ಸೈಲೆಂಟ್ ಆಗಿ ಎಂಟ್ರಿ ಕೊಟ್ಟ ನುಬಿಯಾ Z50S ಸ್ಮಾರ್ಟ್‌ಫೋನ್! 80W ವೇಗದ ಚಾರ್ಜಿಂಗ್ ವಿಶೇಷ!
ಯುವ ಜನರ ಹಾಟ್‌ಫೇವರಿಟ್ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳಲ್ಲಿ ನುಬಿಯಾ ಕಂಪೆನಿ ಕೂಡ ಸೇರಿದೆ. ನುಬಿಯಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಟೆಕ್ ವಲಯದಲ್ಲಿ ಸಾಕಷ್ಟು ಸೌಂಡ್ ಮಾಡುತ್ತಾ ಬಂದಿವೆ. ಆದರೆ ಇದೀಗ ನುಬಿಯಾ ಕಂಪೆನಿ ತನ್ನ Z50 ಸರಣಿಗೆ ಸೈಲೆಂಟ್ ಆಗಿ ಮತ್ತೊಂದು ಸ್ಮಾರ್ಟ್‌ಫೋನ್ ನುಬಿಯಾ Z50S ಅನ್ನು ಬಿಡುಗಡೆ ಮಾಡಿದೆ.
ಹೌದು, ನುಬಿಯಾ Z50S ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗಾದ್ರೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನುಬಿಯಾ Z50S ಸ್ಮಾರ್ಟ್‌ಫೋನ್ ಡಿಸ್‌ಪ್ಲೇ ರಚನೆ ಹೇಗಿದೆ?
ನುಬಿಯಾ Z50S ಸ್ಮಾರ್ಟ್‌ಫೋನ್ 6.67 ಇಂಚಿನ ಕರ್ವ್ಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 2,400 × 1,080 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದಿದೆ. ಇದು ವೇಗದ 144 Hz ರಿಫ್ರೆಶ್ ರೇಟ್ ಬೆಂಬಲವನ್ನು ಒಳಗೊಂಡಿದೆ. ಜೊತೆಗೆ ಎಲ್ಲಾ ಪರಿಸ್ಥಿತಿಗಳಲ್ಲಿ ಸ್ಪಷ್ಟ ಗೋಚರತೆಗಾಗಿ ಪರದೆಯು 1000 ನಿಟ್‌ಗಳ ಗರಿಷ್ಠ ಬ್ರೈಟ್‌ನೆಸ್ ಅನ್ನು ಹೊಂದಿದೆ.
ನುಬಿಯಾ Z50S ಸ್ಮಾರ್ಟ್‌ಫೋನ್ ಪ್ರೊಸೆಸರ್ ಯಾವುದು?
ನುಬಿಯಾ Z50S ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 2 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 13 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದು 512GB UFS 4.0 ಇಂಟರ್ ಸ್ಟೋರೇಜ್ ನಡುವೆ ಆಯ್ಕೆಯನ್ನು ನೀಡಲಿದೆ ಎಂದು ಹೇಳಲಾಗಿದೆ.
ನುಬಿಯಾ Z50S ಸ್ಮಾರ್ಟ್‌ಫೋನ್ ಕ್ಯಾಮೆರಾ ಸೆಟ್‌ಅಪ್ ಏನಿದೆ?
ನುಬಿಯಾ Z50S ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ 35mm ಸೋನಿ IMX787 ಸೆನ್ಸಾರ್ ಅನ್ನು ಒಳಗೊಂಡಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ AF ಅಲ್ಟ್ರಾ-ವೈಡ್-ಆಂಗಲ್ ಮ್ಯಾಕ್ರೋ ಟು-ಇನ್-ಒನ್ ಲೆನ್ಸ್ ಮತ್ತು ಮಲ್ಟಿ-ಚಾನಲ್ ಸ್ಪೆಕ್ಟ್ರಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ.
ನುಬಿಯಾ Z50S ಸ್ಮಾರ್ಟ್‌ಫೋನ್ ಬ್ಯಾಟರಿ ಮತ್ತು ಇತರೆ
ನುಬಿಯಾ Z50S ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದ್ದು, ಸುಮಾರು 30 ನಿಮಿಷಗಳಲ್ಲಿ 0 ರಿಂದ 100% ವರೆಗೆ ಟಾಪ್ ಅಪ್ ಮಾಡಬಹುದು. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, WiFi 6E, NFC, ಬ್ಲೂಟೂತ್ 5.3 ಹಾಗೂ 3.5 ಎಂಎಂ ಆಡಿಯೊ ಜ್ಯಾಕ್ ಅನ್ನು ಬೆಂಬಲಿಸುತ್ತದೆ.
ನುಬಿಯಾ Z50S ಸ್ಮಾರ್ಟ್‌ಫೋನ್ ಬೆಲೆ ಮತ್ತು ಲಭ್ಯತೆ
ನುಬಿಯಾ Z50S ಸ್ಮಾರ್ಟ್‌ಫೋನ್ ಪ್ರಸ್ತುತ ಚೀನಾದಲ್ಲಿ ಮಾತ್ರ ಬಿಡುಗಡೆ ಆಗಿದೆ. ಆದರಿಂದ ಈ ಸ್ಮಾರ್ಟ್‌ಫೋನ್ ಚೀನಾದಲ್ಲಿ 12GB RAM ಮತ್ತು 256GB ಸ್ಟೋರೇಜ್ ಆಯ್ಕೆಗೆ 2,199 ಯುವಾನ್ (ಅಂದಾಜು 25,265ರೂ) ಬೆಲೆಯಲ್ಲಿ ಲಭ್ಯವಾಗಲಿದೆ. ಇದು ನಯವಾದ ಕಪ್ಪು ಬಣ್ಣದ ಆಯ್ಕೆಯಲ್ಲಿ ಲಭ್ಯವಿರುತ್ತದೆ. ಈ ಸ್ಮಾರ್ಟ್‌ಫೋನ್ ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಲಿದೆಯಾ ಅನ್ನೊದರ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.


Click it and Unblock the Notifications








