ಭಾರತದಲ್ಲಿ ಧೂಳೆಬ್ಬಿಸಿದ ನಥಿಂಗ್ ಫೋನ್ 2! ಏನುಂಟು..ಏನಿಲ್ಲ!
ಸ್ಮಾರ್ಟ್‌ಫೋನ್ ಪ್ರಿಯರಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದ್ದ ನಥಿಂಗ್ ಫೋನ್ 2 ಭಾರತಕ್ಕೆ ಕಾಲಿಟ್ಟಿದೆ. ಕಳೆದ ಭಾರಿ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ್ದ ನಥಿಂಗ್ ಈ ಭಾರಿ ನಥಿಂಗ್ ಫೋನ್ 2 ಮೂಲಕ ಹೊಸ ಸಂಚಲನವನ್ನೇ ಸೃಷ್ಟಿಸಿದೆ. ನಥಿಂಗ್ ಫೋನ್ 2 ಟ್ವೀಕ್ ಮಾಡಿದ ಗ್ಲಿಫ್ ಇಂಟರ್‌ಫೇಸ್ ಅನ್ನು ಒಳಗೊಂಡಿದೆ.
ಹೌದು, ನಥಿಂಗ್ ಫೋನ್ 2 ಭಾರತದಲ್ಲಿ ಬಿಡುಗಡೆಯಾಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದುಕೊಂಡಿದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನಥಿಂಗ್ ಫೋನ್ 2 ಡಿಸ್‌ಪ್ಲೆ ರಚನೆ ಮತ್ತು ವಿನ್ಯಾಸ
ನಥಿಂಗ್ ಫೋನ್ 2 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು 1Hz ಮತ್ತು 120Hz ನಡುವಿನ ಹೊಂದಾಣಿಕೆಯ ರಿಫ್ರೆಶ್ ರೇಟ್ ಹಾಗೂ 240Hz ಟಚ್ ಸ್ಯಾಪ್ಲಿಂಗ್ ರೇಟ್ ಅನ್ನು ಒಳಗೊಂಡಿದೆ. ಇದಲ್ಲದೆ SGS ಲೋ ಬ್ಲೂ ಲೈಟ್ ಮತ್ತು HDR10+ ಪ್ರಮಾಣೀಕರಣವನ್ನು ಪಡೆದುಕೊಂಡಿದೆ.
ನಥಿಂಗ್ ಫೋನ್ 2 ಪ್ರೊಸೆಸರ್ ಯಾವುದು?
ನಥಿಂಗ್ ಫೋನ್ 2 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ 4nm ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಆಧಾರಿತ ನಥಿಂಗ್ ಓಎಸ್ 2.0 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಜೊತೆಗೆ 512GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ.
ನಥಿಂಗ್ ಫೋನ್ 2 ಕ್ಯಾಮೆರಾ ಸೆಟ್‌ಅಪ್
ನಥಿಂಗ್ ಫೋನ್ 2 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 32 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ 60fps ನಲ್ಲಿ 4K, 30 ಅಥವಾ 60fps ನಲ್ಲಿ 1080p ಮತ್ತು 4K ಮತ್ತು 30fps ನಲ್ಲಿ ಲೈವ್ HDR ಅನ್ನು ಒಳಗೊಂಡಿದೆ.
ನಥಿಂಗ್ ಫೋನ್ 2 ಬ್ಯಾಟರಿ ಮತ್ತು ಇತರೆ
ನಥಿಂಗ್ ಫೋನ್ 2 ಸ್ಮಾರ್ಟ್‌ಫೋನ್ 4,700mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 45W PPS ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್ ಅನ್ನು ಕೇವಲ 55 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ. ಇದಲ್ಲದೆ 15W Qi ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ 130 ನಿಮಿಷಗಳಲ್ಲಿ ಫೋನ್ ಅನ್ನು ಕೇಬಲ್‌ಗಳಿಲ್ಲದೆ ಚಾರ್ಜ್ ಮಾಡುವುದಕ್ಕೆ ಕೂಡ ಅವಕಾಶ ನೀಡಲಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈಫೈ 6, 5G, 4G LTE, ಬ್ಲೂಟೂತ್ 5.3, NFC, GPS/A-GPS, NavIC, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ.

ನಥಿಂಗ್ ಫೋನ್ 2 ಬೆಲೆ ಮತ್ತು ಲಭ್ಯತೆ
ನಥಿಂಗ್ ಫೋನ್ 2 ಬೇಸ್ ಮಾಡೆಲ್ 8GB + 128GB RAM ಸ್ಟೋರೇಜ್ ಆಯ್ಕೆಗೆ 44,999ರೂ.ಬೆಲೆಯನ್ನು ಹೊಂದಿದೆ. ಇನ್ನು 12GB + 256GB ಆಯ್ಕೆಯು 49,999ರೂ.ಬೆಲೆಯಲ್ಲಿ ಬರಲಿದೆ. ಇದರ 12GB + 512GB ರೂಪಾಂತರದ ಆಯ್ಕೆಯು 54,999ರೂ.ಬೆಲೆಯಲ್ಲಿ ದೊರೆಯಲಿದೆ. ಇದು ಡಾರ್ಕ್ ಗ್ರೇ ಮತ್ತು ವೈಟ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ ಜುಲೈ 21 ರಂದು ಫ್ಲಿಪ್‌ಕಾರ್ಟ್ ಮತ್ತು ಆಯ್ದ ರಿಟೇಲ್ ಸ್ಟೋರ್‌ಗಳ ಮೂಲಕ ಮಾರಾಟವಾಗಲಿದೆ.


Click it and Unblock the Notifications








