ನೋಕಿಯಾ X30 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ 12,000ರೂ ಕಡಿತ! ಕೂಡಲೇ ಖರೀದಿಸಿ!
ನೋಕಿಯಾ ಕಂಪೆನಿ ಸ್ಮಾರ್ಟ್‌ಫೋನ್ ಪ್ರಿಯರಿಗೆ ಗುಡ್‌ನ್ಯೂಸ್ ನೀಡಿದೆ. ಟೆಕ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ತನ್ನ ಸ್ಮಾರ್ಟ್‌ಫೋನ್ ಮೇಲೆ ಬರೋಬ್ಬರಿ 12,000ರೂ. ಬೆಲೆ ಕಡಿತವನ್ನು ಘೋಷಿಸಿದೆ. ಈ ಮೂಲಕ ನೋಕಿಯಾ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದು ಕೊಂಡವರಿಗೆ ಬಿಗ್ ಆಫರ್ ನೀಡಿದೆ.
ಹೌದು, ನೋಕಿಯಾ X30 5G ಸ್ಮಾರ್ಟ್‌ಫೋನ್ ಬೆಲೆ ಭಾರಿ ಇಳಿಕೆಯನ್ನು ಕಂಡಿದೆ. ಎಂಟ್ರಿಯಲ್ಲೇ ಭಾರಿ ಹಲ್‌ಚಲ್ ಸೃಷ್ಟಿಸಿದ್ದ ಈ ಸ್ಮಾರ್ಟ್‌ಫೋನ್, ಮೊಬೈಲ್ ಪ್ರಿಯರ ಹಾಟ್‌ಫೇವರಿಟ್ ಫೋನ್‌ಗಳಲ್ಲಿ ಒಂದೆನಿಸಿಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಬಿಡುಗಡೆ ಆದಾಗ 48,999ರೂ ಬೆಲೆ ಹೊಂದಿತ್ತು, ಇದೀಗ ಬರೋಬ್ಬರಿ 12,000ರೂಗಳಷ್ಟು ಬೆಲೆ ಕಡಿಮೆ ಆಗಿದೆ. ಹಾಗಾದ್ರೆ ನೋಕಿಯಾ X30 5G ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಆಗಿರುವ ಬದಲಾವಣೆಯ ವಿವರಗಳನ್ನು ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನೋಕಿಯಾ X30 5G ಬೆಲೆ ಕಡಿತ
ನೋಕಿಯಾ X30 5G ಸ್ಮಾರ್ಟ್‌ಫೋನ್ ಈ ವರ್ಷದ ಆರಂಭದಲ್ಲಿ 48,999ರೂ. ಬೆಲೆಯೊಂದಿಗೆ ಭಾರತಕ್ಕೆ ಎಂಟ್ರಿ ನೀಡಿತ್ತು. ಇದೀಗ ಈ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಭಾರಿ ಇಳಿಕೆ ಆಗಿದ್ದು, ಇದು ಕೇವಲ 36,999ರೂ. ಬೆಲೆಗೆ ಲಭ್ಯವಾಗ್ತಿದೆ. ಅಂದರೆ ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಬರೋಬ್ಬರಿ 12,000ರೂ ಕಡಿತಗೊಳಿಸಲಾಗಿದೆ. ಈ ಸ್ಮಾರ್ಟ್‌ಫೋನ್ ನಿಮಗೆ ಕ್ಲೌಡಿ ಬ್ಲೂ ಮತ್ತು ಐಸ್ ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ.
ನೋಕಿಯಾ X30 5G ಡಿಸ್‌ಪ್ಲೇ ರಚನೆ ಹೇಗಿದೆ?
ನೋಕಿಯಾ X30 5G ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಬೆಂಬಲಿಸಲಿದೆ. ಜೊತೆಗೆ ಡಿಸ್‌ಪ್ಲೇ 700 ನಿಟ್ಸ್ ಬ್ರೈಟ್‌ನೆಸ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಅನ್ನು ಪಡೆದುಕೊಂಡಿದ್ದು, 20:9 ಡಿಸ್‌ಪ್ಲೇ ರಚನೆಯ ಅನುಪಾತವನ್ನು ಹೊಂದಿರಲಿದೆ. ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್ ಹೊಂದಿದೆ.
ನೋಕಿಯಾ X30 5G ಪ್ರೊಸೆಸರ್ ಯಾವುದು?
ನೋಕಿಯಾ X30 5G ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಔಟ್ ಬಾಕ್ಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಸ್ಮಾರ್ಟ್‌ಫೋನ್ ಮೂರು ವರ್ಷಗಳ ಓಎಸ್ ನವೀಕರಣಗಳನ್ನು ಮತ್ತು ಮೂರು ವರ್ಷಗಳ ಮಾಸಿಕ ಭದ್ರತಾ ಪ್ಯಾಚ್‌ಗಳನ್ನು ಸ್ವೀಕರಿಸುವ ಭರವಸೆ ಇದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ.
ನೋಕಿಯಾ X30 5G ಕ್ಯಾಮೆರಾ ಸೆಟ್‌ಅಪ್
ನೋಕಿಯಾ X30 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಲೆನ್ಸ್‌ನೊಂದಿಗೆ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.
ನೋಕಿಯಾ X30 5G ಬ್ಯಾಟರಿ ಮತ್ತು ಇತರೆ
ನೋಕಿಯಾ X30 5G ಸ್ಮಾರ್ಟ್‌ಫೋನ್ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ಬ್ಲೂಟೂತ್, ವೈಫೈ, ಯುಎಸ್‌ಬಿ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಹೊಂದಿದ್ದು, ನೀರಿನ ಪ್ರತಿರೋಧಕ್ಕಾಗಿ IP67 ರೇಟಿಂಗ್ ಅನ್ನು ಸಹ ಹೊಂದಿದೆ. ಇದಲ್ಲದೆ ಪ್ರಾಕ್ಸಿಮಿಟಿ ಸೆನ್ಸಾರ್, ಅಕ್ಸಿಲೆರೋ ಮೀಟರ್ ಸೆನ್ಸಾರ್ ಅನ್ನು ಬೆಂಬಲಿಸಲಿದೆ.


Click it and Unblock the Notifications








