ವೇಗದ ಗೇಮಿಂಗ್‌ ಸ್ಮಾರ್ಟ್‌ಫೋನ್‌ ಲಾಂಚ್; ಇದರ ಫೀಚರ್ಸ್‌ ಫುಲ್‌ ಜಬರ್ದಸ್ತ್‌!

|

ಸ್ಮಾರ್ಟ್‌ಫೋನ್‌ ವಲಯದಲ್ಲಿ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳು ಸಹ ಹೆಚ್ಚಿನ ಜನಪ್ರಿಯತೆ ಪಡೆದಿವೆ. ಈ ನಿಟ್ಟಿನಲ್ಲಿ ಗೇಮಿಂಗ್‌ ಫೋನ್‌ಗಳಿಗೆ ಹೆಸರುವಾಸಿಯಾಗಿರುವ ನುಬಿಯಾ ಸಂಸ್ಥೆಯು ನೂತನವಾಗಿ ಗೇಮಿಂಗ್‌ ಫೋನ್‌ ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದು, ಅದುವೇ ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಆಗಿದೆ. ಈ ಫೋನ್‌ ಸ್ನಾಪ್‌ಡ್ರಾಗನ್ 8 ಜೆನ್‌ 2 SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದ್ದು, ಮಾರುಕಟ್ಟೆಯಲ್ಲಿ ಭಾರೀ ಸದ್ದು ಮಾಡುವ ನಿರೀಕ್ಷೆ ಮೂಡಿಸಿದೆ.

ಕ್ರಮವಾಗಿ

ಹೌದು, ನುಬಿಯಾ ಕಂಪೆನಿ ತನ್ನ ಹೊಸ ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ (Nubia RedMagic 8 Pro) ಸ್ಮಾರ್ಟ್‌ಫೋನ್‌ ಅನ್ನು ಗ್ಲೋಬಲ್‌ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಎರಡು ವೇರಿಯಂಟ್‌ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 12GB RAM + 256GB ಮತ್ತು 16GB RAM + 512GB ಆಗಿವೆ. ಜೊತೆಗೆ 6000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದೆ.

ನುಬಿಯಾ

ಹಾಗೆಯೇ ಈ ದೈತ್ಯ ಗೇಮಿಂಗ್ ಫೋನ್‌ OLED ಡಿಸ್‌ಪ್ಲೇ ಪಡೆದಿದ್ದು, 120Hz ರಿಫ್ರೆಶ್ ರೇಟ್‌ ಸಹ ಒಳಗೊಂಡಿದೆ. ಇದರೊಂದಿಗೆ ಟ್ರಿಪಲ್‌ ಕ್ಯಾಮೆರಾ ರಚನೆಯನ್ನು ಇದು ಪಡೆದುಕೊಂಡಿದೆ. ಹಾಗಾದರೇ ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಫೋನಿನ ಬೆಲೆ ಎಷ್ಟು? ಇದರ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಡಿಸ್‌ಪ್ಲೇ ರಚನೆ

ಡಿಸ್‌ಪ್ಲೇ ರಚನೆ

ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಸ್ಮಾರ್ಟ್‌ಫೋನ್‌ ಅಧಿಕ ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯ ಹೊಂದಿರುವ 6.8 ಇಂಚಿನ OLED ಡಿಸ್‌ಪ್ಲೇಯನ್ನ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು 960Hz ಟಚ್ ಸ್ಯಾಂಪ್ಲಿಂಗ್ ರೇಟ್‌ ಅನ್ನು ಹೊಂದಿದ್ದು, 120Hz ರಿಫ್ರೆಶ್ ದರ ಪಡೆದಿದೆ. ಹಾಗೆಯೇ 1300 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್‌ಗೆ ಬೆಂಬಲವನ್ನು ಪಡೆದಿದೆ. ಇದು 520Hz ಶೋಲ್ಡರ್ ಟ್ರಿಗರ್ ಹೊಂದಿದ್ದು, ಇದು ಗೇಮ್‌ಗಳಿಗೆ ಪೂರಕವಾಗಿದೆ.

ಪ್ರೊಸೆಸರ್‌ ಪವರ್‌ ಯಾವುದು

ಪ್ರೊಸೆಸರ್‌ ಪವರ್‌ ಯಾವುದು

ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಸ್ಮಾರ್ಟ್‌ಫೋನ್‌ ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 13 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೇಯೇ ಈ ಸ್ಮಾರ್ಟ್‌ಫೋನ್‌ 8GB RAM 12GB RAM + 256GB ಮತ್ತು 16GB RAM + 512GB ಸಂಗ್ರಹ ಸಾಮರ್ಥ್ಯವನ್ನ ಹೊಂದಿದೆ. ಇದಲ್ಲದೆ ಇದು ಅಂತರ್ನಿರ್ಮಿತ ಫ್ಯಾನ್, 3D ಐಸ್-ಗ್ರೇಡ್ ಡ್ಯುಯಲ್ ಪಂಪ್ ಮತ್ತು 10 ಸ್ಕ್ರೀನ್‌ಗಳ ಶಾಖ-ಪ್ರಸರಣ ಸಾಮಗ್ರಿಗಳ ಆಯ್ಕೆ ಪಡೆದಿದೆ.

ಟ್ರಿಪಲ್ ಕ್ಯಾಮೆರಾ ವಿನ್ಯಾಸ

ಟ್ರಿಪಲ್ ಕ್ಯಾಮೆರಾ ವಿನ್ಯಾಸ

ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್‌, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್‌ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್‌ 16 ಮೆಗಾ ಪಿಕ್ಸೆಲ್‌ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಸ್ಮಾರ್ಟ್‌ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದು 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್‌ಸ್ಪಾಟ್‌, ವೈಫೈ, ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಎನ್‌ಎಫ್‌ಸಿ ಮತ್ತು ಬ್ಲೂಟೂತ್ ಅನ್ನು ಬೆಂಬಲಿಸಲಿದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನುಬಿಯಾ ರೆಡ್ ಮ್ಯಾಜಿಕ್ 8 ಪ್ರೊ ಸ್ಮಾರ್ಟ್‌ಫೋನ್‌ 12GB RAM + 256GB ವೇರಿಯಂಟ್‌ ಬೆಲೆಯು $650 (ಭಾರತದಲ್ಲಿ ಅಂದಾಜು 53,200ರೂ). ಹಾಗೆಯೇ 16GB RAM + 512GB ವೇರಿಯಂಟ್‌ ಬೆಲೆಯು $800 (ಭಾರತದಲ್ಲಿ ಅಂದಾಜು 65,500ರೂ) ಎನ್ನಲಾಗಿದೆ.

Best Mobiles in India

English summary
RedMagic 8 Pro Matte has 12GB of RAM, whereas the Void variant has 16GB of RAM. Know complete details in Kannada.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X