Home
ಸುದ್ದಿಜಾಲ

ನೋಕಿಯಾ ಕಂಪೆನಿಯಿಂದ ಮೂರು ಹೊಸ ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

ಟೆಕ್‌ ಮಾರುಕಟ್ಟೆಯಲ್ಲಿ ನೋಕಿಯಾ ಕಂಪೆನಿ ಮೊಬೈಲ್‌ ಜಗತ್ತಿನ ಎವರ್‌ಗ್ರೀನ್‌ ಬ್ರ್ಯಾಂಡ್‌ ಆಗಿ ಗುರುತಿಸಿಕೊಂಡಿದೆ. ತನ್ನ ಭಿನ್ನ ಮಾದರಿಯ ಮೊಬೈಲ್‌ಗಳ ಮೂಲಕ ಇಂದಿಗೂ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯತೆ ಉಳಿಸಿಕೊಂಡಿದೆ. ಸದ್ಯ ಇದೀಗ ಮೂರು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಇವುಗಳನ್ನು ನೋಕಿಯಾ X30 5G, ನೋಕಿಯಾ G60 5G ಮತ್ತು ನೋಕಿಯಾ C31 ಸ್ಮಾರ್ಟ್‌ಫೋನ್‌ಗಳು ಎಂದು ಹೆಸರಿಸಲಾಗಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳನ್ನು ಜಾಗತಿಕವಾಗಿ ಆಯ್ದ ಮಾರುಕಟ್ಟೆಗಳಲ್ಲಿ ಬಿಡುಗಡೆ ಮಾಡಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಜಾಗತಿಕವಾಗಿ ಮೂರು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿದೆ. ಈ ಮೂರು ಸ್ಮಾರ್ಟ್‌ಫೋನ್‌ಗಳು ಕೂಡ ಭಿನ್ನ ಮಾದರಿಯ ಪ್ರೊಸೆಸರ್‌ ಹಾಗೂ ಫೀಚರ್ಸ್‌ಗಳನ್ನು ಪಡೆದುಕೊಂಡಿವೆ. ಇದರಲ್ಲಿ ನೋಕಿಯಾ X30 5G ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಆದರೆ ನೋಕಿಯಾ G60 5G ಫೋನ್‌ 6.58-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ಗಳ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನೋಕಿಯಾ X30 5G ಸ್ಮಾರ್ಟ್‌ಫೋನ್‌

ನೋಕಿಯಾ X30 5G ಸ್ಮಾರ್ಟ್‌ಫೋನ್‌

ನೋಕಿಯಾ X30 5G ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಜೊತೆಗೆ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದರ ಬೆಲೆ EUR 529 (ಅಂದಾಜು 42,200ರೂ) ಆಗಿದೆ.

ನೋಕಿಯಾ G60 5G

ನೋಕಿಯಾ G60 5G

ನೋಕಿಯಾ G60 5G ಸ್ಮಾರ್ಟ್‌ಫೋನ್‌ 6.58-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 695 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB, 4GB RAM ಮತ್ತು 128GB, ಹಾಗೂ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ EUR 319 (ಅಂದಾಜು 25,500ರೂ)ಆಗಿದೆ.

ನೋಕಿಯಾ C31

ನೋಕಿಯಾ C31

ನೋಕಿಯಾ C31 ಸ್ಮಾರ್ಟ್‌ಫೋನ್‌ 6.7 ಇಂಚಿನ 2.5D ಡಿಸ್‌ಪ್ಲೇಯನ್ನು ಹೊಂದಿದೆ. ಇದು ಯುನಿಸೋಕ್‌ 9863A1 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 3GB RAM ಮತ್ತು 32GB ಹಾಗೂ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್‌ ಮೂಲಕ 256GB ವರೆಗೆ ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13MP ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,050mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದರ ಬೆಲೆ EUR 239 (ಅಂದಾಜು 19,00ರೂ)ಆಗಿದೆ.

ನೋಕಿಯಾ T21 ಟ್ಯಾಬ್ಲೆಟ್

ನೋಕಿಯಾ T21 ಟ್ಯಾಬ್ಲೆಟ್

ನೋಕಿಯಾ T21 ಟ್ಯಾಬ್ಲೆಟ್ 10.4 ಇಂಚಿನ 2K ಡಿಸ್‌ಪ್ಲೇಯನ್ನು ಹೊಂದಿದೆ. ಇದು 360 ನಿಟ್ಸ್‌ ಬ್ರೈಟ್‌ನೆಸ್‌ ಅನ್ನು ಬೆಂಬಲಿಸಲಿದೆ. ಇದು ಯೂನಿಸೋಕ್‌ T612 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಟ್ಯಾಬ್ಲೆಟ್‌ 8 ಮೆಗಾಪಿಕ್ಸೆಲ್‌ ರಿಯರ್‌ ಕ್ಯಾಮೆರಾ ಹಾಗೂ 8 ಮೆಗಾಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 8,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ಬೆಲೆ EUR 129 (ಅಂದಾಜು 10,300ರೂ)ಆಗಿದೆ. ಇದು ಚಾರ್ಕೋಲ್ ಗ್ರೇ ಕಲರ್‌ ಆಯ್ಕೆಗಳಲ್ಲಿ ಬರಲಿದೆ.

Best Mobiles in India

English summary
Nokia X30 5G, Nokia G60 5G and Nokia C31 smartphones launched
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+