ಭಿನ್ನ ಡಿಸೈನ್ ಇರುವ ಈ ನಥಿಂಗ್ ಫೋನ್ ಬೆಲೆಯಲ್ಲಿ ಬೊಂಬಾಟ್ ಡಿಸ್ಕೌಂಟ್!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಒಂದಿಲ್ಲೊಂದು ಆಫರ್‌ಗಳ ಮೂಲಕ ಗ್ರಾಹಕರನ್ನು ಸೆಳೆದಿದೆ. ಫ್ಲಿಪ್‌ಕಾರ್ಟ್ ಸಂಸ್ಥೆಯು ಕೆಲವು ಹೈ ಎಂಡ್ ಹಾಗೂ ಪ್ರಿಮಿಯಂ ಮಾದರಿಯ ಫೋನ್‌ಗಳಿಗೆ ಅತ್ಯುತ್ತಮ ಕೊಡುಗೆ ನೀಡಿ ಗಮನ ಸೆಳೆದಿದೆ. ಸದ್ಯ ನಥಿಂಗ್ ಫೋನ್ 2 ಮೊಬೈಲ್ ಕೂಡಾ ಭಾರೀ ಬೆಲೆ ಕಡಿತ ಹೊಂದಿದ್ದು, ಗ್ರಾಹಕರಿಗೆ ಖುಷಿ ಎನಿಸಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ವೆಬ್‌ಸೈಟ್‌ನಲ್ಲಿ ನಥಿಂಗ್ ಫೋನ್ 2 ಮೊಬೈಲ್ ಶೇ. 27% ರಷ್ಟು ರಿಯಾಯಿತಿ ಪಡೆದಿದೆ. ಗ್ರಾಹಕರು ಈ ಮೊಬೈಲ್‌ನ 12 GB RAM + 256 GB ಸ್ಟೋರೇಜ್ ವೇರಿಯಂಟ್ ಅನ್ನು ಇದೀಗ ಕೊಡುಗೆಯಲ್ಲಿ 39,999ರೂ. ಗಳಿಗೆ ಖರೀದಿ ಮಾಡಲು ಅವಕಾಶ ಇದೆ. ಅಲ್ಲದೇ ಇತರೆ ಕೆಲವು ಡಿಸ್ಕೌಂಟ್ ಸಹ ಖರೀದಿದಾರರಿಗೆ ದೊರೆಯುತ್ತದೆ.

ಇನ್ನು ನಥಿಂಗ್ ಫೋನ್ 2 ಫೋನ್ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ಪವರ್ ಪಡೆದಿದ್ದು, 50 ಮೆಗಾ ಪಿಕ್ಸೆಲ್ ಪ್ರಾಥಮಿಕ ಕ್ಯಾಮೆರಾ ರಚನೆ ಅನ್ನು ಪಡೆದುಕೊಂಡಿದೆ. ಗ್ರಾಹಕರು ಈ ಫೋನ್ ಅನ್ನು ಡಾರ್ಕ್ ಗ್ರೇ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಖರೀದಿಸಬಹುದು. ಹಾಗಾದರೇ ನಥಿಂಗ್ ಫೋನ್ 2 ಫೋನ್ ಯಾವೆಲ್ಲಾ ಫೀಚರ್ಸ್ ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ನಥಿಂಗ್ ಫೋನ್ 2 ಮೊಬೈಲ್ - ಫೀಚರ್ಸ್
ನಥಿಂಗ್ ಫೋನ್ 2 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 1Hz ಮತ್ತು 120Hz ನಡುವಿನ ಹೊಂದಾಣಿಕೆಯ ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ SGS ಲೋ ಬ್ಲೂ ಲೈಟ್ ಮತ್ತು HDR10+ ಪ್ರಮಾಣೀಕರಣವನ್ನು ಪಡೆದುಕೊಂಡಿದೆ.
ನಥಿಂಗ್ ಫೋನ್ 2 ಮೊಬೈಲ್ ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ನಥಿಂಗ್ ಓಎಸ್ 2.0 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 12GB RAM ಜೊತೆಗೆ 512GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ಈ ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಮೊಬೈಲ್ 32 ಮೆಗಾ ಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ 60fps ನಲ್ಲಿ 4K, 30 ಅಥವಾ 60fps ನಲ್ಲಿ 1080p ಮತ್ತು 4K ಮತ್ತು 30fps ನಲ್ಲಿ ಲೈವ್ HDR ಅನ್ನು ಒಳಗೊಂಡಿದೆ.
ಈ ಮೊಬೈಲ್ 4,700mAh ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇದು 45W PPS ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೆ 15W Qi ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ 130 ನಿಮಿಷಗಳಲ್ಲಿ ಫೋನ್ ಅನ್ನು ಕೇಬಲ್‌ಗಳಿಲ್ಲದೆ ಚಾರ್ಜ್ ಮಾಡುವುದಕ್ಕೆ ಕೂಡ ಅವಕಾಶ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ವೈಫೈ 6, 5G, 4G LTE, ಬ್ಲೂಟೂತ್ 5.3, NFC, GPS/A-GPS, NavIC, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.
ನಥಿಂಗ್ ಫೋನ್ 2 ಮೊಬೈಲ್ ಮೂರು ವೇರಿಯಂಟ್ ಆಯ್ಕೆ ಪಡೆದಿದ್ದು, ಅವುಗಳು ಕ್ರಮವಾಗಿ 8GB + 128GB RAM ಸ್ಟೋರೇಜ್, 12GB + 256GB ಹಾಗೂ 12GB + 512GB ರೂಪಾಂತರದ ಆಯ್ಕೆ ಪಡೆದಿದೆ. ಹಾಗೆಯೇ ಇದು ಡಾರ್ಕ್ ಗ್ರೇ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








