Just In
Don't Miss
- News
ಬರಲಿವೆ ಎಲಿವೇಟೆಡ್ ಇಂಟರ್ಸಿಟಿ ಸೆಮಿ-ಹೈಸ್ಪೀಡ್ ರೈಲುಗಳು: ಭಾರತ ಹಾಗೂ ಕರ್ನಾಟಕದ ಯಾವ ನಗರಗಳ ನಡುವೆ ಸಂಚಾರ?
- Automobiles
ಗ್ರಾಹಕರೇ... ಮಾರುತಿ ಸುಜುಕಿಯಿಂದ ಮಹತ್ವದ ಘೋಷಣೆ
- Movies
ವಾಣಿ ಜಯರಾಂ ಸಾವು: ಮರಣೋತ್ತರ ಪರೀಕ್ಷೆ ವಿವರ ಬಹಿರಂಗ
- Lifestyle
ಮಕ್ಕಳನ್ನು 'ಅಮ್ಮ' ದಡಾರದಿಂದ ರಕ್ಷಿಸಲು ಇದೇ ತಿಂಗಳು ತಪ್ಪದೆ ಕೊಡಿಸಿ MR ಲಸಿಕೆ
- Sports
IND vs AUS: ಭಾರತದಲ್ಲಿ ಟೆಸ್ಟ್ ಸರಣಿ ಗೆಲ್ಲಲು ಆಸ್ಟ್ರೇಲಿಯಾವನ್ನು ಬೆಂಬಲಿಸಿದ ಶ್ರೀಲಂಕಾ ಲೆಜೆಂಡ್
- Finance
Twitter: ಟ್ವಿಟ್ಟರ್ನಲ್ಲಿ ಗೋಲ್ಡ್ ಬ್ಯಾಡ್ಜ್ ಉಳಿಸಿಕೊಳ್ಳಬೇಕಾದರೆ ಇಷ್ಟು ಮೊತ್ತ ಪಾವತಿಸಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ ಬೆಲೆಯಲ್ಲಿ ಮತ್ತೊಮ್ಮೆ ಭರ್ಜರಿ ಇಳಿಕೆ!
ಮೊಬೈಲ್ ಮಾರುಕಟ್ಟೆಗೆ ಭಾರೀ ಸದ್ದಿನೊಂದಿಗೆ ಎಂಟ್ರಿ ಕೊಟ್ಟಿರುವ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ ಈಗಾಗಲೇ ಫೋನ್ ಪ್ರಿಯರನ್ನು ಸೆಳೆದಿದೆ. ಡಿಸೈನ್, ಪ್ರೊಸೆಸರ್ ನಂತಹ ಕೆಲವು ಫೀಚರ್ಸ್‌ಗಳಿಂದ ಟ್ರೆಂಡಿಂಗ್‌ನಲ್ಲಿ ಗುರುತಿಸಿಕೊಂಡಿರುವ ಈ ಫೋನ್ ಇದೀಗ ಮತ್ತೊಮ್ಮೆ ಭರ್ಜರಿ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ಇ ಕಾಮರ್ಸ್ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ (128GB ವೇರಿಯಂಟ್) ಈಗ ಶೇ. 27% ರಿಯಾಯಿತಿ ಪಡೆದಿದ್ದು, 27,499ರೂ. ಪ್ರೈಸ್ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇದೇ ರೀತಿ ಸುಮಾರು 17,500ರೂ. ಗಳ ವರೆಗೆ ಎಕ್ಸ್‌ಚೇಂಜ್ ಆಫರ್‌ನ ಆಯ್ಕೆಯನ್ನು ಇದು ಪಡೆದಿದೆ. ಹಾಗೆಯೇ ನೋ ಕಾಸ್ಟ್ ಇಎಮ್‌ಐ ಆಯ್ಕೆಗಳು ಲಭ್ಯ ಇವೆ. ಹಾಗಾದರೆ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ನಥಿಂಗ್ ಫೋನ್ (1) 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದಲ್ಲದೆ ಹ್ಯಾಪ್ಟಿಕ್ ಟಚ್ ಮೋಟರ್‌ಗಳನ್ನು ಕೂಡ ಒಳಗೊಂಡಿದೆ.

ಪ್ರೊಸೆಸರ್ ಕಾರ್ಯವೈಖರಿ ಹೇಗಿದೆ?
ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256 GB ಮತ್ತು 12GB RAM + 256 GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಯಾವುದೇ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಬೆಂಬಲಿಸುವುದಿಲ್ಲ ಎಂದು ನಥಿಂಗ್ ಕಂಪೆನಿ ಹೇಳಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷತೆ
ನಥಿಂಗ್ ಫೋನ್ (1) ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ. ಇನ್ನು ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ JN1 ಸೆನ್ಸಾರ್ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮ್ಯಾಕ್ರೋ ಮೋಡ್ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್ ಎಷ್ಟು? ಇತರೆ ಫೀಚರ್ಸ್‌ಗಳೇನು?
ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಬೆಂಬಲವನ್ನು ಕೂಡ ಹೊಂದಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470