Nothing phone: ಲೀಕ್ ಆಯ್ತು ಈ ಫೋನ್‌ನ ಕೆಲವು ಫೀಚರ್ಸ್! ಸೋನಿ ಕ್ಯಾಮೆರಾ, 8GB RAM
ನಥಿಂಗ್ ಫೋನ್‌ಗಳು (Nothing phone) ಸ್ಮಾರ್ಟ್‌ಫೋನ್‌ಗಳ ವಿಭಾಗದಲ್ಲಿ ವಿಭಿನ್ನವಾಗಿ ಗುರುತಿಸಿಕೊಳ್ಳುತ್ತವೆ. ಈ ಫೋನ್‌ಗಳು ನೇರವಾಗಿ ಆಪಲ್ ಹಾಗೂ ಸ್ಯಾಮ್‌ಸಂಗ್ ಫೋನ್‌ಗಳಿಗೆ ಪೈಪೋಟಿ ನೀಡುವ ಸಾಮರ್ಥ್ಯ ಪಡೆಯುವ ಮೂಲಕ ಜಾಗತಿಕವಾಗಿ ಹೆಚ್ಚಿನ ಬಳಕೆದಾರರನ್ನು ಪಡೆಯುತ್ತಿದೆ. ಅದರಂತೆ ಈಗ ಮತ್ತೊಂದು ಹೊಸ ಫೋನ್ ಅನಾವರಣ ಮಾಡಲು ಕಂಪೆನಿ ಮುಂದಾಗಿದೆ.
ಹೌದು, ಭಾರತವೂ ಸೇರಿದಂತೆ ಜಾಗತಿಕವಾಗಿ ನಥಿಂಗ್ ಫೋನ್‌ಗಳಿಗೆ ಭಾರೀ ಬೇಡಿಕೆ ಇದೆ. ಈ ಫೋನ್‌ಗಳ ಶೈಲಿ ಭಿನ್ನವಾಗಿರಲಿದ್ದು, ಇದರೊಂದಿಗೆ ಸುಧಾರಿತ ಫೀಚರ್ಸ್ ಹಾಗೂ ಅತ್ಯುತ್ತಮ ಕ್ಯಾಮೆರಾ ಫೀಚರ್ಸ್ ಗ್ರಾಹಕರ ಮನಸೆಳೆದಿವೆ. ಇದರೊಂದಿಗೆ ಈಗ ನಥಿಂಗ್ ಫೋನ್ 2A ಸ್ಮಾರ್ಟ್‌ಫೋನ್ (Nothing Phone 2A smartphone) ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೆಲವು ಮಾಹಿತಿಯ ಪ್ರಕಾರ, ನಥಿಂಗ್ ಫೋನ್ 2A ಫೆಬ್ರವರಿ 27, 2024 ಲಾಂಚ್ ಆಗಲಿದೆ ಎನ್ನಲಾಗಿದೆ. ಹಾಗಿದ್ರೆ, ಈ ಸ್ಮಾರ್ಟ್‌ಫೋನ್‌ನ ಪ್ರಮುಖ ಲೀಕ್ ಫೀಚರ್ಸ್ ಹಾಗೂ ನಿರೀಕ್ಷಿತ ಬೆಲೆ ಎಷ್ಟು ಅನ್ನೋದನ್ನು ನೋಡೋಣ ಬನ್ನಿ.

ನಥಿಂಗ್ ಫೋನ್ 2A: ನಥಿಂಗ್ ಫೋನ್ 2A ಸ್ಮಾರ್ಟ್‌ಫೋನ್ ಈಗಾಗಲೇ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಸೌಂಡ್ ಮಾಡುತ್ತಿದೆ. ಈ ಮೂಲಕ ಹೆಚ್ಚಿನ ನಿರೀಕ್ಷೆಗಳನ್ನು ಸೃಷ್ಟಿಸಿದೆ. ಯಾಕೆಂದರೆ ಈ ಫೋನ್ 6.7 ಇಂಚಿನ ಪುಲ್ ಹೆಚ್‌ಡಿ ಅಮೋಲೆಡ್ ಡಿಸ್‌ಪ್ಲೇಯೊಂದಿಗೆ ಕಾಣಿಸಿಕೊಳ್ಳಲಿದೆ ಎನ್ನಲಾಗಿದ್ದು, 120 Hz ರಿಫ್ರೆಶ್ ರೇಟ್ 1000 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಆಯ್ಕೆ ಪಡೆದುಕೊಂಡಿರಲಿದೆ. ಜೊತೆಗೆ 240 Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿರಲಿದೆ ಎನ್ನಲಾಗಿದೆ. ಈ ಮೂಲಕ ಉತ್ತಮ ವೀಕ್ಷಣೆ ಅನುಭವ ನೀಡಲಿದೆ.
ಇದರೊಂದಿಗೆ ಈ ವಿಶೇಷ ಫೋನ್ ಶಕ್ತಿಯುತವಾದ ಮೀಡಿಯಾಟೆಕ್ ಡೈಮೆನ್ಸಿಟಿ 7200 ಪ್ರೊಸೆಸರ್ ಬಲದೊಂದಿಗೆ ಕಾಣಿಸಿಕೊಳ್ಳಲಿದೆ ಎಂದು ತಿಳಿದುಬಂದಿದ್ದು, ಈ ಚಿಪ್‌ಸೆಟ್ ಸುಧಾರಿತ ಕಾರ್ಯಕ್ಷಮತೆಯನ್ನು ನೀಡುತ್ತದೆ. ಇದರೊಂದಿಗೆ ಈ ಸ್ಮಾರ್ಟ್‌ಫೋನ್ ಗೇಮಿಂಗ್ ಪ್ರಿಯರಿಗೆ ಮೆಚ್ಚಿನ ಡಿವೈಸ್ ಆಗಿರಲಿದೆ ಎಂದು ಸೂಚಿಸಲಾಗಿದೆ. ಪರಿಣಾಮ ಗೇಮಿಂಗ್ ಉದ್ದೇಶಕ್ಕೆ ಈ ಫೋನ್ ಅನ್ನು ಕಣ್ಮುಚ್ಚಿಕೊಂಡು ಖರೀದಿ ಮಾಡಬಹುದು ಎಂದು ವರದಿಗಳಲ್ಲಿ ಉಲ್ಲೇಖ ಮಾಡಲಾಗಿದೆ.

