Nothing Phone (2a) Plus ಬಿಡುಗಡೆ.. ಆಕರ್ಷಕ ಬೆಲೆ, ಅಚ್ಚರಿಯ ಫೀಚರ್ಸ್!
ಮೊಬೈಲ್ ಮಾರುಕಟ್ಟೆಯಲ್ಲಿ ಬಹಳ ಕುತೂಹಲ ಮೂಡಿಸಿದ್ದ ನಥಿಂಗ್ ಮೊಬೈಲ್ ಕಂಪನಿಯ ಬಹುನಿರೀಕ್ಷಿತ ನಥಿಂಗ್ ಫೋನ್ (2a) ಪ್ಲಸ್ (Nothing Phone (2a) Plus) ಸ್ಮಾರ್ಟ್‌ಫೋನ್ ಇಂದು ಭಾರತದಲ್ಲಿ ಅಧಿಕೃತವಾಗಿ ಲಾಂಚ್ ಆಗಿದೆ. ಮೀಡಿಯಾ ಟೆಕ್ ಡೈಮೆನ್ಸಿಟಿ 7350 ಪ್ರೊ SoC ಪ್ರೊಸೆಸರ್ ಸೌಲಭ್ಯ ಪಡೆದಿರುವ ಈ ನೂತನ ಸ್ಮಾರ್ಟ್‌ಫೋನ್ ಭಿನ್ನ ಡಿಸೈನ್ ಮೂಲಕ ಗ್ರಾಹಕರನ್ನು ಸೆಳೆಯುವ ಲುಕ್‌ನಲ್ಲಿದೆ. ಹಾಗೆಯೇ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಹೈಲೈಟ್ ಅಂಶಗಳಲ್ಲಿ ಒಂದಾಗಿದೆ.
ಹೌದು, ನಥಿಂಗ್ ಕಂಪನಿಯು ನಥಿಂಗ್ ಫೋನ್ (2a) ಪ್ಲಸ್ (Nothing Phone (2a) Plus) ಮೊಬೈಲ್ ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಮೊಬೈಲ್‌ನ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಕೆಲಸ ನಿರ್ವಹಿಸಲಿದ್ದು, ಮುಂಭಾಗದಲ್ಲಿ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.

ಹಾಗೆಯೇ ನಥಿಂಗ್ ಫೋನ್ (2a) ಪ್ಲಸ್ ಫೋನ್ 8GB RAM ಮತ್ತು 256GB ಹಾಗೂ 12GB RAM ಮತ್ತು 256GB ಸ್ಟೋರೇಜ್ ವೇರಿಯಂಟ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಆಗಲಿದೆ. ಇದರೊಂದಿಗೆ ಈ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ನಥಿಂಗ್ ಫೋನ್ (2a) ಪ್ಲಸ್ ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ನೋಡೋಣ ಬನ್ನಿರಿ.
ನಥಿಂಗ್ ಫೋನ್ (2a) ಪ್ಲಸ್ ಫೀಚರ್ಸ್
ನಥಿಂಗ್ ಫೋನ್ (2a) ಪ್ಲಸ್ ಮೊಬೈಲ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಜೊತೆಗೆ ಈ ಡಿಸ್‌ಪ್ಲೇಯು 2412 x 1084 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇನ್ನು ಡಿಸ್‌ಪ್ಲೇ 120Hz ಹಾಗೂ 1300 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಲೆವೆಲ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 5 ಸಪೋರ್ಟ್ ಪಡೆದಿದ್ದು, ಅಲ್ಲದೇ ಈ ಡಿಸ್‌ಪ್ಲೇಯು OLED ಸ್ಕ್ರೀನ್ ಹೊಂದಿದೆ.
ನಥಿಂಗ್ ಫೋನ್ (2a) ಪ್ಲಸ್ ಮೊಬೈಲ್ ಮೀಡಿಯಾ ಟೆಕ್ ಡೈಮೆನ್ಸಿಟಿ 7350 ಪ್ರೊ SoC ಪ್ರೊಸೆಸರ್ ಸೌಲಭ್ಯದ ಪವರ್ ಅನ್ನು ಪಡೆದಿದ್ದು, ಆಂಡ್ರಾಯ್ಡ್ 14 ಓಎಸ್ ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಹಾಗೂ 12GB RAM ಮತ್ತು 256GB ಆಂತರೀಕ ಸ್ಟೋರೇಜ್ ಅಯ್ಕೆಯಲ್ಲಿ ಬರಲಿದೆ.
ನಥಿಂಗ್ ಫೋನ್ (2a) ಪ್ಲಸ್ ಮೊಬೈಲ್ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಇನ್ನು ಇದರ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಆಗಿದೆ. ದ್ವಿತೀಯ ಕ್ಯಾಮೆರಾ ಸಹ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಮುಂಭಾಗದಲ್ಲಿ ಕೂಡಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ನಥಿಂಗ್ ಫೋನ್ (2a) ಪ್ಲಸ್ ಮೊಬೈಲ್ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದಿದ್ದು, ಇದು 50W ಸಾಮರ್ಥ್ಯದ ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈಫೈ, ಯುಎಸ್‌ಬಿ ಟೈಪ್ ಸಿ ಪೋರ್ಟ್, ಹೆಡ್‌ಫೋನ್ ಜ್ಯಾಕ್ ಅನ್ನು ಪಡೆದಿದೆ.
ಬೆಲೆ ಹಾಗೂ ಲಭ್ಯತೆ
8GB RAM ಮತ್ತು 256GB ವೇರಿಯಂಟ್ ಬೆಲೆ - 27,999ರೂ.
12GB RAM ಮತ್ತು 256GB ವೇರಿಯಂಟ್ ಬೆಲೆ - 29,999ರೂ.
ಇನ್ನು ಈ ಫೋನ್ ಬ್ಲ್ಯಾಕ್ ಹಾಗೂ ಗ್ರೇ ಕಲರ್ ಆಯ್ಕೆಗಳಲ್ಲಿ ಖರೀದಿಗೆ ಲಭ್ಯ ಆಗಲಿದೆ. ಅಂದಹಾಗೆ ಈ ಫೋನಿನ ಫಸ್ಟ್ ಸೇಲ್ ಇದೇ ಅಗಸ್ಟ್ 7 ರಂದು ಫ್ಲಿಪ್‌ಕಾರ್ಟ್ ಮೂಲಕ ಶುರುವಾಗಲಿದೆ.


Click it and Unblock the Notifications








