Home
ಸುದ್ದಿಜಾಲ

ನಾಳೆ ಹೊಸ Nothing ಫೋನ್ ಸೇಲ್; 50MP + 50MP + 50MP ಕ್ಯಾಮೆರಾಗಳು.. 2000 ರಿಯಾಯಿತಿ.. ಬೆಲೆ ಇಷ್ಟೆನಾ?

ನಥಿಂಗ್ ಸಂಸ್ಥೆಯು ಇತ್ತೀಚೆಗೆ ಭಾರತದಲ್ಲಿ ಎರಡು ಹೊಸ ಸ್ಮಾರ್ಟ್‌ಫೋನ್‌ಗಳನ್ನು ಬಿಡುಗಡೆ ಮಾಡಿದೆ. ಇವುಗಳೇ, ನಥಿಂಗ್ ಫೋನ್ 3a (Nothing Phone 3a) ಮತ್ತು ನಥಿಂಗ್ ಫೋನ್ 3a ಪ್ರೊ (Nothing Phone 3a Pro) ಫೋನ್‌ಗಳು. ಈ ಪೈಕಿ ನಥಿಂಗ್ ಫೋನ್ (3a) ಮೊಬೈಲ್ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಅಂದಹಾಗೆ, ಈ ಸ್ಮಾರ್ಟ್‌ಫೋನ್‌ ನಾಳೆ (ಮಾರ್ಚ್ 11) ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಬನ್ನಿ, ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳನ್ನು ತಿಳಿಯೋಣ.

ನಥಿಂಗ್ ಫೋನ್ (3a) ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಈ ಸ್ಮಾರ್ಟ್‌ಫೋನ್ ಗ್ಲಿಫ್ ಲೈಟ್ ಇಂಟರ್​ಫೇಸ್ ಹೊಂದಿದೆ. ಈ ಫೋನಿನಲ್ಲಿ 50MP + 50MP + 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಮೊಬೈಲ್ 6.77 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 50W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳೊಂದಿಗೆ ಬಿಡುಗಡೆಯಾಗಿದೆ.

ನಾಳೆ ಹೊಸ Nothing ಫೋನ್ ಸೇಲ್; ಮೂರು 50MP ಕ್ಯಾಮೆರಾಗಳು.. 2000 ರಿಯಾಯಿತಿ

ನಥಿಂಗ್ ಫೋನ್ (3a) ಬೆಲೆ

8GB RAM + 128GB ಸ್ಟೋರೇಜ್ ಬೆಲೆ = 24,999 ರೂ.
8GB RAM + 256GB ಸ್ಟೋರೇಜ್ ಬೆಲೆ = 26,999 ರೂ.

ನಥಿಂಗ್ ಫೋನ್ (3a) ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ ಮೂಲ ಮಾದರಿಯು 24,999 ರೂ.ಗಳ ಆರಂಭಿಕ ಬೆಲೆ ಹೊಂದಿದೆ. ನಾಳೆಯಿಂದ (ಮಾರ್ಚ್ 11) ಈ ಫೋನ್ ತನ್ನ ಮೊದಲ ಮಾರಾಟವನ್ನು ಪ್ರಾರಂಭಿಸಲಿದೆ. ಕಂಪನಿಯು ಎಚ್‌ಡಿಎಫ್‌ಸಿ, ಐಡಿಎಫ್‌ಸಿ ಫ್ರಿಸ್ಟ್ ಬ್ಯಾಂಕ್ ಮತ್ತು ಒನ್‌ಕಾರ್ಡ್‌ ವಹಿವಾಟುಗಳ ಮೇಲೆ 2,000 ರೂ. ರಿಯಾಯಿತಿ ಘೋಷಿಸಿದೆ. ಈ ನಥಿಂಗ್ ಫೋನ್ (3a) ಫೋನ್ ಕಪ್ಪು, ಬಿಳಿ ಮತ್ತು ನೀಲಿ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ನಥಿಂಗ್ ಫೋನ್ (3a) ಪ್ರೊ ವೈಶಿಷ್ಟ್ಯಗಳು

ಡಿಸ್ಪ್ಲೇ ವಿವರ

ನಥಿಂಗ್ ಫೋನ್ (3a) ಫೋನ್ 6.77 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1080 x 2392 ಪಿಕ್ಸೆಲ್‌ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 3000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಇದು ಪಾಂಡಾ ಗ್ಲಾಸ್ ರಕ್ಷಣೆ ಸಹ ಹೊಂದಿದೆ.

ಪ್ರೊಸೆಸರ್ ಸಾಮರ್ಥ್ಯ

ನಥಿಂಗ್ ಫೋನ್ (3a) ಮೊಬೈಲ್ ಸ್ನಾಪ್‌ಡ್ರಾಗನ್ 7s ಜೆನ್ 3 ಆಕ್ಟಾ ಕೋರ್ ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳ ಆಧಾರದ ಮೇಲೆ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ನಥಿಂಗ್ ಓಎಸ್ 3.1 ನೊಂದಿಗೆ ಕೆಲಸ ಮಾಡುತ್ತದೆ. ಗ್ರಾಫಿಕ್ಸ್‌ಗಾಗಿ, ಈ ಮೊಬೈಲ್ ಅಡ್ರಿನೊ 720 ಜಿಪಿಯು ಸಹ ಹೊಂದಿದೆ. ಈ ಫೋನ್ 8GB ಮತ್ತು 12GB RAM ಹೊಂದಿದೆ. ಇದರೊಂದಿಗೆ 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.

ಕ್ಯಾಮೆರಾ ಸೆಟಪ್

ನಥಿಂಗ್ ಫೋನ್ (3a) ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಈ ಫೋನಿನಲ್ಲಿ OIS ಬೆಂಬಲದೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಲಭ್ಯವಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಸೋನಿ ದ್ವಿತೀಯ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ತೃತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಫ್ರಂಟ್‌ ಕ್ಯಾಮೆರಾ ಲಭ್ಯವಿದೆ.

ಬ್ಯಾಟರಿ ಮತ್ತು ಚಾರ್ಜಿಂಗ್‌

ನಥಿಂಗ್ ಫೋನ್ (3a) ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 50W ವೈರ್ಡ್ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಇದು ಸ್ಪ್ಲಾಶ್ ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.4, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ಸೌಲಭ್ಯಗಳನ್ನು ಒಳಗೊಂಡಿದೆ.

Best Mobiles in India

English summary
Nothing Phone (3a) First Sale Start Tomorrow via Flipkart: check price, offer and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+