Home
ಸುದ್ದಿಜಾಲ

ಭಾರತದಲ್ಲಿ ನಥಿಂಗ್ ಫೋನ್ (2a) ಬಿಡುಗಡೆ ದಿನಾಂಕ ಬಹಿರಂಗ: ಈ ಭಾರಿ ಏನೆಲ್ಲಾ ನಿರೀಕ್ಷೆ!

ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ನಥಿಂಗ್ ಫೋನ್ (2a) ಬಿಡುಗಡೆ ದಿನಾಂಕ ಬಹಿರಂಗವಾಗಿದೆ. ನಥಿಂಗ್ ಫೋನ್ (2a) ಸ್ಮಾರ್ಟ್‌ಫೋನ್ ಬಿಡುಗಡೆ ದಿನಾಂಕವನ್ನು ಕಾರ್ಲ್ ಪೀ ಅಧಿಕೃತವಾಗಿ ಘೋಷಿಸಿದ್ದು, ಇದೇ ಮಾರ್ಚ್ 5, 2024 ರಂದು ಬಿಡುಗಡೆ ಆಗಲಿದೆ. ಅಲ್ಲದೆ ಫೋನ್‌ನ ಆನ್‌ಲೈನ್ ಲಭ್ಯತೆಯನ್ನು ದೃಢೀಕರಿಸುವ ಡಿವೈಸ್‌ನ ಮೈಕ್ರೋಸೈಟ್ ಕೂಡ ಫ್ಲಿಪ್‌ಕಾರ್ಟ್‌ನಲ್ಲಿ ಸಹ ಲೈವ್ ಆಗಿದೆ.

ಹೌದು, ನಥಿಂಗ್ ಫೋನ್ (2a) ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಲಾಗಿದೆ. ''ತಾಜಾ ಕಣ್ಣುಗಳ ಮೂಲಕ ಜಗತ್ತನ್ನು ನೋಡಿ" ಎಂಬ ಅಡಿಬರಹದೊಂದಿಗೆ ನಥಿಂಗ್ ಫೋನ್ (2a)ಪೋನ್‌ನ ಮೈಕ್ರೋಸೈಟ್‌ ಲೈವ್‌ ಆಗಿದೆ. ಇನ್ನು ಹೊಸ ಡಿವೈಸ್‌ನೊಂದಿಗೆ ಕ್ಯಾಮರಾ ಅಪ್‌ಗ್ರೇಡ್ ಅನ್ನು ಮಾಡಬಹುದು ಎಂಬ ಸೂಚನೆ ದೊರೆತಿದೆ. ಹಾಗಾದ್ರೆ ನಥಿಂಗ್ ಫೋನ್ (2a) ಫೋನ್‌ನಲ್ಲಿ ಯಾವೆಲ್ಲಾ ಫೀಚರ್ಸ್‌ನೊಂದಿಗೆ ಬರಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತದಲ್ಲಿ ನಥಿಂಗ್ ಫೋನ್ (2a) ಬಿಡುಗಡೆ ದಿನಾಂಕ ಬಹಿರಂಗ: ಏನೆಲ್ಲಾ ನಿರೀಕ್ಷೆ

