Nubia:ನುಬಿಯಾ Z60 ಅಲ್ಟ್ರಾ ಸ್ಮಾರ್ಟ್‌ಫೋನ್ ಅನಾವರಣ!..6,000mAh ಸಾಮರ್ಥ್ಯದ ಬ್ಯಾಟರಿ!
ನುಬಿಯಾ ಕಂಪೆನಿಯ ಸ್ಮಾರ್ಟ್‌ಫೋನ್‌ಗಳಿಗೆ ಟೆಕ್ ವಲಯದಲ್ಲಿ ಭಾರಿ ಬೇಡಿಕೆಯಿದೆ. ಗೇಮಿಂಗ್ ಸ್ಮಾರ್ಟ್‌ಫೋನ್ ಪ್ರಿಯರ ನೆಚ್ಚಿನ ಬ್ರ್ಯಾಂಡ್ ಆಗಿ ಗುರುತಿಸಿಕೊಂಡಿರುವ ನುಬಿಯಾ ಇದೀಗ ಹೊಸ ಫೋನ್ ಲಾಂಚ್ ಮಾಡಿದೆ. ಇದನ್ನು ನುಬಿಯಾ Z60 ಅಲ್ಟ್ರಾ ಸ್ಮಾರ್ಟ್‌ಫೋನ್ ಎಂದು ಹೆಸರಿಸಲಾಗಿದೆ. ಇದು ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಹೌದು, ನುಬಿಯಾ Z60 ಅಲ್ಟ್ರಾ (Nubia Z60 Ultra)ಸ್ಮಾರ್ಟ್‌ಫೋನ್ ಬಿಡುಗಡೆ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ 6.8 ಇಂಚಿನ OLED ಡಿಸ್‌ಪ್ಲೇಯನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇನ್ನುಳಿದಂತೆ ಈ ಸ್ಮಾರ್ಟ್‌ಫೋನ್ ಯಾವೆಲ್ಲಾ ಫೀಚರ್ಸ್ ಪಡೆದುಕೊಂಡಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನುಬಿಯಾ Z60 ಅಲ್ಟ್ರಾ ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ
ನುಬಿಯಾ Z60 ಅಲ್ಟ್ರಾ ಸ್ಮಾರ್ಟ್‌ಫೋನ್ 6.8 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 1,116x2,480 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಜೊತೆಗೆ 120Hz ರಿಫ್ರೆಶ್ ರೇಟ್ ಬೆಂಬಲದೊಂದಿಗೆ ಬರಲಿದ್ದು, 400ppi ಪಿಕ್ಸೆಲ್ ಸಾಂದ್ರತೆಯನ್ನು ಹೊಂದಿದೆ. ಇದಲ್ಲದೆ ಡಿಸ್‌ಪ್ಲೇ 100 ಶೇಕಡಾ DCI P3 ಬಣ್ಣದ ಹರವನ್ನು ಹೊಂಡಿದೆ.
ನುಬಿಯಾ Z60 ಅಲ್ಟ್ರಾ ಪ್ರೊಸೆಸರ್ ಯಾವುದು?
ನುಬಿಯಾ Z60 ಅಲ್ಟ್ರಾ ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 8 Gen 3 SoC ಪ್ರೊಸೆಸರ್ ವೇಗವನ್ನು ಹೊಂದಿದೆ. ಇದು ಆಂಡ್ರಾಯ್ಡ್ 14-ಆಧಾರಿತ MyOS14 ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 12GB RAM ಮತ್ತು 512GB ಹಾಗೂ 16GB RAM ಮತ್ತು 1TB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಗಳಲ್ಲಿ ಬರಲಿದೆ. ಇದು ಮೆಮೊರಿ ಕಾರ್ಡ್ ಬೆಂಬಲಿಸುವುದರ ಬಗ್ಗೆ ಯಾವುದೇ ಮಾಹಿತಿಯಿಲ್ಲ.

ನುಬಿಯಾ Z60 ಅಲ್ಟ್ರಾ ಕ್ಯಾಮೆರಾ ಸೆಟಪ್
ನುಬಿಯಾ Z60 ಅಲ್ಟ್ರಾ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ 35mm Sony IMX800 ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ 18mm ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 64 ಮೆಗಾಪಿಕ್ಸೆಲ್ 85mm ಟೆಲಿಫೋಟೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 12 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಅಂಡರ್ ಡಿಸ್‌ಪ್ಲೇ ಸೆಲ್ಫಿ ಕ್ಯಾಮರಾವನ್ನು ಒಳಗೊಂಡಿದೆ.
ನುಬಿಯಾ Z60 ಅಲ್ಟ್ರಾ ಬ್ಯಾಟರಿ ಮತ್ತು ಲಭ್ಯತೆ
ನುಬಿಯಾ Z60 ಅಲ್ಟ್ರಾ ಸ್ಮಾರ್ಟ್‌ಫೋನ್ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G LTE, Wi-Fi 802.11b/g/n/ac/ax, ಬ್ಲೂಟೂತ್ 5.4, ಡ್ಯುಯಲ್ GPS, GLONASS, BDS, GALILEO, ಮತ್ತು QZSS ಬೆಂಬಲಿಸಲಿದೆ. ಇದು DTS HD ಧ್ವನಿಯೊಂದಿಗೆ ಸ್ಪೀಕರ್‌ಗಳನ್ನು ಸಹ ಹೊಂದಿದೆ. ಇದಲ್ಲದೆ ಆಂಬಿಯೆಂಟ್ ಲೈಟ್ ಸೆನ್ಸಾರ್, ಇ-ದಿಕ್ಸೂಚಿ, ಗೈರೊಸ್ಕೋಪ್, ಅತಿಗೆಂಪು ರಿಮೋಟ್ ಕಂಟ್ರೋಲ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್ ಹಾಗೂ ಫೋನ್ ದೃಢೀಕರಣಕ್ಕಾಗಿ ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಅನ್ನು ಸಹ ಒಳಗೊಂಡಿದೆ.

ನುಬಿಯಾ Z60 ಅಲ್ಟ್ರಾ ಬೆಲೆ ಮತ್ತು ಲಭ್ಯತೆ
ನುಬಿಯಾ Z60 ಅಲ್ಟ್ರಾ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 8GB RAM + 256GB ಸ್ಟೋರೇಜ್ ಮಾಡೆಲ್ ಆಯ್ಕೆಗೆ $599 (ಸುಮಾರು 49,000ರೂ)ಬೆಲೆಯನ್ನು ಹೊಂದಿದೆ. ಇದರ 12GB RAM + 256GB ಸ್ಟೋರೇಜ್ ರೂಪಾಂತರದ ಬೆಲೆ $649 (ಸುಮಾರು 54,000ರೂ)ಆಗಿದೆ. ಇನ್ನು 12GB RAM + 512GB ಸ್ಟೋರೇಜ್ ಸಾಮರ್ಥ್ಯದ ಅಯ್ಕೆಗೆ $779 (ಸುಮಾರು 65,000ರೂ)ಬೆಲೆಯನ್ನು ಹೊಂದಿದೆ. ಇದನ್ನು ಕಪ್ಪು ಮತ್ತು ಬೆಳ್ಳಿ ಬಣ್ಣದ ಆಯ್ಕೆಗಳಲ್ಲಿ ಬರಲಿದೆ.


Click it and Unblock the Notifications








