Home
ಸುದ್ದಿಜಾಲ

ಮಾರುಕಟ್ಟೆಗೆ ಎಂಟ್ರಿ ಕೊಟ್ಟ ನಥಿಂಗ್‌ ಫೋನ್‌(1)! ಭಾರತದಲ್ಲಿ ಬೆಲೆ ಎಷ್ಟು?

ಟೆಕ್‌ ವಲಯದಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದ ನಥಿಂಗ್‌ ಫೋನ್‌(1) ಅಂತಿಮವಾಗಿ ಬಿಡುಗಡೆಯಾಗಿದೆ. ಘೋಷಣೆಯಾದ ದಿನದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ನಥಿಂಗ್‌ ಫೋನ್‌ (1) ಫೀಚರ್ಸ್‌ ಲೀಕ್‌ ಮೂಲಕ ಇನ್ನಷ್ಟು ಕುತೂಹಲ ಮೂಡಿಸಿತ್ತು. ಯುಎಸ್‌ ಮೂಲದ ನಥಿಂಗ್‌ ಫೋನ್‌ (1) ತನ್ನ ಆಕರ್ಷಕ ವಿನ್ಯಾಸ ಹಾಗೂ ಫೀಚರ್ಸ್‌ಗಳ ಮೂಲಕ ಗಮನ ಸೆಳೆದಿದೆ. ಈ ಸ್ಮಾರ್ಟ್‌ಫೋನ್‌ ಟೆಕ್‌ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಟಿಸುವ ಸೂಚನೆ ನೀಡಿದೆ.

ನಥಿಂಗ್‌

ಹೌದು, ನಥಿಂಗ್‌ ಕಂಪೆನಿ ತನ್ನ ಮೊದಲ ಸ್ಮಾರ್ಟ್‌ಫೋನ್‌ ನಥಿಂಗ್‌ ಫೋನ್‌ (1) ಅನ್ನು ಭಾರತ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಅನಾವರಣಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ರಿಯರ್‌ ಪ್ಯಾನೆಲ್‌ನಲ್ಲಿ 900 ಎಲ್‌ಇಡಿಗಳು ಮತ್ತು ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778+ SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್‌ 12 ಆಪರೇಟಿಂಗ್ ಸಿಸ್ಟಂ ಜೊತೆಗೆ ನಥಿಂಗ್‌ OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.

ನಥಿಂಗ್‌ ಫೋನ್‌(1)

ನಥಿಂಗ್‌ ಫೋನ್‌(1) ಗ್ಲಿಫ್ ಇಂಟರ್‌ಫೇಸ್ ಅನ್ನು ಸಹ ನೀಡುತ್ತದೆ. ಇದು ನಿಮ್ಮ ಸ್ಮಾರ್ಟ್‌ಫೋನ್‌ಗೆ ನ್ಯೂ ನೋಟಿಫಿಕೇಶನ್‌ ಅಥವಾ ಕರೆ ಬಂದಾಗ ಲೈಟ್‌ ಆನ್‌ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 10 ಗ್ಲಿಫ್ ಪ್ಯಾಟರ್ನ್‌ಗಳನ್ನು ಒದಗಿಸುತ್ತದೆ. ಭಾರತದಲ್ಲಿ ನಥಿಂಗ್‌ ಫೋನ್‌(1) ಬೆಲೆ 32,999ರೂ.ಗಳಿಂದ ಪ್ರಾರಂಭವಾಗಲಿದ್ದು 38,999ರೂ. ಇರಲಿದೆ. ಈ ಸ್ಮಾರ್ಟ್‌ಫೋನ್ ಒಟ್ಟು ಮೂರು ರೂಪಾಂತರಗಳ ಆಯ್ಕೆಯಲ್ಲಿ ಬರಲಿದೆ. ಇದು ವೈಟ್‌ ಮತ್ತು ಬ್ಲಾಕ್‌ ಕಲರ್‌ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಇನ್ನುಳಿದಂತೆ ಈ ಹೊಸ ನಥಿಂಗ್‌ ಫೋನ್‌(1) ವಿಶೇಷತೆ ಏನು? ಇದರ ಫೀಚರ್ಸ್‌ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ಹೇಗಿದೆ?

