ನುಬಿಯಾ ರೆಡ್‌ ಮ್ಯಾಜಿಕ್‌ 5s ಗೇಮಿಂಗ್‌ ಸ್ಮಾರ್ಟ್‌ಫೋನ್ ಬಿಡುಗಡೆ!

|

ಟೆಕ್‌ ವಲಯದಲ್ಲಿ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿರುವ ಕಂಪೆನಿ ನುಬಿಯಾ. ತನ್ನ ವಿಭಿನ್ನ ಮಾದರಿಯ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ನುಬಿಯಾ ತನ್ನ ನುಬಿಯಾ ರೆಡ್ ಮ್ಯಾಜಿಕ್ 5S ಅನ್ನು ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್‌ ಮೊದಲಿನ ನುಬಿಯಾ ರೆಡ್‌ಮ್ಯಾಜಿಕ್‌ ಸ್ಮಾರ್ಟ್‌ಫೋನ್‌ಗಳಿಗಿಂತಲೂ ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬೆಳ್ಳಿ ಲೇಪಿತ ಕೂಲಿಂಗ್ ಪ್ಯಾಡ್ ಹೊಂದಿದ್ದು, ಇದು ಹೊಸ ಕೂಲಿಂಗ್ ಪ್ಯಾಡ್ ಗಳಿಗಿಂತ ಸ್ಮಾರ್ಟ್‌ಫೋನ್‌ಗಳಲ್ಲಿ ಬಳಸುವ ಸಾಂಪ್ರದಾಯಿಕ ತಾಮ್ರದ ಕೊಳವೆಗಳಿಗಿಂತ ಉತ್ತಮ ಮತ್ತು ವೇಗವಾಗಿ ಫಲಿತಾಂಶಗಳನ್ನು ನೀಡುತ್ತದೆ ಎಂದು ಕಂಪನಿ ಹೇಳಿಕೊಂಡಿದೆ.

ನುಬಿಯಾ ರೆಡ್‌ ಮ್ಯಾಜಿಕ್

ಹೌದು, ನುಬಿಯಾ ರೆಡ್‌ ಮ್ಯಾಜಿಕ್‌ 5s ಗೇಮಿಂಗ್‌ ಸ್ಮಾರ್ಟ್‌ಫೋನ್‌ ಹೊಸ ಮಾದರಿಯ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೆಳ್ಳಿ ಲೇಪಿತ ಕೂಲಿಂಗ್ ಪ್ಯಾಡ್ ಹೊಂದಿದ್ದು, ಉತ್ತಮ ಕಾರ್ಯದಕ್ಷತೆಯನ್ನು ಹೊಂದಿದೆ. ಇದಲ್ಲದೆ ನುಬಿಯಾ ರೆಡ್ ಮ್ಯಾಜಿಕ್ 5s ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನುಳಿದಂತೆ ನುಬಿಯಾ ರೆಡ್‌ ಮ್ಯಾಜಿಕ್‌ 5s ಸ್ಮಾರ್ಟ್‌ಫೋನ್‌ ಯಾವೆಲ್ಲಾ ಫೀಚರ್ಸ್‌ಗಳನ್ನ ಹೊಂದಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ನುಬಿಯಾ ರೆಡ್‌ ಮ್ಯಾಜಿಕ್‌ 5s ಗೇಮಿಂಗ್‌ ಸ್ಮಾರ್ಟ್‌ಫೋನ್ 1,080x2,340 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.65-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 19.5: 9 ರಚನೆಯ ಅನುಪಾತವನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಅಲ್ಲದೆ ಈ ಡಿಸ್‌ಪ್ಲೇಯು 240Hz ಟಚ್ ರೆಸ್ಪಾನ್ಸ್‌ ರೇಟ್‌ ಅನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು AMOLED ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ TUV ರೈನ್‌ಲ್ಯಾಂಡ್ ಪ್ರಮಾಣೀಕರಣವನ್ನು ಹೊಂದಿದೆ ಮತ್ತು 4,096 ಹಂತದ ಆಟೋಮ್ಯಾಟಿಕ್‌ ಬ್ರೈಟ್‌ನೆಶ್‌ ಅಡ್ಜೆಸ್ಟ್‌ಮೆಂಟ್‌ ಅನ್ನು ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇನ್ನು ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 SoC ಪ್ರೊಸೆಸರ್‌ ವೇಗವನ್ನು ಹೊಂದಿದೆ. ಜೊತೆಗೆ 8GB RAM ಮತ್ತು 128GB ಆಂತರಿಕ ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ. ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಅವಕಾಶವನ್ನು ನೀಡಲಾಗಿಲ್ಲ. ಆದರೆ 256GB UFS3.1 ಸಂಗ್ರಹ ಸಾಮರ್ಥ್ಯವನ್ನು ಹೊಂದಿದೆ.

ಕ್ಯಾಮೆರಾ ವಿನ್ಯಾಸ

ಕ್ಯಾಮೆರಾ ವಿನ್ಯಾಸ

ನುಬಿಯಾ ರೆಡ್‌ ಮ್ಯಾಜಿಕ್‌ 5s ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX686 ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದ್ದು, 120 ಡಿಗ್ರಿ ಅಲ್ಟ್ರಾ-ವೈಡ್-ಆಂಗಲ್ ಲೆನ್ಸ್ ಅನ್ನು ಹೊಂದಿದೆ. ಇನ್ನು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನುಬಿಯಾ ರೆಡ್ ಮ್ಯಾಜಿಕ್ 5s ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 55W ಏರ್-ಕೂಲ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G VOLTE, ವೈ-ಫೈ 6, ಬ್ಲೂಟೂತ್ V5.1, GPS, USB ಟೈಪ್-ಸಿ, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಸೇರಿವೆ. ಅಲ್ಲದೆ ಐಸ್ ಡಾಕ್‌ಕಾಗಿ ಮೀಸಲಾದ ಕನೆಕ್ಟರ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಅಕ್ಸೆಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸರ್, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಅನ್ನು ಹೊಂದಿದೆ. ಜೊತೆಗೆ ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಒಳಗೊಂಡಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ಇನ್ನು ಈ ಸ್ಮಾರ್ಟ್‌ಫೋನ್‌ 8GB RAM + 128GB ಶೇಖರಣಾ ರೂಪಾಂತರದ ಬೆಲೆ CNY 3,799 (ಸುಮಾರು 40,600 ರೂ.)ಗೆ ನಿಗದಿಪಡಿಸಲಾಗಿದ್ದು, ಇದರ 12GB RAM + 256GB ಸ್ಟೋರೇಜ್ ಆಯ್ಕೆಗೆ CNY 4,399 (ಸುಮಾರು 47,000 ರೂ.) ಮತ್ತು 16GB RAM + 256GB ಶೇಖರಣಾ ಮಾದರಿ ಟಾಪ್-ಆಫ್-CNY 4,999 (ಸುಮಾರು 53,400 ರೂ.) ಹೊಂದಿದೆ. ಜೊತೆಗೆ ಫೋನ್ ಐಸ್ ವಿಂಡ್ ಸಿಲ್ವರ್ ಕಲರ್ ಆಯ್ಕೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Nubia Red Magic 5S has launched as the newest member in the brand's Red Magic series of gaming smartphones.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X