ಇಂದಿನಿಂದ ಭಾರತದಲ್ಲಿ ನೋಕಿಯಾ X30 5G ಖರೀದಿಗೆ ಲಭ್ಯ! ಏನೆಲ್ಲಾ ಆಫರ್? ಹೇಗಿದೆ ಫೀಚರ್ಸ್!
ನೋಕಿಯಾ ಕಂಪೆನಿ ಕಳೆದ ವಾರ ಭಾರತದಲ್ಲಿ ತನ್ನ ನೋಕಿಯಾ X30 5G ಫೋನ್ ಬಿಡುಗಡೆ ಮಾಡಿತ್ತು. ಈ ಸ್ಮಾರ್ಟ್‌ಫೋನ್ ತನ್ನ ಆಕರ್ಷಕ ಫೀಚರ್ಸ್‌ಗಳ ಮೂಲಕ ಗಮನಸೆಳೆದಿದೆ. ಸದ್ಯ ಈ ಸ್ಮಾರ್ಟ್‌ಫೋನ್ ಇಂದು (ಫೆ.20) ತನ್ನ ಫಸ್ಟ್ ಸೇಲ್ ಪ್ರಾರಂಭಿಸಿದೆ. ಈ ಸ್ಮಾರ್ಟ್‌ಫೋನ್ ನೋಕಿಯಾ ಕಂಪೆನಿಯ ಅಧಿಕೃತ ವೆಬ್‌ಸೈಟ್ ಮತ್ತು ಅಮೆಜಾನ್ ಇಂಡಿಯಾ ಮೂಲಕ ಖರೀದಿಗೆ ಲಭ್ಯವಾಗಲಿದೆ. ಇದಲ್ಲದೆ ತನ್ನ ಫಸ್ಟ್ ಸೇಲ್ ಪ್ರಯುಕ್ತ ವಿಶೇಷ ಆಫರ್‌ಗಳನ್ನು ಕೂಡ ನೀಡುತ್ತಿದೆ.

ಹೌದು, ನೋಕಿಯಾ ಕಂಪೆನಿ ಪರಿಚಯಿಸಿರುವ ನೋಕಿಯಾ X30 5G ಇಂದಿನಿಂದ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5GSoC ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 4,200mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡದುಕೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಫಸ್ಟ್ ಸೇಲ್‌ನಲ್ಲಿ ಏನೆಲ್ಲಾ ಆಫರ್ ಲಭ್ಯವಾಗಲಿದೆ? ಈ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಏನಿದೆ? ಇದೆಲ್ಲದರ ಕಂಪ್ಲೀಟ್ ಡಿಟೇಲ್ಸ್ ಅನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.
ನೋಕಿಯಾ X30 5G ಬೆಲೆ ಎಷ್ಟು? ಸೇಲ್ ಆಫರ್ ಏನಿದೆ?
ನೋಕಿಯಾ X30 5G ಸ್ಮಾರ್ಟ್‌ಫೋನ್ ಇಂದಿನಿಂದ ನೋಕಿಯಾ ಇಂಡಿಯಾ ಅಧಿಕೃತ ವೆಬ್‌ಸೈಟ್ nokia.com ಮತ್ತು ಅಮೆಜಾನ್ ಇಂಡಿಯಾದ ಮೂಲಕ ಮಾರಾಟವಾಗಲಿದೆ. ಈ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಯ ಸ್ಟೋರೇಜ್ ಆಯ್ಕೆಯು 48,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಫಸ್ಟ್ ಸೇಲ್ ಪ್ರಯುಕ್ತ ಈ ಸ್ಮಾರ್ಟ್‌ಫೋನ್ ಅನ್ನು ನೋಕಿಯಾ ಇಂಡಿಯಾ ವೆಬ್‌ಸೈಟ್‌ನಲ್ಲಿ ಖರೀದಿಸಿದರೆ 2,799ರೂ. ಮೌಲ್ಯದ ನೋಕಿಯಾ ಕಂಫರ್ಟ್ ಇಯರ್‌ಬಡ್ಸ್ ಮತ್ತು 2,999ರೂ. ಮೌಲ್ಯದ 33W ಚಾರ್ಜರ್ ಅನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ ಅಮೆಜಾನ್‌ನಲ್ಲಿಯೂ ಸಹ 33W ನೋಕಿಯಾ ಫಾಸ್ಟ್ ವಾಲ್ ಚಾರ್ಜರ್ ಅನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಇದರೊಂದಿಗೆ ಆಯ್ದ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳ ಮೂಲಕ ಖರೀದಿಸಿದರೆ 2,000ರೂ.ಗಳ ಹೆಚ್ಚುವರಿ ಡಿಸ್ಕೌಂಟ್ ಲಭ್ಯವಾಗಲಿದೆ.

ನೋಕಿಯಾ X30 5G ಫೀಚರ್ಸ್ ಹೇಗಿದೆ?
ನೋಕಿಯಾ X30 5G ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಮತ್ತು 700 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ನ ಡಿಸ್‌ಪ್ಲೇ ಟಾಪ್ ವಿಕ್ಟಸ್ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಹೊಂದಿದೆ.
ನೋಕಿಯಾ X30 5G ಪ್ರೊಸೆಸರ್ ಯಾವುದು? ಕ್ಯಾಮೆರಾ ಸೆಟ್‌ಅಪ್ ಏನಿದೆ?
ನೋಕಿಯಾ X30 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 5GSoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 OS ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 8GB RAM ಮತ್ತು 256GB ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ PureView OIS ಕ್ಯಾಮೆರಾ ಹೊಂದಿದೆ. ಎರಡನೇ ಕ್ಯಾಮೆರಾ 13MP ಸೆನ್ಸಾರ್ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ನೋಕಿಯಾ X30 5G ಬ್ಯಾಟರಿ ಬ್ಯಾಕ್‌ಅಪ್ ಎಷ್ಟು?
ನೋಕಿಯಾ X30 5G ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಬ್ಲೂಟೂತ್ v5.1, eSIM, USB ಟೈಪ್-C ಮತ್ತು ಡ್ಯುಯಲ್-ಬ್ಯಾಂಡ್ ವೈಫೈಗೆ ಬೆಂಬಲಿಸಲಿದೆ. ಜೊತೆಗೆ ಆಡಿಯೊಗಾಗಿ ಇದು ಎರಡು ಮೈಕ್ರೊಫೋನ್‌ಗಳನ್ನು ಹೊಂದಿದೆ. ಅಲ್ಲದೆ ಆಪ್ಟಿಎಕ್ಸ್ ಎಚ್‌ಡಿ, ಆಪ್ಟಿಎಕ್ಸ್ ಕ್ಲಾಸಿಕ್ ಮತ್ತು ಆಪ್ಟಿಎಕ್ಸ್ ಅಡಾಪ್ಟಿವ್‌ನೊಂದಿಗೆ OZO ಪ್ರಾದೇಶಿಕ ಆಡಿಯೊ ಕ್ಯಾಪ್ಚರ್‌ಗೆ ಬೆಂಬಲಿಸುವ ಸ್ಪೀಕರ್ ಅನ್ನು ಹೊಂದಿದೆ.


Click it and Unblock the Notifications








