ನಥಿಂಗ್ ಫೋನ್ (1): ಪ್ರೀ ಆರ್ಡರ್ ಮಾಡಿದ ಗ್ರಾಹಕರಿಗೆ ಲಭ್ಯ!..ಕೊಡುಗೆ ಏನು?

|

ಇತ್ತೀಚೆಗಷ್ಟೆ ಮೊಬೈಲ್‌ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ನಥಿಂಗ್‌ ಫೋನ್‌ 1 (Nothing Phone 1) ಕೆಲವು ಆಕರ್ಷಕ ಫೀಚರ್ಸ್‌ಗಳಿಂದ ಮೊಬೈಲ್‌ ಪ್ರಿಯರನ್ನು ಸೆಳೆದಿದೆ. ಈ ಫೋನ್ ಫ್ಲಿಪ್‌ಕಾರ್ಟ್‌ನಲ್ಲಿ ಮುಂಗಡ-ಆರ್ಡರ್ ಪಾಸ್‌ಗಳನ್ನು ಆರ್ಡರ್ ಮಾಡಿದವರಿಗೆ ಖರೀದಿಗೆ ಲಭ್ಯವಿದೆ. ಹಾಗೆಯೇ ಕಂಪನಿಯು ಮುಂಗಡ-ಆರ್ಡರ್ ಪಾಸ್‌ಗಳ ವ್ಯಾಲಿಡಿಟಿಯನ್ನು ವಿಸ್ತರಿಸಿದ್ದು, ಬಳಕೆದಾರರು ಈಗ ಜುಲೈ 20 ರ ಮಧ್ಯರಾತ್ರಿಯವರೆಗೆ ಮುಂಗಡ-ಆರ್ಡರ್ ಪಾಸ್‌ನ ಪ್ರಯೋಜನಗಳನ್ನು ಪಡೆಯಬಹುದು. ಈ ಮೊದಲು ನಥಿಂಗ್ ಫೋನ್ (1) ಮುಂಗಡ-ಆರ್ಡರ್ ಪಾಸ್‌ಗಳು ಜುಲೈ 19 ರವರೆಗೆ ಮಾನ್ಯತೆಯನ್ನು ಹೊಂದಿದ್ದವು.

ಗ್ರಾಹಕರ

ಮುಂಗಡ ಆರ್ಡರ್ ಮಾಡಿದ ಗ್ರಾಹಕರ ಖರೀದಿಗೆ ನಥಿಂಗ್ ಫೋನ್ 1 ಲಭ್ಯ ಇದೆ. ಇನ್ನು ನಥಿಂಗ್‌ ಫೋನ್‌ 1 ಫೋನಿನ ಓಪನ್‌ ಸೇಲ್‌ ಇದೇ ಜುಲೈ 21 ರಿಂದ ಪ್ರಾರಂಭವಾಗಲಿದೆ. ಇನ್ನು ಈ ಫೋನ್‌ 8GB + 128GB, 8GB + 256GB, ಮತ್ತು 12GB + 256GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇನ್ನು ಬೇಸ್‌ ವೇರಿಯಂಟ್‌ ಮಾಡೆಲ್‌ ಬೆಲೆಯು 32,999 ರೂ. ಆಗಿದೆ. ಇನ್ನುಳಿದಂತೆ ನಥಿಂಗ್ ಫೋನ್‌ 1 ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ತ್ವರಿತ

ನಥಿಂಗ್ ಫೋನ್ (1) ಮಾರಾಟದ ಬ್ಯಾನರ್ ಈಗಾಗಲೇ ಫ್ಲಿಪ್‌ಕಾರ್ಟ್‌ನಲ್ಲಿ ಲೈವ್ ಆಗಿದೆ. ಖರೀದಿದಾರರು ಹೆಚ್‌ಡಿಎಫ್‌ಸಿ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮತ್ತು ಇಎಮ್‌ಐ ವಹಿವಾಟುಗಳೊಂದಿಗೆ 2,000 ರೂ. ತ್ವರಿತ ರಿಯಾಯಿತಿಯನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಇ-ಕಾಮರ್ಸ್ ಸೈಟ್‌ನಲ್ಲಿರುವ ಬ್ಯಾನರ್ ಖಚಿತಪಡಿಸುತ್ತದೆ. ಅಲ್ಲದೆ, ಮುಂಗಡ-ಆರ್ಡರ್ ಗ್ರಾಹಕರಿಗೆ, ಬ್ರ್ಯಾಂಡ್ ತ್ವರಿತ 1,000 ರೂ. ಹೆಚ್ಚುವರಿ ರಿಯಾಯಿತಿಯನ್ನು ನೀಡುತ್ತಿದೆ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಹ್ಯಾಪ್ಟಿಕ್ ಟಚ್ ಮೋಟರ್‌ಗಳನ್ನು ಕೂಡ ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256 GB ಮತ್ತು 12GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಬೆಂಬಲಿಸುವುದಿಲ್ಲ ಎಂದು ನಥಿಂಗ್‌ ಕಂಪೆನಿ ಹೇಳಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ. ಇನ್ನು ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ JN1 ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್‌ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಎಲೆಕ್ಟ್ರಾನಿಕ್ ಕಂಪಾಸ್‌, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಬೆಂಬಲವನ್ನು ಕೂಡ ಹೊಂದಿದೆ.

