ಭಾರತದಲ್ಲಿ ನೋಕಿಯಾ T20 ಟ್ಯಾಬ್ಲೆಟ್ ಬಿಡುಗಡೆ! ಬೆಲೆ ಎಷ್ಟು?

|

ನೋಕಿಯಾ ಕಂಪೆನಿ ಮೊಬೈಲ್‌ ಮಾರುಕಟ್ಟೆಯಲ್ಲಿ ಎವರ್‌ಗ್ರೀನ್‌ ಬ್ರಾಂಡ್‌ ಎನಿಸಿಕೊಂಡಿದೆ. ಇದಲ್ಲದೆ ಈಗಾಗಲೇ ಅನೇಕ ಜನಪ್ರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಗ್ರಾಹಕರ ಗಮನ ಸೆಳೆದಿದೆ. ಸದ್ಯ ಇದೀಗ ತನ್ನ ಹೊಸ ನೋಕಿಯಾ T20 ಟ್ಯಾಬ್ಲೆಟ್ ಅನ್ನು ಭಾರತದಲ್ಲಿ ಲಾಂಚ್‌ ಮಾಡಿದೆ. ಇದು ನೋಕಿಯಾ ಕಂಪೆನಿಯ ಮೊದಲ ಆಂಡ್ರಾಯ್ಡ್‌ ಟ್ಯಾಬ್ಲೆಟ್‌ ಎಂದು ಎನಿಸಿಕೊಂಡಿದೆ. ಇನ್ನು ಈ ಟ್ಯಾಬ್ಲೆಟ್‌ 2K ಡಿಸ್‌ಪ್ಲೇಯನ್ನು ಹೊಂದಿದ್ದು, 8,200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ನೋಕಿಯಾ

ಹೌದು, ನೋಕಿಯಾ ಸಂಸ್ಥೆ ಭಾರತದಲ್ಲಿ ಹೊಸ ನೋಕಿಯಾ T20 ಟ್ಯಾಬ್ಲೆಟ್ ಅನ್ನು ಬಿಡುಗಡೆ ಮಾಡಿದೆ. ಈ ಟ್ಯಾಬ್‌ 10.4-ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ Unisoc T610 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ ಇದು ಸಿಂಗಲ್‌ ಚಾರ್ಜ್‌ನಲ್ಲಿ 15 ಗಂಟೆಗಳವರೆಗೆ ವೆಬ್ ಬ್ರೌಸಿಂಗ್ ಅನುಭವವನ್ನು ನೀಡಲಿದೆ. ಅಲ್ಲದೆ ನೋಕಿಯಾ T20 ಸ್ಟೀರಿಯೋ ಸ್ಪೀಕರ್‌ಗಳು ಮತ್ತು ಡ್ಯುಯಲ್ ಮೈಕ್ರೊಫೋನ್‌ಗಳನ್ನು ಸಹ ಹೊಂದಿದೆ. ಇನ್ನುಳಿದಂತೆ ಈ ಟ್ಯಾಬ್ಲೆಟ್‌ ಯಾವೆಲ್ಲಾ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ಡಿಸ್‌ಪ್ಲೇ ಮತ್ತು ಪ್ರೊಸೆಸರ್‌

ನೋಕಿಯಾ T20 ಟ್ಯಾಬ್ಲೆಟ್‌ 2,000x1,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 10.4-ಇಂಚಿನ 2K ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 400 ನೀಟ್ಸ್‌ ಪೀಕ್ ಬ್ರೈಟ್‌ನೆಸ್‌ ಅನ್ನು ಹೊಂದಿದೆ. ಇನ್ನು ಈ ಟ್ಯಾಬ್ಲೆಟ್ ಆಕ್ಟಾ-ಕೋರ್ Unisoc T610 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 32GB ಮತ್ತು 64GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ.

