆಟ್‌ ಫೋಟೋಗಳು ಮತ್ತು ವಿಡಿಯೋಗಳಿಗಾಗಿ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ರಿಯರ್‌ ಕ್ಯಾಮೆರಾ ಸೆಟಪ್ ಎಲ್ಇಡಿ ಫ್ಲ್ಯಾಷ್‌ ಅನ್ನು ಸಹ ಪಡೆದುಕೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ ಟಿ 20 ಟ್ಯಾಬ್ಲೆಟ್‌ 8,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 15W ಚಾರ್ಜರ್ ಮೂಲಕ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಸಿಂಗಲ್‌ ಚಾರ್ಜ್‌ನಲ್ಲಿ ಇಡೀ ದಿನ ಬ್ಯಾಟರಿ ಅವಧಿಯನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4 ಜಿ ಎಲ್ ಟಿಇ (ಐಚ್ಛಿಕ), ವೈ-ಫೈ 802.11 ಎಸಿ, ಬ್ಲೂಟೂತ್ ವಿ 5.0, ಯುಎಸ್ ಬಿ ಟೈಪ್-ಸಿ ಮತ್ತು 3.5 ಎಂಎಂ ಹೆಡ್ ಫೋನ್ ಜ್ಯಾಕ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನೋಕಿಯಾ ಟಿ 20 ಟ್ಯಾಬ್ಕೆಟ್‌ Wi-Fi ಒನ್ಲಿ ರೂಪಾಂತರ ಬೆಲೆ EUR 199 (ಅಂದಾಜು 17,200) ಹೊಂದಿದೆ. ಇನ್ನು Wi-Fi + 4G ಮಾದರಿEUR 239 (ಸರಿಸುಮಾರು ರೂ. 20,600)ಬೆಲೆ ಹೊಂದಿದೆ. ಇನ್ನು ಈ ಟ್ಯಾಬ್ಲೆಟ್‌ ಪ್ರಪಂಚದಾದ್ಯಂತ ಆಯ್ದ ಮಾರುಕಟ್ಟೆಗಳಲ್ಲಿ ಮಾರಾಟವಾಗಲಿದೆ. ಆದರೂ ಭಾರತದಲ್ಲಿ ಇದು ಯಾವಾಗ ಲಭ್ಯವಾಗಲಿದೆ ಅನ್ನೊದು ಇನ್ನೂ ಬಹಿರಂಗವಾಗಿಲ್ಲ.

Most Read Articles
Best Mobiles in India

English summary
Nokia T20 runs on Android 11 and is promised to receive two years of OS upgrades and three years of “timely” security updates.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X