Home
ಸುದ್ದಿಜಾಲ

ಹೊಸ Nothing Phone (3a) ಖರೀದಿಗೆ ಲಭ್ಯ; 2000 ರಿಯಾಯಿತಿ.. ರಾಶಿ ಫೀಚರ್ಸ್.. ಬೆಲೆ ಇಷ್ಟೆನಾ?

ನಥಿಂಗ್ ಕಂಪನಿಯು ಇತ್ತೀಚೆಗೆ ಭಾರತದಲ್ಲಿ ಹೊಸ ಫೋನನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ನಥಿಂಗ್ ಫೋನ್ 3a (Nothing Phone 3a) ಹೆಸರಿನೊಂದಿಗೆ ದೇಶೀಯ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ. ಅಂದಹಾಗೆ, ಈ ಮೊಬೈಲ್ ಪ್ರಸ್ತುತ, ಭಾರತದಲ್ಲಿ ಖರೀದಿಗೆ ಲಭ್ಯವಿದೆ. ಇದನ್ನು ನಥಿಂಗ್ ಫೋನ್ 3a ಪ್ರೊ (Nothing Phone 3a Pro) ಜೊತೆಗೆ ರಿಲೀಸ್ ಮಾಡಲಾಗಿತ್ತು. ಇದು ತನ್ನ ಸೈಲಿಶ್ ಲುಕ್ ಮತ್ತು ಅತ್ಯುತ್ತಮ ವೈಶಿಷ್ಟ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿದೆ. ಈ ಹೊಸ ಫೋನಿನ ಬೆಲೆ, ಲಭ್ಯತೆ ಮತ್ತು ವಿಶೇಷತೆಗಳ ಬಗ್ಗೆ ಮಾಹಿತಿ ಇಲ್ಲಿದೆ.

ನಥಿಂಗ್ ಫೋನ್ (3a) ಫೋನ್ ಮೂರು ಬಣ್ಣಗಳಲ್ಲಿ ಬಿಡುಗಡೆಯಾಗಿದೆ. ನೀವು ಕಪ್ಪು, ಬಿಳಿ ಮತ್ತು ನೀಲಿ ಬಣ್ಣಗಳಲ್ಲಿ ಖರೀದಿಸಬಹುದು. ಈ ಫೋನಿನ ವಿಶೇಷತೆಗಳ ಬಗ್ಗೆ ಹೇಳುವುದಾದರೆ, ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್‌ನೊಂದಿಗೆ ಕೆಲಸ ಮಾಡುತ್ತದೆ. ಈ ಫೋನಿನಲ್ಲಿ 50MP + 50MP + 50MP ಟ್ರಿಪಲ್ ಕ್ಯಾಮೆರಾ ಸೆಟಪ್ ಲಭ್ಯವಿದೆ. ಈ ಮೊಬೈಲ್ 6.77 ಇಂಚಿನ ಡಿಸ್ಪ್ಲೇ ಹೊಂದಿದೆ. ಜೊತೆಗೆ 8GB RAM + 256GB ಸ್ಟೋರೇಜ್, 5000mAh ಬ್ಯಾಟರಿ ಮತ್ತು 50W ವೇಗದ ಚಾರ್ಜಿಂಗ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Nothing Phone (3a) ಖರೀದಿಗೆ ಲಭ್ಯ; 2000 ಡಿಸ್ಕೌಂಟ್.. ರಾಶಿ ಫೀಚರ್ಸ್.. ಬೆಲೆ?

ನಥಿಂಗ್ ಫೋನ್ (3a) ಬೆಲೆ ಮತ್ತು ಆಫರ್

ನಥಿಂಗ್ ಫೋನ್ (3a) ಮೊಬೈಲ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ 8GB RAM + 128GB ಸ್ಟೋರೇಜ್ ಬೆಲೆ 24,999 ರೂ. ಮತ್ತು 8GB RAM + 256GB ಸ್ಟೋರೇಜ್ ಬೆಲೆ 26,999 ರೂ. ಆಗಿದೆ. ಕಂಪನಿಯು ಈ ಫೋನಿನ ಖರೀದಿ ಮೇಲೆ ಕೆಲವು ಆಫರ್ ನೀಡುತ್ತಿದೆ. ಎಚ್‌ಡಿಎಫ್‌ಸಿ, ಐಡಿಎಫ್‌ಸಿ ಫ್ರಿಸ್ಟ್ ಬ್ಯಾಂಕ್ ಮತ್ತು ಒನ್‌ಕಾರ್ಡ್‌ ವಹಿವಾಟುಗಳ ಮೇಲೆ 2,000 ರೂ. ರಿಯಾಯಿತಿ ಲಭ್ಯವಿದೆ.

ನಥಿಂಗ್ ಫೋನ್ (3a): ಟಾಪ್ 5 ಫೀಚರ್ಸ್

ಡಿಸ್ಪ್ಲೇ ಹೇಗಿದೆ

ನಥಿಂಗ್ ಫೋನ್ (3a) ಸ್ಮಾರ್ಟ್‌ಫೋನ್ 6.77 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 1,080 x 2,392 ಪಿಕ್ಸೆಲ್‌ ರೆಸಲ್ಯೂಶನ್ ಬೆಂಬಲದೊಂದಿಗೆ ಬರುತ್ತದೆ. ಈ ಡಿಸ್ಪ್ಲೇಯು 120Hz ರಿಫ್ರೆಶ್ ದರ, 240Hz ಟಚ್ ಸ್ಯಾಂಪ್ಲಿಂಗ್ ದರ ಮತ್ತು 3,000 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್ ಬೆಂಬಲ ಹೊಂದಿದೆ. ಈ ಮೊಬೈಲ್ ಪಾಂಡಾ ಗ್ಲಾಸ್ ರಕ್ಷಣೆಯನ್ನು ಹೊಂದಿದೆ.