ಡಿಸ್‌ಪ್ಲೇ ಹೇಗಿದೆ?

ನಥಿಂಗ್ ಫೋನ್ (1) 6.55 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ಅಡಾಪ್ಟಿವ್ ರಿಫ್ರೆಶ್ ರೇಟ್ ಹೊಂದಿದ್ದು, 1,200ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ HDR10+ ಬೆಂಬಲ, 402 ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್‌ ಗೊರಿಲ್ಲಾ ಗ್ಲಾಸ್‌ 5 ಪ್ರೊಟೆಕ್ಷನ್‌ ಅನ್ನು ಹೊಂದಿದೆ. ಇದಲ್ಲದೆ ಹ್ಯಾಪ್ಟಿಕ್ ಟಚ್ ಮೋಟರ್‌ಗಳನ್ನು ಕೂಡ ಒಳಗೊಂಡಿದೆ.

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ಪ್ರೊಸೆಸರ್‌ ಕಾರ್ಯವೈಖರಿ ಹೇಗಿದೆ?

ನಥಿಂಗ್ ಫೋನ್ (1) ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB, 8GB RAM + 256GB ಮತ್ತು 12GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮೂರು ವೇರಿಯೆಂಟ್‌ ಆಯ್ಕೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಯಾವುದೇ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯವನ್ನು ಬೆಂಬಲಿಸುವುದಿಲ್ಲ ಎಂದು ನಥಿಂಗ್‌ ಕಂಪೆನಿ ಹೇಳಿದೆ.

ಕ್ಯಾಮೆರಾ ವಿಶೇಷತೆ ಏನು?

ಕ್ಯಾಮೆರಾ ವಿಶೇಷತೆ ಏನು?

ನಥಿಂಗ್ ಫೋನ್ (1) ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮೊದಲನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದು OIS ಜೊತೆಗೆ EIS ಇಮೇಜ್ ಸ್ಟೆಬಿಲೈಸೇಶನ್‌ನೊಂದಿಗೆ ಬರುತ್ತದೆ. ಇನ್ನು ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ Samsung JN1 ಸೆನ್ಸಾರ್‌ ಹೊಂದಿದೆ. ಇದು EIS ಇಮೇಜ್ ಸ್ಟೆಬಿಲೈಸೇಶನ್, 114-ಡಿಗ್ರಿ ಫೀಲ್ಡ್-ಆಫ್-ವ್ಯೂ ಮತ್ತು ಮ್ಯಾಕ್ರೋ ಮೋಡ್‌ ಅನ್ನು ಒಳಗೊಂಡಿದೆ. ಕ್ಯಾಮೆರಾ ಫೀಚರ್ಸ್‌ಗಳಲ್ಲಿ ಪನೋರಮಾ ನೈಟ್ ಮೋಡ್, ಪೋರ್ಟ್ರೇಟ್ ಮೋಡ್, ಸೀನ್ ಡಿಟೆಕ್ಷನ್, ಎಕ್ಸ್‌ಟ್ರೀಮ್ ನೈಟ್ ಮೋಡ್ ಮತ್ತು ಎಕ್ಸ್‌ಪರ್ಟ್ ಮೋಡ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೋನಿ IMX471 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ಬ್ಯಾಟರಿ ಬ್ಯಾಕ್‌ಅಪ್‌ ಎಷ್ಟು? ಇತರೆ ಫೀಚರ್ಸ್‌ಗಳೇನು?

