Home
ಸುದ್ದಿಜಾಲ

ಭಾರಿ ಸದ್ದು ಮಾಡಿದ್ದ ಈ ಸ್ಮಾರ್ಟ್‌ಫೋನ್‌ ಮೇಲೆ ಫ್ಲಿಪ್‌ಕಾರ್ಟ್‌ ನೀಡುತ್ತಿದೆ ಬಿಗ್‌ ಆಫರ್‌!

ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ಶಾಪಿಂಗ್‌ ಪ್ರಿಯರ ನೆಚ್ಚಿನ ಇ-ಕಾಮರ್ಸ್‌ ತಾಣವಾಗಿ ಗುರುತಿಸಿಕೊಂಡಿದೆ. ಆನ್‌ಲೈನ್‌ ಶಾಪಿಂಗ್‌ ಗ್ರಾಹಕರಿಗಾಗಿ ವಿಶೇಷ ಸೇಲ್‌ಗಳನ್ನು ಫ್ಲಿಪ್‌ಕಾರ್ಟ್‌ ನಡೆಸುತ್ತಾ ಬಂದಿದೆ. ಇದೀಗ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಘೋಷಣೆ ಮಾಡಿದೆ. ಈ ಸೇಲ್‌ನಲ್ಲಿ ನೆಚ್ಚಿನ ಸ್ಮಾರ್ಟ್‌ಫೋನ್‌ಗಳ ಮೇಲೆ ಭರ್ಜರಿ ಡಿಸ್ಕೌಂಟ್‌ ನೀಡುತ್ತಿದೆ.

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಇದೇ ಆಕ್ಟೋಬರ್‌ 8 ರಿಂದ 15ರ ವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಸ್ಮಾರ್ಟ್‌ಫೋನ್‌ಗಳು ಸೇರಿದಂತೆ ಅನೇಕ ಪ್ರಾಡಕ್ಟ್‌ಗಳ ಮೇಲೆ ಭರ್ಜರಿ ಆಫರ್‌ಗಳನ್ನು ಘೋಷಿಸಲಾಗಿದೆ. ಅದರ ಸಣ್ಣ ಝಲಕ್‌ ಎನ್ನುವಂತೆ ಫ್ಲಿಪ್‌ಕಾರ್ಟ್‌ ನಥಿಂಗ್‌ ಫೋನ್‌ (1) ಮೇಲೆ ಭಾರಿ ರಿಯಾಯಿತಿಯನ್ನು ಘೋಷಣೆ ಮಾಡಿದೆ. ಹಾಗಾದ್ರೆ ಈ ಸೇಲ್‌ನಲ್ಲಿ ನಥಿಂಗ್‌ ಫೋನ್‌ (1) ಯಾವ ಬೆಲೆಯಲ್ಲಿ ದೊರೆಯಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರಿ ಸದ್ದು ಮಾಡಿದ್ದ ಈ ಫೋನ್‌ ಮೇಲೆ ಫ್ಲಿಪ್‌ಕಾರ್ಟ್‌ ನೀಡುತ್ತಿದೆ ಬಿಗ್‌ ಆಫರ್‌!

ನಥಿಂಗ್ ಫೋನ್ (1) ಮೇಲೆ ಬಿಗ್‌ ಆಫರ್‌
ಸ್ಮಾರ್ಟ್‌ಫೋನ್‌ ವಿನ್ಯಾಸದ ಮೂಲಕವೇ ಮೊಬೈಲ್‌ ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿಸಿದ್ದ ಫೋನ್‌ ಅಂದರೆ ಅದು ನಥಿಂಗ್ ಫೋನ್ (1). ತನ್ನ ವಿಭಿನ್ನ ಶೈಲಿಯ ಪ್ಯಾನಲ್‌ ಮೂಲಕ ಹೊಸ ಕ್ರಾಂತಿ ಬರೆದಿದ್ದ ನಥಿಂಗ್ ಫೋನ್ (1) ಇದೀಗ ಭಾರಿ ಡಿಸ್ಕೌಂಟ್‌ನಲ್ಲಿ ಲಭ್ಯವಾಗಲಿದೆ. ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಸಮಯದಲ್ಲಿ ಇದರ ಬೆಲೆ ಕೇವಲ 23,999ರೂ.ಗಳಿಂದ ಪ್ರಾರಂಭವಾಗಲಿದೆ. ಇದರಲ್ಲಿ ಹಲವು ಆಫರ್‌ಗಳು ಕೂಡ ಸೇರಿರಲಿದೆ ಎಂದು ಹೇಳಲಾಗಿದೆ.

ನಥಿಂಗ್ ಫೋನ್ (1) ಫೀಚರ್ಸ್‌ ಹೇಗಿದೆ?
ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಇದು 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ Samsung JN1 ಸೆನ್ಸಾರ್‌ ಹೊಂದಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್‌ ಮತ್ತು USB ಟೈಪ್-ಸಿ ಪೋರ್ಟ್ ಹೊಂದಿದೆ.

ಇನ್ನು ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ನಲ್ಲಿ ಗೂಗಲ್‌ ಪಿಕ್ಸೆಲ್‌ 7 ಫೋನ್‌ ಮೇಲೆ ಕೂಡ ಭರ್ಜರಿ ಆಫರ್‌ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ ಬಿಗ್‌ ಬಿಲಿಯನ್‌ ಡೇಸ್‌ ಸೇಲ್‌ ಸಮಯದಲ್ಲಿ ಕೇವಲ 36,999ರೂ. ಬೆಲೆಯಲ್ಲಿ ಪ್ರಾರಂಭವಾಗಲಿದೆ. ಈ ಬೆಲೆಯು ಬ್ಯಾಂಕ್‌ ಆಫರ್‌ಗಳನ್ನು ಹೊರತುಪಡಿಸಲಾಗಿದೆ. ಬ್ಯಾಂಕ್‌ ಆಫರ್‌ಗಳನ್ನು ಕೂಡ ಸೇರ್ಪಡೆ ಮಾಡಿದರೆ ಇದರ ಬೆಲೆ ಇನ್ನಷ್ಟು ಕಡಿಮೆ ಆಗಲಿದೆ. ಇದರಿಂದ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದುಕೊಂಡವರಿಗೆ ಇದು ಬೆಸ್ಟ್‌ ಟೈಂ ಆಗಿರಲಿದೆ.

Best Mobiles in India

English summary
Nothing Phone (1) to get massive discounts in Flipkart Big Billion Days sale: price Details revealed
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+