Home
ಸುದ್ದಿಜಾಲ

ಇಂದು ನಥಿಂಗ್‌ ಫೋನ್‌ 2a ಫೋನ್‌ ಫಸ್ಟ್‌ ಸೇಲ್‌!..ಏನಾದ್ರೂ ಆಫರ್‌ ಇದೆಯಾ?

ನಥಿಂಗ್‌ ಸಂಸ್ಥೆಯು ಹೊಸದಾಗಿ ಬಿಡುಗಡೆ ಮಾಡಿರುವ ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ವಿಭಿನ್ನತೆಯ ಡಿಸೈನ್‌ ಹಾಗೂ ಆಕರ್ಷಕ ಫೀಚರ್ಸ್‌ಗಳಿಂದ ಗ್ರಾಹಕರನ್ನು ಸೆಳೆದಿದೆ. ಈ ಫೋನಿನ ಫಸ್ಟ್‌ ಸೇಲ್‌ ಇಂದು ಫ್ಲಿಪ್‌ಕಾರ್ಟ್‌ ತಾಣದ ಮೂಲಕ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗಲಿದೆ.

ಹೌದು, ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಸೇಲ್‌ ಇ ಕಾಮರ್ಸ್‌ ತಾಣ ಫ್ಲಿಪ್‌ಕಾರ್ಟ್‌ನಲ್ಲಿ (ಇಂದು) ಮಾರ್ಚ್‌ 12 ರಿಂದ ಪ್ರಾರಂಭವಾಗಲಿದೆ. ಇನ್ನು ಈ ಫೋನ್‌ ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಪ್ರೊಸೆಸರ್‌ ಆಯ್ಕೆಯನ್ನು ಪಡೆದಿದೆ. ಹಾಗೆಯೇ ಈ ಫೋನ್ ಡ್ಯುಯಲ್ ಕ್ಯಾಮೆರಾ ರಚನೆಯನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ.

ಇಂದು ನಥಿಂಗ್‌ ಫೋನ್‌ 2a ಫೋನ್‌ ಫಸ್ಟ್‌ ಸೇಲ್‌!..ಏನಾದ್ರೂ ಆಫರ್‌ ಇದೆಯಾ?

ಇನ್ನು ಈ ಫೋನ್‌ 8GB + 128GB ಸ್ಟೋರೇಜ್‌ ಹಾಗೂ 12GB + 256GB ಸ್ಟೋರೇಜ್‌ ಆಯ್ಕೆ ಪಡೆದಿದ್ದು, 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ ಇನ್ನು ಭಾರತದಲ್ಲಿ ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಆರಂಭಿಕ ವೇರಿಯಂಟ್‌ ಬೆಲೆಯು 23,999ರೂ. ಆಗಿದೆ. ಇನ್ನುಳಿದಂತೆ ಈ ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಇಂದು ನಥಿಂಗ್‌ ಫೋನ್‌ 2a ಫೋನ್‌ ಫಸ್ಟ್‌ ಸೇಲ್‌!..ಏನಾದ್ರೂ ಆಫರ್‌ ಇದೆಯಾ?

ನಥಿಂಗ್‌ ಫೋನ್‌ 2a - ಫೀಚರ್ಸ್‌

ನಥಿಂಗ್‌ ಫೋನ್‌ 2a ಮೊಬೈಲ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಪಡೆದಿದೆ. ಇದು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿ ಇದೆ. ಇದರ ಜೊತೆಗೆ ಡಿಸ್‌ಪ್ಲೇಯು 30Hz ನಿಂದ 120Hz ವರೆಗಿನ ರಿಫ್ರೆಶ್ ರೇಟ್‌, 394ppi ಪಿಕ್ಸೆಲ್ ಸಾಂದ್ರತೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. HDR10+ ಬೆಂಬಲ ಮತ್ತು 1,300 nits ಗರಿಷ್ಠ ಬ್ರೈಟ್‌ನೆಸ್‌ ಅನ್ನು ಪಡೆದಿದೆ.

ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14-ಆಧಾರಿತ ನಥಿಂಗ್ ಓಎಸ್ 2.5 ಸಪೋರ್ಟ್‌ನಲ್ಲಿ ರನ್‌ ಆಗಲಿದೆ. ಇದು ಮೂರು ವರ್ಷಗಳ ಆಂಡ್ರಾಯ್ಡ್ ನವೀಕರಣಗಳು ಮತ್ತು ನಾಲ್ಕು ವರ್ಷಗಳ ಭದ್ರತಾ ಪ್ಯಾಚ್‌ಗಳನ್ನು ಸ್ವೀಕರಿಸುವ ಭರವಸೆ ಲಭ್ಯ. ಹಾಗೆಯೇ 12GB RAM ಮತ್ತು 256GB ಸ್ಟೋರೇಜ್‌ ಆಯ್ಕೆ ಇದೆ.

ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಪಡೆದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ನಥಿಂಗ್‌ ಫೋನ್‌ 2a ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 45W ಫಾಸ್ಟ್‌ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ 5.3, NFC, GPS, GLONASS, GALILEO, QZSS, 360 ಡಿಗ್ರಿ ಆಂಟೆನಾ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ.

ನಥಿಂಗ್‌ ಫೋನ್‌ 2a ಬೇಸ್‌ ವೇರಿಯಂಟ್‌ 8GB RAM + 128GB ಸ್ಟೋರೇಜ್ ಬೆಲೆಯು 23,999ರೂ. ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್‌ ದರವು 25,999ರೂ. ಆಗಿದೆ. ಇದನ್ನು ಬಿಳಿ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಇರಲಿದೆ. ಈ ಫೋನ್‌ ಮಾರ್ಚ್ 12 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

Best Mobiles in India

English summary
Nothing Phone (2a) 5G First sale in India starts today. Offers, Price and more details here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+