ನಥಿಂಗ್ ಫೋನ್ (1) ಸ್ಮಾರ್ಟ್‌ಫೋನ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೈರ್ಡ್ ಚಾರ್ಜಿಂಗ್, 15W Qi ವೈರ್‌ಲೆಸ್ ಚಾರ್ಜಿಂಗ್ ಮತ್ತು 5W ರಿವರ್ಸ್ ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ v5.2, NFC, GPS/A-GPS, ಗ್ಲೋನಾಸ್‌ ಮತ್ತು USB ಟೈಪ್-ಸಿ ಪೋರ್ಟ್ ಬೆಂಬಲಿಸಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಎಲೆಕ್ಟ್ರಾನಿಕ್ ಕಂಪಾಸ್‌, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳು, ಫೇಸ್ ಅನ್‌ಲಾಕ್ ಬೆಂಬಲವನ್ನು ಕೂಡ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಭಾರತದಲ್ಲಿ ನಥಿಂಗ್ ಫೋನ್ (1) 8GB RAM + 128GB ಸ್ಟೋರೇಜ್ ಆಯ್ಕೆಗೆ 32,999ರೂ. ಬೆಲೆಯಲ್ಲಿ ಬರುತ್ತದೆ. 8GB RAM + 256GB ಸ್ಟೋರೇಜ್ ಆಯ್ಕೆಯು 35,999ರೂ. ಬೆಲೆಯನ್ನು ಹೊಂದಿದೆ. ಹಾಗೆಯೇ 12GB RAM + 256GB ಸ್ಟೋರೇಜ್ ಆಯ್ಕೆಯು 38,999ರೂ ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಜುಲೈ 21 ರಂದು ಫ್ಲಿಪ್‌ಕಾರ್ಟ್‌ ಮೂಲಕ ಖರೀದಿಗೆ ಲಭ್ಯವಾಗಲಿದೆ.

ಲಾಂಚ್‌ ಆಫರ್‌ ಏನಿದೆ?

ಲಾಂಚ್‌ ಆಫರ್‌ ಏನಿದೆ?

ನಥಿಂಗ್‌ ಫೋನ್‌ (1) ಫ್ಲಿಪ್‌ಕಾರ್ಟ್‌ನಲ್ಲಿ ಲಾಂಚ್‌ ಆಫರ್‌ ಅನ್ನು ಪಡೆದುಕೊಂಡಿದೆ. ಇದಕ್ಕಾಗಿ ಫ್ಲಿಪ್‌ಕಾರ್ಟ್‌ HDFC ಬ್ಯಾಂಕ್‌ನೊಂದಿಗೆ ಪಾಲುದಾರಿಕೆ ಹೊಂದಿದ್ದು, ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳ ಮೂಲಕ ಖರೀದಿಸುವ ಗ್ರಾಹಕರಿಗೆ 2,000ರೂಪಾಯಿ ತ್ವರಿತ ರಿಯಾಯಿತಿಯನ್ನು ನೀಡಲಿದೆ. ಇದಲ್ಲದೆ ಈ ಫೋನ್ ಅನ್ನು ಮುಂಗಡವಾಗಿ ಆರ್ಡರ್ ಮಾಡಿದ ಗ್ರಾಹಕರು 8GB RAM + 128GB ಸ್ಟೋರೇಜ್‌ ಆಯ್ಕೆಯನ್ನು 31,999ರೂ.ಗಳಿಗೆ ಹಾಗೂ 8GB RAM + 256GB ಸ್ಟೋರೇಜ್ ಆಯ್ಕೆಯನ್ನು 34,999ರೂ.ಗಳಿಗೆ ಹಾಗೂ 12GB RAM ಮತ್ತು 256GB ಸ್ಟೋರೇಜ್‌ ಮಾದರಿಯನ್ನು 37,999ರೂ ಬೆಲೆಗೆ ಪಡೆದುಕೊಳ್ಳಲು ಸಾಧ್ಯವಾಗಲಿದೆ.

Best Mobiles in India

English summary
Nothing Phone 1 With Glyph Interface Launched in India: Specifications
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+