Home
ಸುದ್ದಿಜಾಲ

ಭಾರತಕ್ಕೆ ಕಾಲಿಟ್ಟ ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌: ಬೆಲೆ ಎಷ್ಟು, ವಿಶೇಷತೆ ಏನು

ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಭಾರತದಲ್ಲಿ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಡೈಮೆನ್ಸಿಟಿ 7200 Pro SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಹಿಂಭಾಗದಲ್ಲಿ ಡ್ಯುಯಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ.

ಹೌದು, ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಭಾರತದಲ್ಲಿ ಲಾಂಚ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ IP54-ರೇಟೆಡ್ ಬಿಲ್ಡ್ ಅನ್ನು ಹೊಂದಿದ್ದು, ಕಂಪನಿಯ ಟ್ರೇಡ್‌ಮಾರ್ಕ್ ಗ್ಲಿಫ್ ಇಂಟರ್‌ಫೇಸ್ ಅನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್‌ ಡಿಸ್‌ಪ್ಲೇಯು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. ಹಾಗಾದ್ರೆ ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಭಾರತಕ್ಕೆ ಕಾಲಿಟ್ಟ ನಥಿಂಗ್‌ ಫೋನ್‌ 2a : ಬೆಲೆ ಎಷ್ಟು, ವಿಶೇಷತೆ ಏನು

ನಥಿಂಗ್‌ ಫೋನ್‌ 2a ಡಿಸ್‌ಪ್ಲೇ ರಚನೆ ಹೇಗಿದೆ?
ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅಮೋಲೆಡ್ ಡಿಸ್‌ಪ್ಲೇ ಆಗಿದ್ದು, 1,080x2,412 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದಲ್ಲಿದೆ. ಜೊತೆಗೆ ಡಿಸ್‌ಪ್ಲೇಯು 30Hz ನಿಂದ 120Hz ವರೆಗಿನ ಹೊಂದಾಣಿಕೆಯ ರಿಫ್ರೆಶ್ ರೇಟ್‌, 394ppi ಪಿಕ್ಸೆಲ್ ಸಾಂದ್ರತೆ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಹೊಂದಿದೆ. HDR10+ ಬೆಂಬಲ, 240Hz ಟಚ್ ಮಾದರಿ ದರ, 2160Hz PWM ಆವರ್ತನ ಮತ್ತು 1,300 nits ಗರಿಷ್ಠ ಬ್ರೈಟ್‌ನೆಸ್‌ ಅನ್ನು ಹೊಂದಿದೆ.

ನಥಿಂಗ್‌ ಫೋನ್‌ 2a ಪ್ರೊಸೆಸರ್‌ ಯಾವುದು?
ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ 4nm ಮೀಡಿಯಾ ಟೆಕ್ ಡೈಮೆನ್ಸಿಟಿ 7200 ಪ್ರೊ SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14-ಆಧಾರಿತ ನಥಿಂಗ್ ಓಎಸ್ 2.5 ಬೆಂಬಲದೊಂದಿಗೆ ರನ್‌ ಆಗಲಿದೆ. ಇದು ಮೂರು ವರ್ಷಗಳ ಆಂಡ್ರಾಯ್ಡ್ ನವೀಕರಣಗಳು ಮತ್ತು ನಾಲ್ಕು ವರ್ಷಗಳ ಭದ್ರತಾ ಪ್ಯಾಚ್‌ಗಳನ್ನು ಸ್ವೀಕರಿಸುವ ಭರವಸೆ ನೀಡಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದಲ್ಲಿ ಬರಲಿದೆ.

