ಎಂಟ್ರಿಯಲ್ಲೇ ಅಬ್ಬರಿಸುತ್ತಿದೆ ನುಬಿಯಾ Z50 ಅಲ್ಟ್ರಾ ಸ್ಮಾರ್ಟ್‌ಫೋನ್! ಏನಿದೆ ಫೀಚರ್ಸ್?
ನುಬಿಯಾ ಕಂಪೆನಿ ತನ್ನ ಗೆಮಿಂಗ್ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿ ಪಡೆದುಕೊಂಡಿದೆ. ವಿಭಿನ್ನ ಶೈಲಿಯ ಡಿಸೈನ್ ಹಾಗೂ ಅತ್ಯುತ್ತಮ ಗೇಮಿಂಗ್ ಅನುಭವ ನೀಡುವ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಸದ್ಯ ಇದೀಗ ತನ್ನ ಹೊಸ ನುಬಿಯಾ Z50 ಅಲ್ಟ್ರಾ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ.
ಹೌದು, ನುಬಿಯಾ ಕಂಪೆನಿ ಹೊಸ ನುಬಿಯಾ Z50 ಅಲ್ಟ್ರಾ ಸ್ಮಾರ್ಟ್‌ಫೋನ್ ಲಾಂಚ್ ಮಾಡಿದೆ. ಇದು ಸ್ನಾಪ್‌ಡ್ರಾಗನ್ 8 Gen 2 ಚಿಪ್‌ಸೆಟ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದ್ದು, 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಏನೆಲ್ಲಾ ಫೀಚರ್ಸ್ ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನುಬಿಯಾ Z50 ಅಲ್ಟ್ರಾ ಡಿಸ್‌ಪ್ಲೇ ವಿಶೇಷತೆ?
ನುಬಿಯಾ Z50 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ OLED ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,116x2,480 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಡಿಸ್‌ಪ್ಲೇ 120Hz ನ ರಿಫ್ರೆಶ್ ರೇಟ್, 960Hz ಟಚ್ ಸ್ಯಾಪ್ಲಿಂಗ್ ರೇಟ್ ಹಾಗೂ 1440Hz PWM ಡಿಮ್ಮಿಂಗ್ ಅನ್ನು ಪಡೆದಿದೆ.
ನುಬಿಯಾ Z50 ಅಲ್ಟ್ರಾ ಪ್ರೊಸೆಸರ್ ಯಾವುದು?
ನುಬಿಯಾ Z50 ಅಲ್ಟ್ರಾ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 2 ಚಿಪ್‌ಸೆಟ್ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್ 13 ಆಧಾರಿತ MyOS 13 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 16GB RAM ಮತ್ತು 1TB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.

ನುಬಿಯಾ Z50 ಅಲ್ಟ್ರಾ ಕ್ಯಾಮೆರಾ ಸೆಟ್‌ಅಪ್ ಏನಿದೆ?
ನುಬಿಯಾ Z50 ಅಲ್ಟ್ರಾ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೋನಿ IMX787 ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 64-ಮೆಗಾಪಿಕ್ಸೆಲ್ ಪೆರಿಸ್ಕೋಪ್ ಝೂಮ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಕ್ಯಾಮೆರಾವನ್ನು ಪಡೆದುಕೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಅಂಡರ್-ಡಿಸ್‌ಪ್ಲೇ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಅಲ್ಲದೆ ರಿಂಗ್ ಎಲ್ಇಡಿ ಫ್ಲ್ಯಾಷ್ ಮತ್ತು ಮಲ್ಟಿ-ಚಾನೆಲ್ ಸ್ಪೆಕ್ಟ್ರಲ್ ಸೆನ್ಸಾರ್‌ಗಳನ್ನು ಕೂಡ ಅಳವಡಿಸಲಾಗಿದೆ.
ನುಬಿಯಾ Z50 ಅಲ್ಟ್ರಾ ಬ್ಯಾಟರಿ ಬ್ಯಾಕ್‌ಅಪ್?
ನುಬಿಯಾ Z50 ಅಲ್ಟ್ರಾ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi 802.11ax, Bluetooth 5.3, NFC, IR ಬ್ಲಾಸ್ಟರ್, X-ಆಕ್ಸಿಸ್ ಲೀನಿಯರ್ ಮೋಟಾರ್, ಮತ್ತು USB ಟೈಪ್-C ಪೋರ್ಟ್ ಅನ್ನು ಬೆಂಬಲಿಸಲಿದೆ. ಇದರೊಂದಿಗೆ 4212mm2 ದೊಡ್ಡ ಆವಿ ಚೇಂಬರ್ ಲಿಕ್ವಿಡ್ ಕೂಲಿಂಗ್ ಯೂನಿಟ್‌ನೊಂದಿಗೆ ಬರಲಿದೆ.

ನುಬಿಯಾ Z50 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ನುಬಿಯಾ Z50 ಅಲ್ಟ್ರಾ ಸ್ಮಾರ್ಟ್‌ಫೋನ್ 8GB + 256 GB ರೂಪಾಂತರದ ಆಯ್ಕೆಗೆ CNY 3,999 (ಅಂದಾಜು 47,200ರೂ)ಬೆಲೆ ಹೊಂದಿದೆ. ಇನ್ನು 12GB + 256GB ರೂಪಾಂತರದ ಆಯ್ಕೆಗೆ CNY 4,299 (ಸುಮಾರು 50,600ರೂ) ಬೆಲೆಯಲ್ಲಿ ಲಭ್ಯವಾಗಲಿದೆ. ಇದರ ಹೈ-ಎಂಡ್ 16GB + 1TB ಮಾದರಿಗೆ CNY 5,999 (ಅಂದಾಜು 70,800ರೂ) ನಿಗದಿ ಪಡಿಸಲಾಗಿದೆ. ಈ ಸ್ಮಾರ್ಟ್‌ಫೋನ್ ಕಪ್ಪು ಮತ್ತು ಬೂದು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದೆ.


Click it and Unblock the Notifications