ಕ್ಯಾಮೆರಾ ಮತ್ತು ಬ್ಯಾಟರಿ

ಕ್ಯಾಮೆರಾ ಮತ್ತು ಬ್ಯಾಟರಿ

ಇನ್ನು ಈ ಟ್ಯಾಬ್ಲೆಟ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾ ಹೊಂದಿದೆ. ಹಾಗೆಯೇ 5ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಇನ್ನು ರಿಯರ್‌ ಕ್ಯಾಮೆರಾದಲ್ಲಿ ಎಲ್ಇಡಿ ಫ್ಲ್ಯಾಷ್ ಕೂಡ ಹೊಂದಿದೆ. ಇದಲ್ಲದೆ, ಈ ಟ್ಯಾಬ್ಲೆಟ್ OZO ಪ್ಲೇಬ್ಯಾಕ್ ಮತ್ತು ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ನಾಯ್ಸ್‌ ಕ್ಯಾನ್ಸಲೇಶನ್‌ಗಾಗಿ ನೀವು ಡ್ಯುಯಲ್ ಮೈಕ್ರೊಫೋನ್‌ಗಳನ್ನು ಸಹ ಒಳಗೊಂಡಿದೆ. ಇದು 8,200mAh ಬ್ಯಾಟರಿ ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, ವೈಫೈ, ಬ್ಲೂಟೂತ್‌ v5.0, USB Type-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಅನ್ನು ಒಳಗೊಂಡಿದೆ. ಈ ಟ್ಯಾಬ್ಲೆಟ್‌ ಎರಡು ವರ್ಷಗಳ ಉಚಿತ ಆಪರೇಟಿಂಗ್ ಸಿಸ್ಟಮ್ ಅಪ್‌ಗ್ರೇಡ್‌ಗಳನ್ನು ನೀಡುವುದಾಗಿ ಹೇಳಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ನೋಕಿಯಾ T20 ಟ್ಯಾಬ್ಲೆಟ್‌ ಆರಂಭಿಕ ಬೆಲೆ 3GB RAM + 32GB ಸ್ಟೋರೇಜ್ ಆಯ್ಕೆಯ ವೈ-ಫೈ ಒನ್ಲಿ ರೂಪಾಂತರಕ್ಕೆ 15,499ರೂ.ಆಗಿದೆ. ಇದಲ್ಲದೆ ಈ ಟ್ಯಾಬ್ಲೆಟ್ ವೈ-ಫೈ ಒನ್ಲಿ ಮಾದರಿಯಲ್ಲಿ 4GB + 32GB ಕಾನ್ಫಿಗರೇಶನ್ ಆಯ್ಕೆಗೆ 16,499ರೂ,ಬೆಲೆಯನ್ನು ಹೊಂದಿದೆ. ಆದರೆ ನೋಕಿಯಾ T20 ಟ್ಯಾಬ್ಲೆಟ್‌ 4G ಮಾದರಿಯು 18,499.ರೂ ಬೆಲೆಯನ್ನು ಪಡೆದುಕೊಂಡಿದೆ. ಇನ್ನು ಈ ಟ್ಯಾಬ್ಲೆಟ್‌ ಭಾರತದಲ್ಲಿ ನೋಕಿಯಾ.com ಮತ್ತು ಆಫ್‌ಲೈನ್ ರಿಟೇಲ್‌ ಸ್ಟೋರ್‌ಗಳ ಮೂಲಕ ಖರೀದಿಗೆ ಲಬ್ಯವಾಗಲಿದೆ. ಜೊತೆಗೆ ನಾಳೆಯಿಂದ ಫ್ಲಿಪ್‌ಕಾರ್ಟ್ ಮೂಲಕ ಲಭ್ಯವಿರುತ್ತದೆ.

ಇತರೆ

ಇತರೆ

ಈ ಟ್ಯಾಬ್ಲೆಟ್ ಅನ್ನು ಖರೀದಿಸುವ ಗ್ರಾಹಕರು ಪ್ರಿಲೋಡೆಡ್ Spotify ಪ್ರವೇಶವನ್ನು ಪಡೆಯುತ್ತಾರೆ. ಚಾನಲ್‌ಗಳಾದ್ಯಂತ ಪ್ರಮುಖ ಬ್ರ್ಯಾಂಡ್‌ಗಳ ಮೂಲಕ ವಿವಿಧ ಹಣಕಾಸು ಕೊಡುಗೆಗಳು ಸಹ ಇರುತ್ತವೆ. ಇದಲ್ಲದೆ HMD ಗ್ಲೋಬಲ್ ಈ ಟ್ಯಾಬ್ಲೆಟ್‌ ಮೇಲೆ ಮೂರು ವರ್ಷಗಳವರೆಗೆ ಮಾಸಿಕ ಭದ್ರತಾ ನವೀಕರಣಗಳನ್ನು ಮತ್ತು ಟ್ಯಾಬ್ಲೆಟ್‌ನೊಂದಿಗೆ ಎರಡು ವರ್ಷಗಳ ಉಚಿತ ಆಪರೇಟಿಂಗ್ ಸಿಸ್ಟಮ್ ಅಪ್‌ಗ್ರೇಡ್‌ಗಳನ್ನು ತಲುಪಿಸಲು ಭರವಸೆ ನೀಡಿದೆ. ಇನ್ನು ನೋಕಿಯಾ T20 ಯುರೋಪ್‌ನಲ್ಲಿ ಕಳೆದ ತಿಂಗಳು ಬಿಡುಗಡೆ ಮಾಡಲಾಗಿತ್ತು. ಇದರಲ್ಲಿ ವೈಫೈ ಒನ್ಲಿ ಮಾದರಿಯ ಆಯ್ಕೆಯ ಆರಂಬಿಕ ಬೆಲೆ EUR 199 (ಸುಮಾರು 17,200ರೂ) ಹೊಂದಿದೆ.

Most Read Articles
Best Mobiles in India

English summary
Nokia T20 was launched in India on Monday as the first Android tablet by Nokia brand licensee HMD Global.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X