ಕಾಮರ್ಸ್‌

ಬಿಡುಗಡೆಗೂ ಮುನ್ನವೇ ಸಾಕಷ್ಟು ಕುತೂಹಲ ಮೂಡಿಸಿದ್ದ ನಥಿಂಗ್‌ ಫೋನ್‌ (1) Nothing Phone (1) ಕೆಲವು ಹೊಸತನದೊಂದಿಗೆ ಮಾರುಕಟ್ಟೆಗೆ ಬಂದಿದೆ. ಈ ಫೋನಿನೊಂದಿಗೆ ಚಾರ್ಜರ್‌ ನೀಡಲಾಗಿಲ್ಲ ಕೇವಲ ಟೈಪ್‌-ಸಿ ಚಾರ್ಜಿಂಗ್ ಕೇಬಲ್‌ ಲಭ್ಯ ಮಾಡಿದೆ. ಆದ್ರೆ, ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ಚಾರ್ಜಿಂಗ್‌ ಬ್ರಿಕ್‌, ಕೇಸ್‌, ಟೆಂಪರ್ಡ್‌ ಗ್ಲಾಸ್‌ ಸ್ಕ್ರೀನ್‌ ಪ್ರೊಟೆಕ್ಟರ್ ಗಳನ್ನು ಪರಿಚಯಿಸಿದೆ. ನಥಿಂಗ್‌ ಫೋನ್‌ (1) ಖರೀದಿ ಮಾಡುವ ಗ್ರಾಹಕರು ಪ್ರತ್ಯೇಕವಾಗಿ ಚಾರ್ಜರ್‌ ಖರೀದಿಸಬೇಕು.

ದರವು

ಹಾಗೆಯೇ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ ನಥಿಂಗ್ ಫೋನ್ (1) ಚಾರ್ಜರ್ ನಥಿಂಗ್ ಪವರ್ (45W) ಡಿವೈಸ್ ಬೆಲೆಯು 1,499ರೂ. ಆಗಿದೆ. ಇನ್ನು ಸ್ಕ್ರೀನ್‌ ಪ್ರೊಟೆಕ್ಟರ್ ದರವು 999ರೂ. ಆಗಿದ್ದು, ಟ್ರಾನ್ಸ್ಫರೇನ್ಸ್‌ ಕೇಸ್‌ ಬೆಲೆಯು 1,499ರೂ. ಆಗಿದೆ.

ಫಸ್ಟ್ ಸೇಲ್‌ ಯಾವಾಗ?..ಬೆಲೆ ಎಷ್ಟಿದೆ?

ಫಸ್ಟ್ ಸೇಲ್‌ ಯಾವಾಗ?..ಬೆಲೆ ಎಷ್ಟಿದೆ?

ಭಾರತದಲ್ಲಿ ನಥಿಂಗ್ ಫೋನ್ (1) (Nothing Phone (1)) ಫಸ್ಟ್‌ ಸೇಲ್‌ ಇದೇ ಜುಲೈ 21, 2022 ರಂದು ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಗೆ ಲಭ್ಯವಾಗಲಿದೆ. ಇನ್ನು ಈ ಫೋನ್‌ 8GB RAM + 128GB ಸ್ಟೋರೇಜ್ ಆಯ್ಕೆಗೆ 32,999ರೂ. ಬೆಲೆಯಲ್ಲಿ ಬರುತ್ತದೆ. 8GB RAM + 256GB ಸ್ಟೋರೇಜ್ ಆಯ್ಕೆಯು 35,999ರೂ. ಬೆಲೆಯನ್ನು ಹೊಂದಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ಆಯ್ಕೆಯು 38,999ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಚಾರ್ಜರ್ ನಥಿಂಗ್ ಪವರ್ (45W) ಡಿವೈಸ್ ಬೆಲೆಯು 1,499ರೂ. ಆಗಿದೆ.

Most Read Articles
Best Mobiles in India

English summary
Nothing Phone (1) available on Flipkart for pre-orders today: Price and Offers.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X