ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ ಲಾಂಚ್! 80W ವೇಗದ ಚಾರ್ಜಿಂಗ್ ವಿಶೇಷ!
ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕರಲ್ಲಿ ನುಬಿಯಾ ಕಂಪೆನಿ ಕೂಡ ಸೇರಿದೆ. ನುಬಿಯಾ ಕಂಪೆನಿ ತನ್ನ ಆಕರ್ಷಕ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದಿದೆ. ಸದ್ಯ ಇದೀಗ ತನ್ನ ಹೊಸ ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದ್ದು, 144Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ.

ಹೌದು, ನುಬಿಯಾ ಕಂಪೆನಿ ಹೊಸ ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX 787 ಸೆನ್ಸಾರ್ ಅನ್ನು ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, USB ಟೈಪ್-ಸಿ ಮೂಲಕ 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ವಿಶೇಷತೆ ಏನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಡಿಸ್‌ಪ್ಲೇ ವಿಶೇಷ
ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದೆ. ಜೊತೆಗೆ 395ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ನಲ್ಲಿ ಕಂಪನಿಯ MyOS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಬಲವನ್ನು ಒಳಗೊಂಡಿದೆ.

ಕ್ಯಾಮೆರಾ
ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ (OIS) ಜೊತೆಗೆ ಸೋನಿ IMX 787 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಕ್ಯಾಮೆರಾವನ್ನು ಒಐಎಸ್‌ನೊಂದಿಗೆ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಹೊಂದಿದೆ. ಇದು USB ಟೈಪ್-ಸಿ ಮೂಲಕ 80W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ 5.2, ಮತ್ತು NFC ಸೇರಿವೆ.

ಬೆಲೆ ಮತ್ತು ಲಭ್ಯತೆ
ನುಬಿಯಾ Z40 ಪ್ರೊ ಸ್ಮಾರ್ಟ್‌ಫೋನ್ ಚೀನಾದಲ್ಲಿ 8GB + 128GB RAM ಸ್ಟೋರೇಜ್ ಮಾದರಿಗೆ CNY 3,399 (ಅಂದಾಜು 40,600ರೂ.)ಗಳಿಗೆ ನಿಗದಿಪಡಿಸಲಾಗಿದೆ ಎಂದು ಕಂಪನಿ ತಿಳಿಸಿದೆ. ಇದಲ್ಲದೆ ನುಬಿಯಾ ಕಂಪನಿಯು ನುಬಿಯಾ Z40 ಪ್ರೊ ನ ಮ್ಯಾಗ್ನೆಟಿಕ್ ಚಾರ್ಜಿಂಗ್ ಸಕ್ರಿಯಗೊಳಿಸಿದ ಆವೃತ್ತಿಯನ್ನು ಸಹ ಘೋಷಿಸಿದೆ. ಅಲ್ಲದೆ ಅನಿಮೆ-ಥೀಮ್ಡ್ ಔಟ್‌ಕಾಸ್ಟ್ ಲಿಮಿಟೆಡ್ ಆವೃತ್ತಿ ಮಾದರಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಈ ಫೋನ್ ಅನ್ನು ಮಾರ್ಚ್ 2 ರಿಂದ ಗ್ರಾಹಕರು ಫ್ರೀ-ಬುಕ್ಕಿಂಗ್ ಮಾಡಬಹುದು. ಆದರೆ ಈ ಸ್ಮಾರ್ಟ್‌ಫೋನ್ ಭಾರತದಲ್ಲಿ ಯಾವಾಗ ಲಭ್ಯವಾಗಲಿದೆ ಅನ್ನೊದು ಇನ್ನು ಬಹಿರಂಗವಾಗಿಲ್ಲ.


Click it and Unblock the Notifications








