ಹೊಸದಾಗಿ ನಥಿಂಗ್ ಫೋನ್ (1) ಖರೀದಿಸಬೇಕೆ?..ಹಾಗಿದ್ರೆ, ತಡ ಮಾಡಬೇಡಿ!

|

ನಥಿಂಗ್ ಫೋನ್ (1) ಈಗಾಗಲೇ ತನ್ನ ವಿಶೇಷ ವಿನ್ಯಾಸದ ರಚನೆಯಿಂದ ಮೊಬೈಲ್‌ ಪ್ರಿಯರ ಗಮನ ಸೆಳೆದಿದೆ. ಈಗ ಮತ್ತೆ ಗ್ರಾಹಕರು ತಿರುಗಿ ನೋಡುವಂತೆ ಮಾಡಿದ್ದು, ಈ ಫೋನ್ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ ನಡೆಯುತ್ತಿರುವ ಸೇಲ್‌ನಲ್ಲಿ 6,500ರೂ. ಗಳ ರಿಯಾಯಿತಿಯಲ್ಲಿ ಕಾಣಿಸಿಕೊಂಡಿದೆ.

ನಥಿಂಗ್ ಫೋನ್ (1)

ಹೌದು, ಫ್ಲಿಪ್‌ಕಾರ್ಟ್‌ನ ಸೇಲ್‌ನಲ್ಲಿ ನಥಿಂಗ್ ಫೋನ್ (1) ಭರ್ಜರಿ ರಿಯಾಯಿತಿ ದರದಲ್ಲಿ ಲಭ್ಯವಿದೆ. ಗ್ರಾಹಕರು ಬ್ಯಾಂಕ್ ಕೊಡುಗೆಯನ್ನು ಒಳಗೊಂಡಂತೆ, ನಥಿಂಗ್ ಫೋನ್ (1) ಅನ್ನು 26,249ರೂ. ಗಳ ಬೆಲೆಯಲ್ಲಿ ಖರೀದಿಸಬಹುದಾಗಿದೆ. ಅಂದಹಾಗೆ ಈ ಫೋನ್ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 778G+ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ ಬನ್ನಿರಿ.

ನಥಿಂಗ್ ಫೋನ್ (1) ರಿಯಾಯಿತಿ ಬೆಲೆ ಪ್ರೈಸ್‌ ಲಿಸ್ಟ್‌:

ನಥಿಂಗ್ ಫೋನ್ (1) ರಿಯಾಯಿತಿ ಬೆಲೆ ಪ್ರೈಸ್‌ ಲಿಸ್ಟ್‌:

8GB + 128GB ವೇರಿಯಂಟ್‌ ಡಿಸ್ಕೌಂಟ್‌ನಲ್ಲಿ 26,249ರೂ. ಗೆ ಲಭ್ಯ.
8GB + 256GB ವೇರಿಯಂಟ್‌ ಡಿಸ್ಕೌಂಟ್‌ನಲ್ಲಿ 29,249ರೂ. ಗೆ ಲಭ್ಯ.
12GB + 256GB ವೇರಿಯಂಟ್‌ ಡಿಸ್ಕೌಂಟ್‌ನಲ್ಲಿ 31,249ರೂ. ಗೆ ಲಭ್ಯ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ

ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080 x 2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಹ್ಯಾಪ್ಟಿಕ್ ಟಚ್ ಮೋಟರ್‌ಗಳನ್ನು ಕೂಡ ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256 GB ಮತ್ತು 12GB RAM + 256 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಬೆಂಬಲಿಸುವುದಿಲ್ಲ ಎಂದು ನಥಿಂಗ್‌ ಕಂಪೆನಿ ಹೇಳಿದೆ.

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ಕ್ಯಾಮೆರಾ ಸೆನ್ಸಾರ್ ವಿಶೇಷತೆ

ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ. ಇನ್ನು ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್‌ JN1 ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ.

ಪನೋರಮಾ ನೈಟ್ ಮೋಡ್

ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್‌ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ.

ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್

ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಎಲೆಕ್ಟ್ರಾನಿಕ್ ಕಂಪಾಸ್‌, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಬೆಂಬಲವನ್ನು ಕೂಡ ಹೊಂದಿದೆ.

Best Mobiles in India

English summary
Nothing Phone (1) With Flat Rs 6,500 Discount on Flipkart: Check this offer.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X