Home
ಸುದ್ದಿಜಾಲ

ಮತ್ತೆ ಭಾರೀ ಡಿಸ್ಕೌಂಟ್‌ನಲ್ಲಿ ನಥಿಂಗ್ ಫೋನ್ (1) ಖರೀದಿಗೆ ಲಭ್ಯ!

ಪ್ರಸ್ತುತ ಮೊಬೈಲ್‌ ಮಾರುಕಟ್ಟೆಯಲ್ಲಿ ಭಿನ್ನವಾಗಿ ಎಂಟ್ರಿ ಕೊಟ್ಟಿರುವ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ ಡಿಸೈನ್‌ನಿಂದ ಈಗಾಗಲೇ ಫೋನ್‌ ಪ್ರಿಯರನ್ನು ಸೆಳೆದಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ಇದು ಡ್ಯುಯಲ್‌ ಕ್ಯಾಮೆರಾ ರಚನೆಯನ್ನು ಪಡೆದಿದೆ. ನಥಿಂಗ್ ಫೋನ್ (1) ಇದೀಗ ಮತ್ತೆ ಭಾರೀ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ಖರೀದಿಸಬಹುದಾಗಿದೆ

ಹೌದು, ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ (128GB ವೇರಿಯಂಟ್‌) ಈಗ 27,999ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. 2,000ರೂ. ರಿಯಾಯಿತಿ ಇದ್ದು, ಈ ಡಿಸ್ಕೌಂಟ್‌ ಬಳಿಕ ಗ್ರಾಹಕರು 25,999ರೂ. ಗಳಿಗೆ ಖರೀದಿಸಬಹುದಾಗಿದೆ. ಹೆಚ್ಚುವರಿಯಾಗಿ ಎಕ್ಸ್‌ಚೇಂಜ್ ಆಫರ್‌ನ ಹಾಗೂ ನೋ ಕಾಸ್ಟ್‌ ಇಎಮ್‌ಐ ಆಯ್ಕೆಗಳು ಸಹ ಲಭ್ಯ ಇವೆ. ಹಾಗಾದರೆ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನಿನ ಫೀಚರ್ಸ್‌ಗಳ ಬಗ್ಗೆ ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256 GB ಮತ್ತು 12GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಬೆಂಬಲಿಸುವುದಿಲ್ಲ.

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇನ್ನು ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ JN1 ಸೆನ್ಸಾರ್‌ ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್‌ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಬೆಂಬಲವನ್ನು ಕೂಡ ಹೊಂದಿದೆ.

Best Mobiles in India

English summary
Nothing Phone (1) available at discounted rates on Flipkart.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+