ನುಬಿಯಾ ಪ್ಲೇ 5G ಸ್ಮಾರ್ಟ್‌ಫೋನ್‌ ಬಿಡುಗಡೆ! ಆತ್ಯಾಕರ್ಷಕ ಫೀಚರ್ಸ್‌!

|

ಪ್ರಸ್ತುತ ಟೆಕ್‌ ಮಾರುಕಟ್ಟೆಯಲ್ಲಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಇರುತ್ತವೆ. ಈಗಾಗಲೇ ಹಲವು ಕಂಪೆನಿಗಳು ತಮ್ಮ ಹೊಸ ವಿನ್ಯಾಸದ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಲೇ ಇವೆ. ಇವುಗಳಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ತಮ್ಮ ವಿಶೇಷ ಫೀಚರ್ಸ್‌ಗಳಿಂದ ಗುರುತಿಸಿಕೊಳ್ಳುತ್ತವೆ. ಸದ್ಯ ಈ ಪೈಕಿ ಗೇಮಿಂಗ್ ಸ್ಮಾರ್ಟ್‌ಫೋನ್‌ ಗಳಿಂದಲೇ ಜನಪ್ರಿಯತೆ ಗಳಿಸಿರುವ ನುಬಿಯಾ ಸಂಸ್ಥೆ ಕೂಡ ಒಂದಾಗಿದೆ. ಸದ್ಯ ಚೀನಾ ಮೂಲದ ನುಬಿಯಾ ಕಂಪೆನಿ ತನ್ನ ಹೊಸ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ವಲಯದಲ್ಲಿ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ನುಬಿಯಾ ಕಂಪೆನಿ ತನ್ನ ಹೊಸ 5G ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಅನ್ನು ನಿಬಿಯಾ ಪ್ಲೇ 5G ಎಂದು ಹೆಸರಿಸಲಾಗಿದ್ದು, ಚೀನಾ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 144Hz ರಿಫ್ರೆಶ್ ರೇಟ್‌ ಹೊಂದಿರುವ AMOLED ಡಿಸ್‌ಪ್ಲೇಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫಿಚರ್ಸ್‌ಗಳನ್ನ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ನುಬಿಯಾ ಪ್ಲೇ 5G ಸ್ಮಾರ್ಟ್‌ಫೋನ್‌ 1080 × 2340 ಪಿಕ್ಸೆಲ್‌ ಸ್ಕ್ರಿನ್‌ ರೆಸಲ್ಯೂಶನ್‌ ಸಾಮರ್ಥ್ಯ ಹೊಂದಿರುವ 6.65-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು ಫುಲ್‌ ಎಚ್‌ಡಿ ಪ್ಲಸ್‌ ಡಿಸ್‌ಪ್ಲೇ ಆಗಿದೆ. ಅಲ್ಲದೆ ಈ ಡಿಸ್‌ಪ್ಲೇಯು 20: 9 ರಚನೆಯ ಅನುಪಾತವನ್ನು ಹೊಂದಿದ್ದು, ಅಮೋಲೆಡ್ ಸ್ಕ್ರೀನ್‌ ಅನ್ನು ಒಳಗೊಂಡಿದೆ. ಅಲ್ಲದೆ ಡಿಸಿಐ-ಪಿ 3 ಬಣ್ಣದ ಹರವುಗಳೊಂದಿಗೆ 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪಳೇಯು ಗೇಮಿಂಗ್‌ಗೆ ಯೋಗ್ಯವಾದ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಈ ಸ್ಮಾರ್ಟ್‌ಫೋನ್‌ ಅಡ್ರಿನೊ 620GPU ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 765G SoC ಪ್ರೊಸೆಸರ್‌ ವೇಗವನ್ನು ಪಡೆದುಕೊಂಡಿದೆ. ಅಲ್ಲದೆ ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 6GB RAM + 128GB , 8GB RAM + 128GB ಮತ್ತು 8GB RAM + 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಮುರು ವೇರಿಯೆಂಟ್‌ ಆಯ್ಕೆಗಳನ್ನ ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ನುಬಿಯಾ ಪ್ಲೇ 5G ಸ್ಮಾರ್ಟ್‌ಫೋನ್‌ ಕ್ವಾಡ್-ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೋನಿ ಐಎಂಎಕ್ಸ್ 582 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹಾಗೂ 120 ಡಿಗ್ರಿ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 12 ಮೆಗಾಪಿಕ್ಸೆಲ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ಇನ್ನು ಈ ಸ್ಮಾರ್ಟ್‌ಫೋನ್‌ 5,100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, 30W ಯುಎಸ್‌ಬಿ ಟೈಪ್‌-C ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಇದಲ್ಲದೆ 61mm ದೊಡ್ಡ ಲಿಕ್ವಿಡ್ ಕೂಲಿಂಗ್ ಟ್ಯೂಬ್ ಮತ್ತು ICE 2.5 ರ್ಯಾಕ್-ಮೌಂಟೆಡ್ ಲಿಕ್ವಿಡ್ ಕೂಲಿಂಗ್ ಸಿಸ್ಟಮ್‌ ಅನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಅನ್ನು ಬೆಂಬಲಿಸಲಿದೆ. ಇವುಗಳಲ್ಲದೆ ಈ ಸ್ಮಾರ್ಟ್‌ಫೋನ್‌ ಫೇಸ್ ಅನ್ಲಾಕ್ ಜೊತೆಗೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್‌ ಸೆನ್ಸಾರ್‌ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನುಬಿಯಾ ಪ್ಲೇ 5G ಸ್ಮಾರ್ಟ್‌ಫೋನ್‌ನ ಬೇಸ್‌ ಮಾಡೆಲ್‌ 6GB RAM + 128GB ಸಾಮರ್ಥ್ಯದ ಸ್ಮಾರ್ಟ್‌ಫೋನ್‌ RMB 2,399 ಬೆಲೆಯನ್ನ ಹೊಂದಿದೆ. ಹಾಗೇಯೇ 8GB RAM + 128GB ಸಂಗ್ರಹ ಆವೃತ್ತಿಯ ಸ್ಮಾರ್ಟ್‌ಫೋನ್‌ RMB 2,699 ಬೆಲೆಯನ್ನ ಮತ್ತು ಟಾಪ್-ಎಂಡ್ ಮಾದರಿಯ 8GB RAM+ 256GB ಸಾಮರ್ಥ್ಯದ ಆಯ್ಕೆಯ ಸ್ಮಾರ್ಟ್‌ಫೋನ್‌ RMB 2,999 ಬೆಲೆಯನ್ನ ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ ಬ್ಲ್ಯಾಕ್‌,ವೈಟ್‌, ಬ್ಲೂ ಕಲರ್‌ ಆಯ್ಕೆಗಳಲ್ಲಿ ಲಬ್ಯವಾಗಲಿದೆ.

Best Mobiles in India

English summary
Nubia Play is a mid-range smartphone with 5G support. The company has priced its base variant at RMB 2,399 for the 6GB RAM with 128GB storage.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X