ಆಕರ್ಷಕ ಡಿಸೈನ್ ಇರುವ ಈ ನಥಿಂಗ್ ಫೋನ್ ಮೊಬೈಲ್‌ಗೆ ಸೂಪರ್ ಆಫರ್!
ಇತ್ತೀಚಿಗೆ ಮೊಬೈಲ್ ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡಿರುವ ನಥಿಂಗ್ ಮೊಬೈಲ್ ಸಂಸ್ಥೆಯ ನಥಿಂಗ್ ಫೋನ್ (1) ಮೊಬೈಲ್ ಭಿನ್ನ ಡಿಸೈನ್ ಹೊಂದಿದೆ. ಈಗಾಗಲೇ ಹಲವು ಭಾರೀ ಡಿಸ್ಕೌಂಟ್ ಬೆಲೆಯಲ್ಲಿ ಕಾಣಿಸಿಕೊಂಡಿರುವ ಈ ನಥಿಂಗ್ ಫೋನ್ (1) ಮೊಬೈಲ್ ಇದೀಗ ಮತ್ತೆ ಭಾರೀ ಬೆಲೆಯಲ್ಲಿ ಇಳಿಕೆ ದರದಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ನಥಿಂಗ್ ಫೋನ್ (1) ಮೊಬೈಲ್ ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ನಲ್ಲಿ ಶೇ. 21% ರಷ್ಟು ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್ 128 GB ಸ್ಟೋರೇಜ್ ವೇರಿಯಂಟ್ ಬೆಲೆಯು 37,999ರೂ. ಇದ್ದು, ಕೊಡುಗೆಯಲ್ಲಿ 29,999ರೂ. ಗಳಿಗೆ ಬೆಲೆ ಪಡೆದಿದೆ. ಫ್ಲಿಪ್‌ಕಾರ್ಟ್ ಸದ್ಯ ಸ್ಟಾಕ್ ಅಲಭ್ಯ ಎಂದಿದೆ. ಅಂದಹಾಗೆ ಈ ಮೊಬೈಲ್ ಫೋನ್ ಬ್ಲ್ಯಾಕ್ ಹಾಗೂ ವೈಟ್ ಕಲರ್ ಆಯ್ಕೆಗಳನ್ನು ಹೊಂದಿದೆ.

ಇನ್ನು ಈ ಫೋನ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಸಾಮರ್ಥ್ಯ ಅನ್ನು ಪಡೆದುಕೊಂಡಿದ್ದು, 8GB RAM + 256 GB ಮತ್ತು 12GB RAM + 256 GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಒಳಗೊಂಡಿದೆ. ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದುಕೊಂಡಿದೆ. ಹಾಗಾದರೆ ನಥಿಂಗ್ ಫೋನ್ (1) ಮೊಬೈಲ್‌ನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ಡಿಸೈನ್ ಮತ್ತು ವಿನ್ಯಾಸ ಹೀಗಿದೆ
ನಥಿಂಗ್ ಫೋನ್ (1) ಮೊಬೈಲ್ 6.55 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇ 1,080 x 2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹಾಗೂ 1,200 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಜೊತೆಗೆ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್ ಅನ್ನು ಪಡೆದಿದೆ.
ಪ್ರೊಸೆಸರ್ ಕಾರ್ಯವೈಖರಿಯ ಮಾಹಿತಿ
ನಥಿಂಗ್ ಫೋನ್ (1) ಮೊಬೈಲ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್ ಪವರ್‌ನಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್ ಸಫೋರ್ಟ್ ಇದೆ. ಇದರ ಜೊತೆಗೆ 8GB RAM + 256 GB ಮತ್ತು 12GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯದ ಮೂರು ವೇರಿಯೆಂಟ್ ಆಯ್ಕೆಯಲ್ಲಿ ಲಭ್ಯ.

ಡ್ಯುಯಲ್ ಕ್ಯಾಮೆರಾ ಸೆನ್ಸಾರ್ ಸೌಲಭ್ಯ
ನಥಿಂಗ್ ಫೋನ್ (1) ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್ ಆಗಿದೆ. ಸೆಕೆಂಡರಿ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ JN1 ಸೆನ್ಸಾರ್ ಆಗಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಅಧಿಕ ಬ್ಯಾಟರಿ ಬ್ಯಾಕ್‌ಅಪ್ ಮತ್ತು ಇತರೆ ಮಾಹಿತಿ
ನಥಿಂಗ್ ಫೋನ್ (1) ಮೊಬೈಲ್ 4500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಅಲ್ಲದೇ ಈ ಫೋನ್ ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS ಹಾಗೂ USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.


Click it and Unblock the Notifications








