Home
ಸುದ್ದಿಜಾಲ

ಮಾರುಕಟ್ಟೆಯಲ್ಲಿ ಅಚ್ಚರಿ ಮೂಡಿಸಿದ್ದ ಈ ಮೊಬೈಲ್‌ ಈಗ ಖರೀದಿಗೆ ಲಭ್ಯ!..ಬೆಲೆ ವಿವರ ಇಲ್ಲಿದೆ!

ಮೊಬೈಲ್‌ ಮಾರುಕಟ್ಟೆಯಲ್ಲಿ ಹೊಸ ಸಂಚಲಯನ ಮೂಡಿಸಿರುವ ನಥಿಂಗ್‌ ಫೋನ್‌ 2 ಮೊಬೈಲ್‌ ಡಿಸೈನ್‌ ಹಾಗೂ ಫೀಚರ್ಸ್‌ನಿಂದಾಗಿ ಗ್ರಾಹಕರ ಗಮನ ಸೆಳೆದಿದೆ. ಈ ಫೋನ್‌ ಇದೀಗ ಭಾರತದಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌, ವಿಜಯಾ ಸೇಲ್ಸ್‌ ತಾಣ ಹಾಗೂ ಇತರೆ ಪ್ರಮುಖ ಆಫ್‌ಲೈನ್‌ ಸ್ಟೋರ್‌ಗಳ ಮೂಲಕವೂ ಖರೀದಿ ಮಾಡಬಹುದಾಗಿದೆ.

ಹೌದು, ನಥಿಂಗ್ ಸಂಸ್ಥೆಯು ತನ್ನ ನಥಿಂಗ್‌ ಫೋನ್‌ 2 ಮೊಬೈಲ್‌ ಲಭ್ಯತೆಯನ್ನು ವಿಸ್ತರಿಸಿದ್ದು, ಹೀಗಾಗಿ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಅಷ್ಟೇ ಅಲ್ಲ ಈಗ ವಿಜಯಾ ಸೇಲ್ಸ್‌ ಹಾಗೂ ಆಫ್‌ಲೈನ್‌ ಸ್ಟೋರ್‌ಗಳಲ್ಲಿ ಸಹ ಲಭ್ಯ ಇದೆ. ಈ ಫೋನ್‌ ಮೂರು ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಆರಂಭಿಕ ವೇರಿಯಂಟ್‌ ಬೆಲೆಯು 44,999ರೂ. ಆಗಿದೆ. ಹಾಗಾದರೆ ಈ ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಮಾರುಕಟ್ಟೆಯಲ್ಲಿ ಅಚ್ಚರಿ ಮೂಡಿಸಿದ್ದ ಈ ಮೊಬೈಲ್‌ ಈಗ ಖರೀದಿಗೆ ಲಭ್ಯ!..ಬೆಲೆ ವಿವರ!

ನಥಿಂಗ್ ಫೋನ್ 2 ಡಿಸ್‌ಪ್ಲೆ ರಚನೆ ವಿವರ : ನಥಿಂಗ್ ಫೋನ್ 2 ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 1Hz ಮತ್ತು 120Hz ನಡುವಿನ ಹೊಂದಾಣಿಕೆಯ ರಿಫ್ರೆಶ್ ರೇಟ್‌ ಹಾಗೂ 240Hz ಟಚ್ ಸ್ಯಾಪ್ಲಿಂಗ್‌ ರೇಟ್‌ ಅನ್ನು ಒಳಗೊಂಡಿದೆ. ಇದಲ್ಲದೆ SGS ಲೋ ಬ್ಲೂ ಲೈಟ್ ಮತ್ತು HDR10+ ಪ್ರಮಾಣೀಕರಣವನ್ನು ಪಡೆದುಕೊಂಡಿದೆ.

ನಥಿಂಗ್ ಫೋನ್ 2 ಪ್ರೊಸೆಸರ್‌ ಸಾಮರ್ಥ್ಯ : ನಥಿಂಗ್ ಫೋನ್ 2 ಮೊಬೈಲ್‌ ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ ಜೆನ್‌ 1 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 13 ಆಧಾರಿತ ನಥಿಂಗ್ ಓಎಸ್ 2.0 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಜೊತೆಗೆ 512GB ಆಂತರೀಕ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ.

ನಥಿಂಗ್ ಫೋನ್ 2 ಕ್ಯಾಮೆರಾ ರಚನೆ ಮಾಹಿತಿ : ನಥಿಂಗ್ ಫೋನ್ 2 ಮೊಬೈಲ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಆಗಿದೆ. ಸೆಕೆಂಡರಿ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌ ಅನ್ನು ಒಳಗೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ. ಹಾಗೆಯೇ ಈ ಕ್ಯಾಮೆರಾ 60fps ನಲ್ಲಿ 4K, 30 ಅಥವಾ 60fps ನಲ್ಲಿ 1080p ಮತ್ತು 4K ಮತ್ತು 30fps ನಲ್ಲಿ ಲೈವ್ HDR ಅನ್ನು ಪಡೆದಿದೆ.

ನಥಿಂಗ್ ಫೋನ್ 2 ಬ್ಯಾಟರಿ ಮತ್ತು ಇತರೆ ಸೌಲಭ್ಯಗಳು : ನಥಿಂಗ್ ಫೋನ್ 2 ಮೊಬೈಲ್‌ 4,700mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, 45W PPS ವೈರ್ಡ್ ಚಾರ್ಜಿಂಗ್ ಅನ್ನು ಸಪೋರ್ಟ್‌ ಮಾಡುತ್ತದೆ. ಹೀಗಾಗಿ ಮೊಬೈಲ್‌ ಅನ್ನು ಕೇವಲ 55 ನಿಮಿಷಗಳಲ್ಲಿ ಪೂರ್ಣ ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ.

ಇದರೊಂದಿಗೆ 15W Qi ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ 130 ನಿಮಿಷಗಳಲ್ಲಿ ಫೋನ್ ಅನ್ನು ಕೇಬಲ್‌ಗಳಿಲ್ಲದೆ ಚಾರ್ಜ್ ಮಾಡುವ ಆಯ್ಕೆ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ 6, 5G, 4G LTE, ಬ್ಲೂಟೂತ್ 5.3, NFC, GPS/A-GPS, NavIC, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

ನಥಿಂಗ್ ಫೋನ್ 2 ಬೆಲೆ :
ನಥಿಂಗ್ ಫೋನ್ 2 ಮೊಬೈಲ್‌ 8GB RAM + 128GB ಸ್ಟೋರೇಜ್‌ ಆಯ್ಕೆಯ ಬೆಲೆ 44,999ರೂ. ಆಗಿದೆ.
ನಥಿಂಗ್ ಫೋನ್ 2 ಮೊಬೈಲ್‌ 12GB RAM + 256GB ಸ್ಟೋರೇಜ್‌ ಆಯ್ಕೆಯ ಬೆಲೆ 49,999ರೂ. ಆಗಿದೆ.
ನಥಿಂಗ್ ಫೋನ್ 2 ಮೊಬೈಲ್‌ 8GB RAM + 128GB ಸ್ಟೋರೇಜ್‌ ಆಯ್ಕೆಯ ಬೆಲೆ 54,999ರೂ. ಆಗಿದೆ.

Best Mobiles in India

English summary
Nothing Phone (2) Available via Vijay Sales and offline store along with Flipkart. price, offer, specifications.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+