Home
ಸುದ್ದಿಜಾಲ

ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಈ ಆಫರ್‌ ಕಳ್ಕೋಬೇಡಿ!

ಮೊಬೈಲ್‌ ಮಾರುಕಟ್ಟೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಒನ್‌ಪ್ಲಸ್‌ ಬ್ರ್ಯಾಂಡ್‌ನ ಹಲವು ಸ್ಮಾರ್ಟ್‌ಫೋನ್‌ಗಳು ಗ್ರಾಹಕರ ಗಮನ ಸೆಳೆದಿವೆ. ಆ ಪೈಕಿ ಒನ್‌ಪ್ಲಸ್‌ 10 ಪ್ರೊ 5G (OnePlus 10 Pro 5G) ಸ್ಮಾರ್ಟ್‌ಫೋನ್‌ ಸಹ ಒಂದಾಗಿದ್ದು, ಈ ಫೋನ್‌ ಸಹ ಮಾರುಕಟ್ಟೆಯಲ್ಲಿ ಡಿಮ್ಯಾಂಡ್‌ ಹೊಂದಿದೆ. ಈ ಫೋನ್‌ ಈಗ ಭರ್ಜರಿ ರಿಯಾಯಿತಿಯಲ್ಲಿ ಲಭ್ಯ.

ಹೌದು, ಜನಪ್ರಿಯ ಅಮೆಜಾನ್‌ ಪ್ಲಾಟ್‌ಫಾರ್ಮ್ ಒನ್‌ಪ್ಲಸ್‌ 10 ಪ್ರೊ 5G ಸ್ಮಾರ್ಟ್‌ಫೋನ್‌ಗೆ 16% ರಿಯಾಯಿತಿ ನೀಡಿದೆ. 8GB RAM + 128GB ವೇರಿಯಂಟ್‌ ಬೆಲೆಯು 66,999ರೂ. ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಡಿಸ್ಕೌಂಟ್‌ನಲ್ಲಿ 55,999ರೂ. ಗಳಿಗೆ ಖರೀದಿಗೆ ಲಭ್ಯವಾಗಲಿದೆ. ಇದರೊಂದಿಗೆ ಬ್ಯಾಂಕ್‌ ಆಫರ್‌ ಹಾಗೂ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯ ಸಹ ದೊರೆಯುತ್ತದೆ.

ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಈ ಆಫರ್‌ ಕಳ್ಕೋಬೇಡಿ!

ಇನ್ನು ಒನ್‌ಪ್ಲಸ್‌ 10 ಪ್ರೊ 5G ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿದೆ. 8GB RAM + 128 GB ಮತ್ತು 12GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಹಾಗಾದರೆ ಒನ್‌ಪ್ಲಸ್‌ 10 ಪ್ರೊ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಈ ಆಫರ್‌ ಕಳ್ಕೋಬೇಡಿ!

ಡಿಸ್‌ಪ್ಲೇ ರಚನೆ ಮತ್ತು ವಿನ್ಯಾಸ : ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ OLED ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್‌ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್‌ ನೀಡಲಿದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದಿದೆ.

ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಈ ಆಫರ್‌ ಕಳ್ಕೋಬೇಡಿ!

ಪ್ರೊಸೆಸರ್‌ ಯಾವುದು : ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್‌ 8 ಜೆನ್‌ 1 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಒನ್‌ಪ್ಲಸ್‌ ಫೋನ್‌ ಖರೀದಿಸುವ ಗ್ರಾಹಕರಿಗೆ ಸಿಹಿಸುದ್ದಿ!..ಈ ಆಫರ್‌ ಕಳ್ಕೋಬೇಡಿ!

ಕ್ಯಾಮೆರಾ ಸೆನ್ಸಾರ್ ಏನು : ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX789 ಸೆನ್ಸಾರ್‌, ಎರಡನೇ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಬ್ಯಾಟರಿ ಮತ್ತು ಇತರೆ ಸೌಲಭ್ಯ : ಒನ್‌ಪ್ಲಸ್‌ 10 ಪ್ರೊ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

Best Mobiles in India

English summary
OnePlus 10 Pro 5G available at huge Discount price on Amazon. check offer price, specifications and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+