Just In
Don't Miss
- Sports
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಈ ತಂಡವೇ ಗೆಲ್ಲಲಿದೆ ಎಂದ ಮೈಕಲ್ ವಾನ್
- News
Breaking; ಕೋಲಾರ ಕ್ಷೇತ್ರವೇ ಏಕೆ, ಸಿದ್ದರಾಮಯ್ಯ ಪ್ರತಿಕ್ರಿಯೆ
- Automobiles
ಹೆಚ್ಚಿನ ಮೈಲೇಜ್ ನೀಡುವ ಬಹುನಿರೀಕ್ಷಿತ ಟಾಟಾ ಆಲ್ಟ್ರೊಜ್ iCNG ಕಾರಿನ ವಿಶೇಷತೆಗಳು...
- Movies
"ಪಪ್ಪಾ ನಿನ್ನ ಬೈಸಿಪ್ಸ್ಗಿಂತ ನನ್ನ ಬೈಸಿಪ್ಸ್ ಗಟ್ಟಿ": ನಾನೇ ಬಾಹುಬಲಿ ಎಂದ ಯಥರ್ವ್
- Lifestyle
ತಿಂದ ಆಹಾರ ಸರಿಯಾಗಿ ಜೀರ್ಣವಾಗ್ತಿಲ್ವಾ ಹಾಗಾದ್ರೆ ಈ ಆಸನಗಳನ್ನ ಮಾಡಿ
- Finance
LIC Jeevan Umang: ದಿನಕ್ಕೆ 150 ರೂ ಹೂಡಿಕೆ ಮಾಡಿ, 10 ಲಕ್ಷ ಪಡೆಯಿರಿ!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನುಬಿಯಾ ರೆಡ್ ಮ್ಯಾಜಿಕ್ 5G ಲೈಟ್ ಸ್ಮಾರ್ಟ್‌ಫೋನ್ ಬಿಡುಗಡೆ!
ಸ್ಮಾರ್ಟ್‌ಫೋನ್ ವಲಯದಲ್ಲಿ ಸಾಕಷ್ಟು ವಿಭಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಬ್ಯವಿವೆ. ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳು, ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು, ಬಜೆಟ್ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು ಕೂಡ ಇಂದು ಲಭ್ಯವಿವೆ. ಈಗಾಗಲೇ ಹಲವು ಕಂಪೆನಿಗಳು ತಮ್ಮ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಬಿಡುಗಡೆ ಮಾಡಿವೆ. ಇದರಲ್ಲಿ ನುಬಿಯಾ ಕಂಪೆನಿ ಕೂಡ ಒಂದಾಗಿದ್ದು, ತನ್ನ ವಿಶೇಷ ಶೈಲಿಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ತನ್ನ ಮತ್ತೊಂದು ಹೊಸ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ.

ಹೌದು, ನುಬಿಯಾ ಕಂಪೆನಿ ತನ್ನ ಹೊಸ ನುಬಿಯಾ ರೆಡ್ ಮ್ಯಾಜಿಕ್ 5G ಲೈಟ್ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ವೇಗವನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 48 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಪ್ರೈಮರಿ ಕ್ಯಾಮೆರಾವನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್ ಇದೇ ಮಾರ್ಚ್‌ನಲ್ಲಿ ಬಿಡುಗಡೆಯಾದ ನುಬಿಯಾ ರೆಡ್ ಮ್ಯಾಜಿಕ್ 5G ಫೋನ್‌ನ ಮೆಲೋವರ್ ಆವೃತ್ತಿಯಾಗಿದೆ ಎನ್ನಲಾಗ್ತಿದೆ. ಇನ್ನು ಈ ಸ್ಮಾರ್ಟ್‌ಫೋನ್ ವಿಶೇಷತೆ ಹಾಗೂ ವಿನ್ಯಾಸ ಹೇಗಿದೆ ಹೇಗಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ
ನುಬಿಯಾ ರೆಡ್ ಮ್ಯಾಜಿಕ್ 5G ಲೈಟ್ ಸ್ಮಾರ್ಟ್‌ಫೋನ್ 2340 x 1,080 ಪಿಕ್ಸೆಲ್ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.5 ಇಂಚಿನ ಒಎಲ್‌ಇಡಿ ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಈ ಡಿಸ್‌ಪ್ಲೇಯು ಉತ್ತಮ ಪಿಕ್ಸೆಲ್ ಸಾಂದ್ರತೆಯನ್ನ ಹೊಂದಿದ್ದು, ವೀಡಿಯೋ ವೀಕ್ಷಣೆಗೆ ಯೋಗ್ಯವಾದ ಡಿಸ್‌ಪ್ಲೇ ಮಾದರಿಯನ್ನ ಹೊಂದಿದೆ.

ಪ್ರೊಸೆಸರ್
ಇನ್ನು ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 765 ಜಿ ಆಕ್ಟಾ-ಕೋರ್ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 10 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್ 8GB RAM ಮತ್ತು 256GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯವನ್ನ ವಿಸ್ತರಿಸಿಕೊಳ್ಳುವ ಅವಕಾಶದ ಬಗ್ಗೆ ಇನ್ನು ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.

ಕ್ಯಾಮೆರಾ ವಿನ್ಯಾಸ
ನುಬಿಯಾ ರೆಡ್ ಮ್ಯಾಜಿಕ್ 5G ಲೈಟ್ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್‌ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 8MP ಅಲ್ಟ್ರಾ ವಿಶಾಲ ಕೋನ ಲೆನ್ಸ್, ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ
ಇನ್ನು ಈ ಸ್ಮಾರ್ಟ್‌ಫೋನ್ 5100mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್ ಅನ್ನು ಹೊಂದಿದ್ದು, ಇದು 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್, ವೈಫೈ,
ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಎನ್‌ಎಫ್‌ಸಿ ಮತ್ತು ಬ್ಲೂಟೂತ್ 5.0 ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ
ನುಬಿಯಾ ರೆಡ್ ಮ್ಯಾಜಿಕ್ 5G ಲೈಟ್ ಸ್ಮಾರ್ಟ್‌ಫೋನ್ ಅನ್ನು ವೊಡಾಫೋನ್ ಸೈಟ್‌ನಲ್ಲಿ 36 ತಿಂಗಳ ಒಪ್ಪಂದದೊಂದಿಗೆ ತಿಂಗಳಿಗೆ ಯುರೋ 17 (ಸುಮಾರು 1,400 ರೂ.) ಆರಂಭಿಕ ಬೆಲೆಯೊಂದಿಗೆ ಲಭ್ಯವಾಗಲಿದೆ. ಒಟ್ಟಾರೆ ಈ ಸ್ಮಾರ್ಟ್‌ಫೋನ್‌ಗಾಗಿ ಒಟ್ಟು ಯುರೋ 612 (ಸುಮಾರು 52,200 ರೂ.) ವರೆಗೆ ಹೊಂದಿದೆ. ಇನ್ನು ನುಬಿಯಾ ರೆಡ್ ಮ್ಯಾಜಿಕ್ 5G ಲೈಟ್ ಒಂದೇ ಕಪ್ಪು ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470