ಜೊತೆಗೆ ಈ ನಥಿಂಗ್ ಫೋನ್ 2A ಮಾಡೆಲ್ ಆಂಡ್ರಾಯ್ಡ್ 14 ಆಪರೇಟಿಂಗ್ ಸಿಸ್ಟಮ್ ಅನ್ನು ರನ್ ಮಾಡಲಿದೆ ಎನ್ನಲಾಗಿದ್ದು, ಇದರೊಂದಿಗೆ ಈ ಫೋನ್ ಆಂಡ್ರಾಯ್ಡ್ ನವೀಕರಣಗಳು ಮತ್ತು ಭದ್ರತಾ ನವೀಕರಣಗಳನ್ನು ಸಹ ಪಡೆಯಲಿದೆ ಎಂದು ಹೇಳಲಾಗಿದೆ. ಉಳಿದಂತೆ ಈ ನಥಿಂಗ್ ಫೋನ್ 2A ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸರ್ ಆಯ್ಕೆ ಪಡೆದಿರಲಿದ್ದು, ಬಳಕೆದಾರರಿಗೆ ಅತ್ಯುತ್ತಮವಾದ ಅನುಭವ ನೀಡಲಿದೆ.
ಇನ್ನು ಈ ಫೋನ್‌ನ ಕ್ಯಾಮೆರಾ ವಿಚಾರಕ್ಕೆ ಬಂದರೆ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5KGN9 ಸೆನ್ಸರ್ + ಅಲ್ಟ್ರಾ ವೈಡ್ ಕ್ಯಾಮೆರಾದೊಂದಿಗೆ ಡ್ಯುಯಲ್ ರಿಯರ್ ಕ್ಯಾಮೆರಾ ರಚನೆ ಹೊಂದಿರಲಿದೆ ಎನ್ನಲಾಗಿದೆ. ಈ ಮೂಲಕ ಉತ್ತಮವಾದ ಫೋಟೋಗಳು ಮತ್ತು ವಿಡಿಯೋಗಳನ್ನು ಸೆರೆಹಿಡಿಯಬಹುದಾಗಿದೆ. ಪ್ರಮುಖವಾಗಿ ಈ ಸೆನ್ಸರ್‌ಗಳನ್ನು ಎಂದಿನಂತೆ ಲಂಬವಾದ ಶೈಲಿಯ ಬದಲಾಗಿ ಅಡ್ಡಲಾಗಿ ಜೋಡಿಸಲಾಗಿದೆ ಎಂದು ತಿಳಿದುಬಂದಿದೆ. ಇದರೊಂದಿಗೆ ಸೆಲ್ಫಿ ಉದ್ದೇಶಕ್ಕೆ ಈ ಫೋನ್ 32 ಮೆಗಾಪಿಕ್ಸೆಲ್ ಸೋನಿ IMX615 ಸೆನ್ಸರ್ ಹೊಂದಿರಲಿದೆ ಎಂದು ತಿಳಿದುಬಂದಿದೆ.
ಈ ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದುಕೊಂಡಿರಲಿದ್ದು, ಈ ಮೂಲಕ ಉತ್ತಮ ಬ್ಯಾಕಪ್ ಪಡೆದುಕೊಳ್ಳಬಹುದಾಗಿದೆ. ಅಷ್ಟೇ ಅಲ್ಲದೆ ಫಾಸ್ಟ್ ಚಾರ್ಜಿಂಗ್ ಸೌಲಭ್ಯ ಸಹ ಈ ಫೋನ್‌ನಲ್ಲಿ ಇರಲಿದೆ ಎನ್ನಲಾಗಿದೆ. ಇದರೊಂದಿಗೆ 5G, ಡ್ಯುಯಲ್ 4G VolatE, ವೈ-ಫೈ, ಜಿಪಿಎಸ್ ಸೇರಿದಂತೆ ವಿವಿಧ ಕನೆಕ್ಟಿವಿಟಿ ಬೆಂಬಲ ಪಡೆದುಕೊಂಡಿರಲಿದೆ ಎನ್ನಲಾಗಿದೆ.

ಇನ್ನು ಈ ಸ್ಮಾರ್ಟ್‌ಫೋನ್ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯಲ್ಲಿ ಕಾಣಿಸಿಕೊಳ್ಳಲಿದೆ ಎನ್ನಲಾಗಿದ್ದು, ಭಾರತದಲ್ಲಿ ಈ ಫೋನ್ 35,000 ರೂ.ಗಳ ಬೆಲೆಯಲ್ಲಿ ಕಾಣಿಸಿಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ. ಈ ಮೂಲಕ ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಈ ಫೋನ್ ದೊಡ್ಡ ಸಂಚಲನ ಉಂಟು ಮಾಡಲಿದೆ ಎಂದು ಅಂದಾಜಿಸಲಾಗಿದೆ.


Click it and Unblock the Notifications








