Just In
- 12 hrs ago
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- 12 hrs ago
ತಿಮ್ಮಪ್ಪನ ಭಕ್ತರಿಗಾಗಿ ಹೊಸ ಆ್ಯಪ್ ಪರಿಚಯಿಸಿದ ಟಿಟಿಡಿ! ಏನೆಲ್ಲಾ ಸೇವೆಗಳು ಲಭ್ಯ!
- 13 hrs ago
ನೀವು ದಿನವೂ ಬಳಸುವ ಗೂಗಲ್ನ ಈ ಆಪ್ಗಳಲ್ಲಿ ಎಐ ಹೇಗೆ ಕೆಲಸ ಮಾಡಲಿದೆ!?; ಇಲ್ಲಿದೆ ವಿವರ
- 14 hrs ago
ಗೂಗಲ್ ಕ್ರೋಮ್ ಬಳಸುವವರಿಗೆ ಭಾರತ ಸರ್ಕಾರದಿಂದ ಖಡಕ್ ಎಚ್ಚರಿಕೆ! ಯಾಕೆ ? ಸಮಸ್ಯೆ ಏನು?
Don't Miss
- Sports
Ranji Trophy 2022-23: ಹೊರಬಿದ್ದ ಮುಂಬೈ; ಕರ್ನಾಟಕ ಸೇರಿ ಕ್ವಾರ್ಟರ್ ಫೈನಲ್ ತಲುಪಿದ ಅಗ್ರ 8 ತಂಡಗಳು
- News
ಫಾರೆನ್ಸಿಕ್ ಕ್ಯಾಂಪಸ್ ಶಂಕುಸ್ಥಾಪನೆಗೆ ಆಗಮಿಸಲಿರುವ ಅಮಿತ್ ಶಾ: ಧಾರವಾಡದಲ್ಲಿ ಭಾರಿ ಬಿಗಿ ಭದ್ರತೆ
- Movies
ವಿಷ್ಣು ಸ್ಮಾರಕ ವಿಚಾರಕ್ಕೆ ಆಕ್ರೋಶ: ಫಿಲ್ಮ್ ಚೇಂಬರ್ ವಿರುದ್ಧ ಸಿಡಿದೆದ್ದ ವೀರಕಪುತ್ರ ಶ್ರೀನಿವಾಸ್
- Lifestyle
2023ರಲ್ಲಿ ರಾಜಯೋಗದಿಂದಾಗಿ ಈ 4 ರಾಶಿಯವರಿಗೆ ಮುಟ್ಟಿದ್ದೆಲ್ಲಾ ಚಿನ್ನವಾಗಲಿದೆ
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ನುಬಿಯಾ Z50 ಸ್ಮಾರ್ಟ್‌ಫೋನ್ ಲಾಂಚ್!..80W ವೇಗದ ಚಾರ್ಜಿಂಗ್ ವಿಶೇಷ!
ಗೇಮಿಂಗ್ ಪ್ರಿಯರ ನೆಚ್ಚಿನ ಸ್ಮಾರ್ಟ್‌ಫೋನ್ ಬ್ರ್ಯಾಂಡ್ ನುಬಿಯಾ ಕಂಪೆನಿ ಹೊಸ ಫೋನ್ ಲಾಂಚ್ ಮಾಡಿದೆ. ನುಬಿಯಾ ಕಂಪೆನಿ ತನ್ನ ಹೊಸ ನುಬಿಯಾ Z50 ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ ಈ ಫೋನ್ 144Hz ರಿಫ್ರೆಶ್ ರೇಟ್ ಬೆಂಬಲಿಸುವ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ.