ನಥಿಂಗ್‌ ಫೋನ್‌ 2a ಕ್ಯಾಮೆರಾ ಸೆಟಪ್‌ ಏನಿದೆ?
ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದಲ್ಲಿ ಬರಲಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

ನಥಿಂಗ್‌ ಫೋನ್‌ 2a ಬ್ಯಾಟರಿ ಮತ್ತು ಇತರೆ
ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 45W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ನೀಡಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, Wi-Fi 6 ಡೈರೆಕ್ಟ್, ಬ್ಲೂಟೂತ್ 5.3, NFC, GPS, GLONASS, GALILEO, QZSS, 360 ಡಿಗ್ರಿ ಆಂಟೆನಾ ಮತ್ತು USB ಟೈಪ್-ಸಿ ಪೋರ್ಟ್ ಅನ್ನು ಬೆಂಬಲಿಸಲಿದೆ. ಇದಲ್ಲದೆ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌, ಅಕ್ಸಿಲೆರೊಮೀಟರ್, ಎಲೆಕ್ಟ್ರಾನಿಕ್ ಕಂಪಾಸ್‌, ಗೈರೊಸ್ಕೋಪ್, ಆಂಬಿಯೆಂಟ್ ಲೈಟ್ ಸೆನ್ಸಾರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ. ಇದು ಹೈ-ಡೆಫಿನಿಷನ್ ಮೈಕ್ರೊಫೋನ್‌ಗಳು ಮತ್ತು ಡ್ಯುಯಲ್ ಸ್ಟಿರಿಯೊ ಸ್ಪೀಕರ್‌ಗಳೊಂದಿಗೆ ಬರುತ್ತದೆ.

ನಥಿಂಗ್‌ ಫೋನ್‌ 2a ಬೆಲೆ ಮತ್ತು ಲಭ್ಯತೆ
ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 8GB RAM + 128GB ಸ್ಟೋರೇಜ್ ಆಯ್ಕೆಗೆ 23,999ರೂ ಬೆಲೆಯನ್ನು ಹೊಂದಿದೆ. ಇದರ 8GB RAM + 256GB ಸ್ಟೋರೇಜ್‌ ಆಯ್ಕೆಯು 25,999ರೂ ಬೆಲೆಯಲ್ಲಿ ಬರಲಿದೆ. ಇದರ 12GB RAM + 256GB ಸ್ಟೋರೇಜ್ ರೂಪಾಂತರದ ಆಯ್ಕೆಯು 27,999ರೂ ಬೆಲೆಯಲ್ಲಿ ಬರಲಿದೆ. ಇದನ್ನು ಬಿಳಿ ಮತ್ತು ಕಪ್ಪು ಬಣ್ಣದ ಆಯ್ಕೆಗಳಲ್ಲಿ ನೀಡಲಾಗುತ್ತದೆ. ಈ ಫೋನ್‌ ಮಾರ್ಚ್ 12 ರಿಂದ ಫ್ಲಿಪ್‌ಕಾರ್ಟ್ ಮೂಲಕ ಮಾರಾಟವಾಗಲಿದೆ.

ಲಾಂಚ್‌ ಆಫರ್‌ ಏನಿದೆ?
ನಥಿಂಗ್‌ ಫೋನ್‌ 2a ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್ ಮೂಲಕ ಮಾರ್ಚ್ 12 ರಂದು ಕೇವಲ ಒಂದು ದಿನದ ಅವಧಿಗೆ 19,999ರೂ. ಬೆಲೆಯಲ್ಲಿ ಮಾರಾಟವಾಗಲಿದೆ. ಇದಲ್ಲದೆ, ಇ-ಕಾಮರ್ಸ್ ಕಂಪನಿಯು HDFC ಬ್ಯಾಂಕ್ ಕಾರ್ಡ್‌ಗಳನ್ನು ಬಳಸಿಕೊಂಡು ಮಾಡಿದ ಖರೀದಿಗಳಿಗೆ 2,000 ಕ್ಯಾಶ್‌ಬ್ಯಾಕ್ ಸಿಗಲಿದೆ.

Best Mobiles in India

English summary
Nothing Phone 2a With 5,000mAh Battery Launched in India: Price Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+