ಸ್ನಾಪ್‌ಡ್ರಾಗನ್ ಪ್ರೊಸೆಸರ್

ನಥಿಂಗ್ ಫೋನ್ (3a) ಫೋನ್ ಸ್ನಾಪ್‌ಡ್ರಾಗನ್ 7s ಜೆನ್ 3 ಪ್ರೊಸೆಸರ್ ಹೊಂದಿದೆ. ಇದನ್ನು 4 ನ್ಯಾನೊಮೀಟರ್ ಫ್ಯಾಬ್ರಿಕೇಶನ್‌ಗಳಲ್ಲಿ ತಯಾರಿಸಲಾಗಿದೆ. ಈ ಮೊಬೈಲ್ ಆಂಡ್ರಾಯ್ಡ್ 15 ಆಧಾರಿತ ನಥಿಂಗ್ ಓಎಸ್ 3.1 ಜೊತೆಗೆ ಕೆಲಸ ಮಾಡುತ್ತದೆ. ಈ ಮೊಬೈಲ್ ಗ್ರಾಫಿಕ್ಸ್‌ಗಾಗಿ, ಅಡ್ರಿನೊ 720 ಜಿಪಿಯು ಹೊಂದಿದೆ. ಈ ಫೋನ್ 8GB RAM ಮತ್ತು 12GB RAM ಹೊಂದಿದೆ. ಹಾಗೆಯೇ 128GB ಸ್ಟೋರೇಜ್ ಮತ್ತು 256GB ಸ್ಟೋರೇಜ್ ಲಭ್ಯವಿದೆ.

ಟ್ರಿಪಲ್ ಕ್ಯಾಮೆರಾ ಸೆಟಪ್

ನಥಿಂಗ್ ಫೋನ್ (3a) ಮೊಬೈಲ್ ಟ್ರಿಪಲ್ ಕ್ಯಾಮೆರಾ ರಚನೆ ಹೊಂದಿದೆ. ಈ ಫೋನಿನಲ್ಲಿ 50 ಮೆಗಾಪಿಕ್ಸೆಲ್ ಮೊದಲ ಕ್ಯಾಮೆರಾ ಇದೆ. ಇದು OIS ಬೆಂಬಲದೊಂದಿಗೆ ಬರುತ್ತದೆ. ಹಾಗೆಯೇ 50 ಮೆಗಾಪಿಕ್ಸೆಲ್ ಎರಡನೇ ಕ್ಯಾಮೆರಾ ಮತ್ತು 8 ಮೆಗಾಪಿಕ್ಸೆಲ್ ಮೂರನೇ ಕ್ಯಾಮೆರಾ ಹೊಂದಿದೆ. ಈ ಫೋನಿನಲ್ಲಿ ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ, 50 ಮೆಗಾಪಿಕ್ಸೆಲ್ ಸೆಲ್ಫಿ ಶೂಟರ್ ಇದೆ.

ಅದ್ಭುತ ಬ್ಯಾಟರಿ

ನಥಿಂಗ್ ಫೋನ್ (3a) ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಈ ಬ್ಯಾಟರಿಯನ್ನು ಚಾರ್ಜ್ ಮಾಡಲು, 50W ವೈರ್ಡ್ ಚಾರ್ಜಿಂಗ್‌ ಸೌಲಭ್ಯ ಒದಗಿಸಲಾಗಿದೆ. ಈ ಮೊಬೈಲ್ ನೀರು ಮತ್ತು ಧೂಳಿನ ವಿರುದ್ಧ ರಕ್ಷಣೆಗಾಗಿ IP64 ರೇಟಿಂಗ್ ಪಡೆದಿದೆ. ಇದು ಇನ್ ಡಿಸ್ಪ್ಲೇ ಆಪ್ಟಿಕಲ್ ಫಿಂಗರ್‌ಪ್ರಿಂಟ್ ಸ್ಕ್ಯಾನರ್ ಹೊಂದಿದೆ. ಹಾಗೆಯೇ ಯುಎಸ್‌ಬಿ ಟೈಪ್ ಸಿ ಆಡಿಯೋ, ಸ್ಟೀರಿಯೊ ಸ್ಪೀಕರ್‌ಗಳನ್ನು ಒಳಗೊಂಡಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA, ಡ್ಯುಯಲ್ 4G VoLTE, ವೈ-ಫೈ 6, ಬ್ಲೂಟೂತ್ 5.4, ಜಿಪಿಎಸ್‌, ಯುಎಸ್‌ಬಿ ಟೈಪ್ ಸಿ, ಎನ್‌ಎಫ್‌ಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Best Mobiles in India

English summary
Nothing Phone (3a) Now Available for Purchase in India: Check offers, Features, Specifications and More
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+