ಟೆಕ್ ವಲಯದಲ್ಲಿ ಸಂಚಲನ ಸೃಷ್ಟಿಸಿದ ನುಬಿಯಾ ಫ್ಲಿಪ್ 5G ಫೋನ್: ಫೀಚರ್ಸ್ ಹೇಗಿದೆ
ಜನಪ್ರಿಯ ಗೇಮಿಂಗ್ ಸ್ಮಾರ್ಟ್‌ಫೋನ್ ತಯಾರಕ ನುಬಿಯಾ ಸಂಸ್ಥೆ ತನ್ನ ಮೊದಲ ಫ್ಲಿಪ್ ಪೋನ್ ನುಬಿಯಾ ಫ್ಲಿಪ್ ಅನ್ನು ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಅನ್ನು ಬಾರ್ಸಿಲೋನಾದ MWC ಈವೆಂಟ್‌ನಲ್ಲಿ ಅನಾವರಣಗೊಳಿಸಲಾಗಿದೆ. ಇನ್ನು ಫೋನ್ 4310mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.
ಹೌದು, Nubia Flip 5G ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದು ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Nubia Flip 5G ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
Nubia Flip 5G ಸ್ಮಾರ್ಟ್‌ಫೋನ್ 6.9 ಇಂಚಿನ FHD+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು 2790 x 1188 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದ್ದು, 120Hz ರಿಫ್ರೆಶ್ ರೇಟ್‌ನೊಂದಿಗೆ ಬರಲಿದೆ. ಇನ್ನು ಸ್ಮಾರ್ಟ್‌ಫೋನ್ 1.43 ಇಂಚಿನ ಕವರ್ ಡಿಸ್‌ಪ್ಲೇಯನ್ನು ಸಹ ಒಳಗೊಂಡಿದೆ. ಈ ಡಿಸ್‌ಪ್ಲೇಯು 466×466 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದಲ್ಲಿ ಬರಲಿದೆ.
Nubia Flip 5G ಪ್ರೊಸೆಸರ್ ಯಾವುದು?
Nubia Flip 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯದಲ್ಲಿ ಬರಲಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.
Nubia Flip 5G ಕ್ಯಾಮೆರಾ ಸೆಟಪ್ ಏನಿದೆ?
Nubia Flip 5G ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ನಲ್ಲಿ ಬರಲಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ.

Nubia Flip 5G ಬ್ಯಾಟರಿ ಮತ್ತು ಇತರೆ
Nubia Flip 5G ಸ್ಮಾರ್ಟ್‌ಫೋನ್ 4310mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದ್ದು, ಸುಮಾರು 73 ನಿಮಿಷಗಳಲ್ಲಿ ಫೋನ್ ಅನ್ನು ಸಂಪೂರ್ಣವಾಗಿ ಚಾರ್ಜ್ ಮಾಡಬಹುದಾಗಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G SA/NSA, ಡ್ಯುಯಲ್ 4G VoLTE, Wi-Fi 6 802.11 ax, ಬ್ಲೂಟೂತ್ 5.3,GPS/GLONASS, USB ಟೈಪ್-C, NFC ಅನ್ನು ಹೊಂದಿದೆ.
Nubia Flip 5G ಬೆಲೆ ಮತ್ತು ಲಭ್ಯತೆ
ನುಬಿಯಾ ಫ್ಲಿಪ್ 5G ಸ್ಮಾರ್ಟ್‌ಫೋನ್ ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ USD 599 (ಅಂದಾಜು 49,650ರೂ)ಹೊಂದಿದೆ. ಇದು ಕಪ್ಪು ಮತ್ತು ಚಿನ್ನದ ಬಣ್ಣಗಳಲ್ಲಿ ಬರುತ್ತದೆ. ಶೀಘ್ರದಲ್ಲೇ ಫೋನ್ ಜಾಗತಿಕವಾಗಿ ಹೊರತರಲಿದೆ ಎಂದು ಕಂಪನಿ ಹೇಳಿದೆ.
ಇದಲ್ಲದೆ ನುಬಿಯಾ ಕಂಪೆನಿ ಇತ್ತೀಚಿಗೆ ನುಬಿಯಾ Z60 ಅಲ್ಟ್ರಾ (Nubia Z60 Ultra)ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ 6.8 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ.


Click it and Unblock the Notifications








