ನುಬಿಯಾ Z30 ಪ್ರೊ ಸ್ಮಾರ್ಟ್‌ಫೋನ್‌ ಬಿಡುಗಡೆ! ವಿಶೇಷತೆ ಏನು?

|

ಟೆಕ್‌ ವಲಯದಲ್ಲಿ ನುಬಿಯಾ ಕಂಪೆನಿ ಬಿನ್ನ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಸರುವಾಸಿಯಾಗಿದೆ. ಈಗಾಗಲೇ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ಹೊಸ ನುಬಿಯಾ Z30 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೇಲಿನ ಮತ್ತು ಕೆಳಭಾಗದಲ್ಲಿ ಸ್ಲಿಮ್ ಬೆಜೆಲ್‌ಗಳೊಂದಿಗೆ ಕರ್ವ್ಡ್‌ ಡಿಸ್‌ಪ್ಲೇ ಹೊಂದಿದೆ.

ನುಬಿಯಾ

ಹೌದು, ನುಬಿಯಾ ಕಂಪೆನಿ ಹೊಸ ನುಬಿಯಾ Z30 ಪ್ರೊ ಸ್ಮಾರ್ಟ್‌ಫೋನ್‌ ಅನ್ನು ಚೀನಾದಲ್ಲಿ ಲಾಂಚ್‌ ಮಾಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದ್ದು, ಹಿಂಭಾಗದಲ್ಲಿ 3ಡಿ ನುಬಿಯಾ ಲೋಗೊವನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಜೊತೆಗೆ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ

ಡಿಸ್‌ಪ್ಲೇ

ನುಬಿಯಾ Z30 ಪ್ರೊ ಸ್ಮಾರ್ಟ್‌ಫೋನ್‌ 1,080x2,400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 100% ಡಿಸಿಐ-ಪಿ 3 ಕಲರ್ ಸ್ಪೇಸ್, ​​ಮತ್ತು ಎಸ್‌ಜಿಎಸ್ ಲೋ ಬ್ಲೂ ಲೈಟ್ ಐ ಕೇರ್ ಪ್ರಮಾಣೀಕರಣದೊಂದಿಗೆ ಅಮೋಲೆಡ್ ಡಿಸ್ಪ್ಲೇ ಹೊಂದಿದೆ.

ಪ್ರೊಸೆಸರ್‌

ಪ್ರೊಸೆಸರ್‌

ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಯುಐ 9.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 512GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ.

ಕ್ಯಾಮೆರಾ

ಕ್ಯಾಮೆರಾ

ನುಬಿಯಾ Z30 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್, ಎರಡನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಟೆಲಿಫೋಟೋ ಸೆನ್ಸಾರ್ ಅನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ

ಬ್ಯಾಟರಿ ಮತ್ತು ಇತರೆ

ನುಬಿಯಾ Z30 ಪ್ರೊ ಸ್ಮಾರ್ಟ್‌ಫೋನ್‌ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 120W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5ಜಿ, ವೈ-ಫೈ 6, ಜಿಪಿಎಸ್ ಮತ್ತು ಚಾರ್ಜಿಂಗ್‌ಗಾಗಿ ಯುಎಸ್‌ಬಿ ಟೈಪ್-ಸಿ ಪೋರ್ಟ್ ಅನ್ನು ಒಳಗೊಂಡಿರುತ್ತದೆ.

ಬೆಲೆ ಮತ್ತು ಲಭ್ಯತೆ

ಬೆಲೆ ಮತ್ತು ಲಭ್ಯತೆ

ನುಬಿಯಾ Z30 ಪ್ರೊ ಸ್ಮಾರ್ಟ್‌ಫೋನ್‌ 8GB RAM + 256GB ಶೇಖರಣಾ ಮಾದರಿಗೆ ಸಿಎನ್‌ವೈ 4,999 (ಸುಮಾರು ರೂ. 56,800)ಬೆಲೆ ಹೊಂದಿದೆ. 12GB RAM+ 256GB ಶೇಖರಣಾ ರೂಪಾಂತರದ ಬೆಲೆ ಸಿಎನ್‌ವೈ 5,399 (ಸರಿಸುಮಾರು ರೂ. 61,300) ಹೊಂದಿದೆ. ಇದು ಇಂಟರ್‌ಸ್ಟೆಲ್ಲಾರ್ ಸಿಲ್ವರ್ ಮತ್ತು ವೈಸ್ಟ್ ಬ್ಲ್ಯಾಕ್ ಬಣ್ಣಗಳಲ್ಲಿ ನೀಡಲಾಗುತ್ತದೆ. ಮೇ 25 ರಿಂದ ಚೀನಾದಲ್ಲಿ ಮಾರಾಟವಾಗಲಿದೆ.

Best Mobiles in India

English summary
Nubia Z30 Pro comes with a display that offers 144Hz refresh rate and has SGS Low Blue Light Eye Care certification.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X