ಹೌದು, ನುಬಿಯಾ ಕಂಂಪೆನಿ ಹೊಸದಾಗಿ ನುಬಿಯಾ Z50 ಸ್ಮಾರ್ಟ್‌ಫೋನ್ ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್ ಗೇಮಿಂಗ್ ಪ್ರಿಯರಿಗೆ ಸೂಕ್ತವಾದ ವಿನ್ಯಾಸವನ್ನು ಪಡೆದುಕೊಂಡಿದೆ. ಇದು 16GB RAM ಮತ್ತು 1TB ಇನ್‌ಬಿಲ್ಟ್ ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನುಳಿದಂತೆ ಈ ಹೊಸ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ನುಬಿಯಾ Z50 ಸ್ಮಾರ್ಟ್‌ಫೋನ್ 6.67 ಇಂಚಿನ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1080x2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್ ಮತ್ತು 1,000 ಗರಿಷ್ಠ ನಿಟ್ಸ್ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಇನ್ನು ಡಿಸ್‌ಪ್ಲೇ ವೀಡಿಯೊ ಕಾಲ್ ಹಾಗೂ ವೀಡಿಯೊ ವೀಕ್ಷಣೆಗೆ ಯೋಗ್ಯವಾದ ಮಾದರಿಯನ್ನು ಹೊಂದಿದೆ.

ಪ್ರೊಸೆಸರ್ ಯಾವುದು?
ನುಬಿಯಾ Z50 ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಪಡೆದಿದೆ. ಇದು ಆಂಡ್ರಾಯ್ಡ್ 13 ಆಧಾರಿತ MyOS 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 16GB RAM ಮತ್ತು 1TB ಇನ್‌ಬಿಲ್ಟ್ ಸ್ಟೋರೇಜ್ ಆಯ್ಕೆಯಲ್ಲಿ ಬರಲಿದೆ. ಈ ಸ್ಮಾರ್ಟ್‌ಫೋನ್ ಮೆಮೊರಿ ಕಾರ್ಡ್ ಬೆಂಬಲಿಸಲಿದೆಯಾ ಎಂಬುದರ ವಿವರ ಬಹಿರಂಗವಾಗಿಲ್ಲ.

ಕ್ಯಾಮೆರಾ ಸೆಟ್‌ಅಪ್ ಏನಿದೆ?
ನುಬಿಯಾ Z50 ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅಲ್ಟ್ರಾ-ವೈಡ್ ಲೆನ್ಸ್ ಅನ್ನು ಬೆಂಬಲಿಸುತ್ತದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಬ್ಯಾಟರಿ ಮತ್ತು ಇತರೆ
ನುಬಿಯಾ Z50 ಸ್ಮಾರ್ಟ್‌ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಜಿಪಿಎಸ್, ಎನ್‌ಎಫ್‌ಸಿ ಮತ್ತು ಯುಎಸ್‌ಬಿ ಟೈಪ್-ಸಿ ಪೋರ್ಟ್ ಸೇರಿವೆ. ಇದಲ್ಲದೆ ಆಕ್ಸಿಲೆರೋಮೀಟರ್, ಲೈಟ್ ಸೆನ್ಸಾರ್, ಪ್ರಾಕ್ಸಿಮಿಟಿ ಸೆನ್ಸಾರ್ ಮತ್ತು ಗೈರೊಸ್ಕೋಪ್ ಅನ್ನು ಸಹ ಹೊಂದಿದೆ.

ಬೆಲೆ ಮತ್ತು ಲಭ್ಯತೆ
ನುಬಿಯಾ Z50 ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆಯಾಗಿದೆ. ಇದರ ಬೆಲೆ 8GB RAM + 128GB ಇಂಟರ್‌ನಲ್ ಸ್ಟೋರೇಜ್ ರೂಪಾಂತರಕ್ಕೆ CNY 2,999 (ಸುಮಾರು 35,500ರೂ), 8GB + 256GB ರೂಪಾಂತರದ ಆಯ್ಕೆಗೆ CNY 3,399 (ಅಂದಾಜು 40,000ರೂ) ಹಾಗೂ 12GB + 512GB ಆವೃತ್ತಿಗೆ CNY 3,999 (ಸುಮಾರು 47,000ರೂ) ಬೆಲೆ ಪಡೆದುಕೊಂಡಿದೆ.
-
54,999
-
36,599
-
39,999
-
38,990
-
1,29,900
-
79,990
-
38,900
-
18,999
-
19,300
-
69,999
-
79,900
-
1,09,999
-
1,19,900
-
21,999
-
1,29,900
-
12,999
-
44,999
-
15,999
-
7,332
-
17,091
-
29,999
-
7,999
-
8,999
-
45,835
-
77,935
-
48,030
-
29,616
-
57,999
-
12,670
-
79,470