ಭಾರತದಲ್ಲಿ ನೋಕಿಯಾ XR20 ಸ್ಮಾರ್ಟ್‌ಫೋನ್‌ ಬಿಡುಗಡೆ! ಫೀಚರ್ಸ್‌ ಹೇಗಿದೆ?

|

ಮೊಬೈಲ್‌ ಮಾರುಕಟ್ಟೆಯಲ್ಲಿ ಇಂದಿಗೂ ಎವರ್‌ಗ್ರೀನ್‌ ಬ್ರಾಂಡ್‌ ಎಂದರೆ ಅದು ನೋಕಿಯಾ. ನೋಕಿಯಾ ಕಂಪೆನಿ ಪ್ರಸ್ತುತ ದಿನಗಳಲ್ಲೂ ಕೂಡ ತನ್ನ ಜನಪ್ರಿಯತೆಯನ್ನು ಉಳಿಸಿಕೊಂಡು ಬಂದಿದೆ. ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿಶೇಷ ಸ್ಮಾರ್ಟ್‌ಫೋನ್‌ಗಳ ಮೂಲಕ ತನ್ನ ಸ್ಥಾನ ಭದ್ರಪಡಿಸಿಕೊಂಡಿದೆ. ಸದ್ಯ ಇದೀಗ ಭಾರತದಲ್ಲಿ ಹೊಸ ನೋಕಿಯಾ XR20 ಸ್ಮಾರ್ಟ್‌ಫೋನ್‌ ಅನ್ನು ಲಾಂಚ್‌ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮಿಲಿಟರಿ ಗ್ರೇಡ್‌ ಡಿಸೈನ್‌ ಅನ್ನು ಪಡೆದುಕೊಂಡಿದೆ.

ನೋಕಿಯಾ

ಹೌದು, ನೋಕಿಯಾ ಕಂಪೆನಿ ಹೊಸ ನೋಕಿಯಾ XR20 ಸ್ಮಾರ್ಟ್‌ಫೋನ್‌ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಸಾಕಷ್ಟು ವಿಶೇಷತೆ ಹೊಂದಿದೆ ಅದರಲ್ಲೂ 55-ಡಿಗ್ರಿಗಳಿಂದ 20-ಡಿಗ್ರಿ ಸೆಲ್ಸಿಯಸ್‌ ತಾಪಾಮಾನದ ನೀರಿನಲ್ಲಿದ್ದರೂ ಮೊಬೈಲ್‌ಗೆ ಯಾವುದೇ ಹಾನಿಯಾಗುವುದಿಲ್ಲ ಎನ್ನಲಾಗಿದೆ. ಇದು ಫೋನ್ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಹೊಂದಿದ್ದು, ಜೀಸ್ ಆಪ್ಟಿಕ್ಸ್ ಅನ್ನು ಪಡೆದಿದೆ. ಅಲ್ಲದೆ ಈ ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ವಿಶೇಷ

ಡಿಸ್‌ಪ್ಲೇ ವಿಶೇಷ

ನೋಕಿಯಾ XR20 ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಹೊಂದಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಹೊಂದಿದೆ.

ಪ್ರೊಸೆಸರ್‌ ಯಾವುದು?

ಪ್ರೊಸೆಸರ್‌ ಯಾವುದು?

ನೋಕಿಯಾ XR20 ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 SoC ಪ್ರೊಸೆಸರ್‌ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಸ್ಟಾಕ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 6GB RAM ಮತ್ತು 128GBಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಫೋನ್‌ ಮೆಮೊರಿ ಕಾರ್ಡ್‌ ಬೆಂಬಲಿಸುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಿಲ್ಲ.