ನಥಿಂಗ್ ಫೋನ್ (2a) ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ಸ್ಮಾರ್ಟ್‌ಫೋನ್‌ ವಿನ್ಯಾಸದ ಥೀಮ್ ಅನ್ನು ಗಮನಿಸಿದರೆ ಇದು ಬಿಗ್‌ ಬ್ಯಾಟರಿಯೊಂದಿಗೆ ಬರಲಿದೆ ಎಂದು ಹೇಳಲಾಗಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 7200SoC ಪ್ರೊಸೆಸರ್‌ನೊಂದಿಗೆ ಬರಲಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ,ಈ ಫೋನ್ ಮಧ್ಯದಲ್ಲಿ ಇರಿಸಲಾದ ಹಿಂಬದಿಯ ಕ್ಯಾಮೆರಾ ಸೆಟಪ್ ಅನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಇದಲ್ಲದೆ ಮುಂಬರುವ MWC 2024 ನಲ್ಲಿ ನಥಿಂಗ್ ಫೋನ್ (2a) ಅನ್ನು ಸಹ ಪ್ರದರ್ಶಿಸುವ ನಿರೀಕ್ಷೆಯಿದೆ. ಗ್ಲೊಬಲ್‌ ಈವೆಂಟ್‌ನಲ್ಲಿ ಈ ಫೋನ್‌ನ ಲುಕ್‌ ಅನ್ನು ನೋಡುವುದಕ್ಕೆ ಸಾಧ್ಯವಾಗಲಿದೆ. ಬಿಡುಗಡೆಯ ದಿನಾಂಕವು ಬಹಿರಂಗವಾಗಿರುವುದರಿಂದ, ಹೆಚ್ಚಿನ ಅಧಿಕೃತ ವಿವರಗಳು ಶೀಘ್ರದಲ್ಲೇ ಬರಲಿವೆ ಎಂದು ನಾವು ನಿರೀಕ್ಷಿಸುತ್ತೇವೆ.

ಇನ್ನು ಕಳೆದ ವರ್ಷ ನಥಿಂಗ್ ಫೋನ್ 2 ಬಿಡುಗಡೆ ಆಗಿತ್ತು. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ LTPO OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇದು ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ವೇಗವನ್ನು ಹೊಂದಿದ್ದು, ಆಂಡ್ರಾಯ್ಡ್‌ 13 ಆಧಾರಿತ ನಥಿಂಗ್ ಓಎಸ್ 2.0 ಔಟ್-ಆಫ್-ದಿ-ಬಾಕ್ಸ್‌ನಲ್ಲಿ ಕಾರ್ಯನಿರ್ವಹಿಸಲಿದೆ.

ನಥಿಂಗ್ ಫೋನ್ 2 ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಅಲ್ಟ್ರಾ ವೈಡ್‌ ಆಂಗಲ್‌ ಲೆನ್ಸ್‌ ಅನ್ನು ಪಡೆದುಕೊಂಡಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 32 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಕ್ಯಾಮೆರಾ 60fps ನಲ್ಲಿ 4K, 30 ಅಥವಾ 60fps ನಲ್ಲಿ 1080p ಮತ್ತು 4K ಮತ್ತು 30fps ನಲ್ಲಿ ಲೈವ್ HDR ಅನ್ನು ಒಳಗೊಂಡಿದೆ.

ನಥಿಂಗ್ ಫೋನ್ 2 ಸ್ಮಾರ್ಟ್‌ಫೋನ್‌ 4,700mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 45W PPS ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರಿಂದ ಸ್ಮಾರ್ಟ್‌ಫೋನ್‌ ಅನ್ನು ಕೇವಲ 55 ನಿಮಿಷಗಳಲ್ಲಿ ಸಂಪೂರ್ಣವಾಗಿ ಚಾರ್ಜ್ ಮಾಡಬಹುದು ಎಂದು ಹೇಳಲಾಗಿದೆ. ಇದಲ್ಲದೆ 15W Qi ವೈರ್‌ಲೆಸ್ ಚಾರ್ಜಿಂಗ್‌ನೊಂದಿಗೆ 130 ನಿಮಿಷಗಳಲ್ಲಿ ಫೋನ್ ಅನ್ನು ಕೇಬಲ್‌ಗಳಿಲ್ಲದೆ ಚಾರ್ಜ್ ಮಾಡುವುದಕ್ಕೆ ಕೂಡ ಅವಕಾಶ ನೀಡಲಾಗಿದೆ. ಇದೇ ಹಾದಿಯಲ್ಲಿ ಹೊಸ ನಥಿಂಗ್ ಫೋನ್ (2a) ಸ್ಮಾರ್ಟ್‌ಫೋನ್‌ ಕೂಡ ಬರಲಿದೆ ಎಂದು ಅಂದಾಜಿಸಲಾಗಿದೆ.

Best Mobiles in India

English summary
Nothing Phone (2a) is set to launch in India on March 5, 2024: Expected Specs Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+