ನಥಿಂಗ್ ಫೋನ್ (1) ಬೆಲೆಯಲ್ಲಿ ಇಳಿಕೆ!..ಈ ಕೊಡುಗೆ ಮಿಸ್ ಮಾಡಬೇಡಿ!
ಸಥಿಂಗ್ ಸಂಸ್ಥೆಯು ಹೊಸ ಸಥಿಂಗ್ ಫೋನ್ 2 ಬಿಡುಗಡೆ ಮಾಡುತ್ತಿರುವ ಬೆನ್ನಲ್ಲೆ, ಗ್ರಾಹಕರಗೆ ಖುಷಿ ವಿಚಾರ. ಮೊಬೈಲ್ ಮಾರುಕಟ್ಟೆಯಲ್ಲಿ ಗಮನ ಸೆಳೆದಿದ್ದ ನಥಿಂಗ್ ಫೋನ್ 1 ಈಗ ಭರ್ಜರಿ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಫೋನ್ ಡಿಸೈನ್ ಆಕರ್ಷಕವಾಗಿದ್ದು, ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಪವರ್ ಅನ್ನು ಒಳಗೊಂಡಿದೆ.
ಹೌದು, ನಥಿಂಗ್ ಫೋನ್ 1 ಇ ಕಾಮರ್ಸ್ ದೈತ್ಯ ಫ್ಲಿಪ್‌ಕಾರ್ಟ್‌ನಲ್ಲಿ ಈಗ 23% ರಷ್ಟು ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. 8GB RAM + 256GB ಸ್ಟೋರೇಜ್ ವೇರಿಯಂಟ್ 39,999ರೂ. ಪ್ರೈಸ್ ಹೊಂದಿದ್ದು, ಕೊಡುಗೆಯಲ್ಲಿ 30,499ರೂ. ಗಳಿಗೆ ಖರೀದಿಸಬಹುದಾಗಿದೆ. ಹಾಗಾದರೆ ಈ ಫೋನಿನ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್ಪ್ಲೇ ರಚನೆ ಹೇಗಿದೆ : ನಥಿಂಗ್ ಫೋನ್ (1) ಫೋನ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಜೊತೆಗೆ 1,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಹೊಂದಿದೆ.
ಪ್ರೊಸೆಸರ್ ಬಲ ಯಾವುದು : ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಪವರ್ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಸಪೋರ್ಟ್ ನೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM + 256 GB ಮತ್ತು 12GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯ.
ಕ್ಯಾಮೆರಾ ಸೆನ್ಸಾರ್ ಸ್ಪೆಷಲ್ : ನಥಿಂಗ್ ಫೋನ್ (1) ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಹೊಂದಿದೆ. ಸೆಕೆಂಡಿರಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮ್ಯಾಕ್ರೋ ಮೋಡ್ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಜೊತೆಗೆ 16 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್ ಮತ್ತು ಇತರೆ ಸೌಲಭ್ಯ : ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ 4500mAh ಬ್ಯಾಟರಿ ಹೊಂದಿದ್ದು, 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಹಾಗೆಯೇ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.
ಇದಲ್ಲದೇ ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್, ಅಕ್ಸಿಲೆರೊಮೀಟರ್, ಎಲೆಕ್ಟ್ರಾನಿಕ್ ಕಂಪಾಸ್, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್ ಹಾಗೂ ಪ್ರಾಕ್ಸಿಮಿಟಿ ಸೆನ್ಸಾರ್ ಆಯ್ಕೆಗಳನ್ನು ಸಹ ಪಡೆದುಕೊಂಡಿದೆ. ಜೊತೆಗೆ ಈ ಫೋನ್ ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಸಪೋರ್ಟ್ ಕೂಡ ಹೊಂದಿದೆ.


Click it and Unblock the Notifications