ಕ್ಯಾಮೆರಾ ವಿಶೇಷ

ಕ್ಯಾಮೆರಾ ವಿಶೇಷ

ಈ ಸ್ಮಾರ್ಟ್‌ಫೋನ್‌ ಡ್ಯುಯೆಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 13 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಶೂಟರ್ ಹೊಂದಿದೆ. ಇದರಲ್ಲಿ ಸ್ಪೀಡ್‌ವಾರ್ಪ್ ಮೋಡ್‌ನೊಂದಿಗೆ ಮೊದಲೇ ಲೋಡ್ ಆಗಿದ್ದು, ಇದು ಮಾಂಟೇಜ್‌ನಲ್ಲಿ ಮಲ್ಟಿ ಈವೆಂಟ್ಸ್‌ ಅನ್ನು ಸೆರೆಹಿಡಿಯಲು ನಿಮಗೆ ಅನುವು ಮಾಡಿಕೊಡುತ್ತದೆ. ಜೊತೆಗೆ ಫೋನ್ ಆಕ್ಷನ್ ಕ್ಯಾಮ್ ಮೋಡ್ ಅನ್ನು ಸಹ ಒಳಗೊಂಡಿದೆ. ಇದಲ್ಲದೆ ಕ್ಯಾಮೆರಾ ಸೆಟಪ್‌ Zeiss ಆಪ್ಟಿಕ್ಸ್‌ ಅನ್ನು ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನೋಕಿಯಾ XR20 ಸ್ಮಾರ್ಟ್‌ಫೋನ್‌ 4,630mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು18W ವೈರ್ಡ್ ಮತ್ತು 15W ವೈರ್‌ಲೆಸ್ (Qi ಸ್ಟ್ಯಾಂಡರ್ಡ್) ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈಫೈ 6, ಬ್ಲೂಟೂತ್ v5.1, ಯುಎಸ್‌ಬಿ ಟೈಪ್‌-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಇನ್ನು ಈ ಫೋನ್ ಸೈಡ್ ಮೌಂಟೆಡ್ ಫಿಂಗರ್‌ಪ್ರಿಂಟ್ ಸೆನ್ಸರ್ ಹೊಂದಿದೆ. ಇದಲ್ಲದೆ ಈ ಸ್ಆರ್ಟ್‌ಫೋನ್‌ ವಿಂಡ್‌ ನಾಯ್ಸ್‌ ಕ್ಯಾನ್ಸಲೇಶನ್‌ ಹೊಂದಿರುವ OZO ಪ್ರಾದೇಶಿಕ ಆಡಿಯೋ ರೆಕಾರ್ಡಿಂಗ್ ಬೆಂಬಲವನ್ನು ಹೊಂದಿದೆ. ಇದು ವಿಡಿಯೋ ರೆಕಾರ್ಡಿಂಗ್ ಹೆಚ್ಚಿಸಲು ಸಹಾಯ ಮಾಡುತ್ತದೆ. QZO ಪ್ಲೇಬ್ಯಾಕ್ ಬೆಂಬಲದೊಂದಿಗೆ ಜೋಡಿಸಲಾದ ಸ್ಟೀರಿಯೋ ಸ್ಪೀಕರ್‌ಗಳನ್ನು ಸಹ ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ನೋಕಿಯಾ XR20 ಸ್ಮಾರ್ಟ್‌ಫೋನ್‌ 6GB + 128GB ಸ್ಟೋರೇಜ್ ರೂಪಾಂತರಕ್ಕೆ 46,999.ರೂ ಬೆಲೆ ಹೊಂದಿದೆ. ಈ ಫೋನ್ ಇದೇ ಅಕ್ಟೋಬರ್ 20 ರಿಂದ ಗ್ರಾನೈಟ್ ಮತ್ತು ಅಲ್ಟ್ರಾ ಬ್ಲೂ ಬಣ್ಣಗಳ ಆಯ್ಕೆಯಲ್ಲಿ ಫ್ರೀ ಆರ್ಡರ್‌ಗೆ ಲಭ್ಯವಾಗಲಿದೆ. ಇದು ಅಕ್ಟೋಬರ್ 30 ರಿಂದ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಮತ್ತು ನೋಕಿಯಾ.ಕಾಮ್ ಮತ್ತು ರಿಟೇಲ್‌ ಸ್ಟೋರ್‌ಗಳಲ್ಲಿ ಮಾರಾಟವಾಗಲಿದೆ. ಇನ್ನು ಲಾಂಚ್‌ ಆಫರ್‌ನಲ್ಲಿ 3,599ರೂ ಮೌಲ್ಯದ ನೋಕಿಯಾ ಪವರ್ ಇಯರ್‌ಬಡ್ಸ್ ಲೈಟ್ ಅನ್ನು ಉಚಿತವಾಗಿ ಪಡೆಯಬಹುದಾಗಿದೆ. ಇನ್ನು ಫ್ರೀ ಬುಕಿಂಗ್ ಮೂಲಕ ಖರೀದಿಸಿದ ಗ್ರಾಹಕರಿಗೆ ಒಂದು ವರ್ಷದ ಸ್ಕ್ರೀನ್ ಪ್ರೊಟೆಕ್ಷನ್ ಪ್ಲಾನ್ ಉಚಿತವಾಗಿ ದೊರೆಯಲಿದೆ.

Best Mobiles in India

English summary
Nokia XR20 price in India has been set at Rs. 46,999 for the single 6GB + 128GB storage variant.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X