Home
ಸುದ್ದಿಜಾಲ

ಈ ಒನ್‌ಪ್ಲಸ್‌ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಸಖತ್ ಉಳಿತಾಯ!

ಭಾರತೀಯ ಮೊಬೈಲ್‌ ಮಾರುಕಟ್ಟೆಯಲ್ಲಿ ಜನಪ್ರಿಯ ಸ್ಥಾನದಲ್ಲಿ ಕಾಣಿಸಿಕೊಂಡಿರುವ ಒನ್‌ಪ್ಲಸ್‌ ಸಂಸ್ಥೆಯು ಕೆಲವು ಮೊಬೈಲ್‌ಗಳ ಮೂಲಕ ಭಾರೀ ಸದ್ದು ಮಾಡಿದೆ. ಅಂತಹ ಫೋನ್‌ಗಳ ಪೈಕಿ ಸಂಸ್ಥೆಯ ಒನ್‌ಪ್ಲಸ್‌ 10 ಪ್ರೊ 5G (OnePlus 10 Pro 5G) ಮೊಬೈಲ್‌ ಕೂಡಾ ಸೇರ್ಪಡೆ ಆಗಿದೆ. ಈ ಮೊಬೈಲ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ನಲ್ಲಿ ಭರ್ಜರಿ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ.

ಹೌದು, ದೈತ್ಯ ಇ ಕಾಮರ್ಸ್‌ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಒನ್‌ಪ್ಲಸ್‌ 10 ಪ್ರೊ 5G ಮೊಬೈಲ್‌ ಶೇ. 28% ರಷ್ಟು ನೇರ ರಿಯಾಯಿತಿ ಪಡೆದುಕೊಂಡಿದೆ. ಈ ಮೊಬೈಲ್‌ನ 8GB RAM + 128GB ವೇರಿಯಂಟ್‌ ದರವು 47,689ರೂ. ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಇದರ ಜೊತೆಗೆ ಕೆಲವು ಬ್ಯಾಂಕ್‌ ಆಫರ್‌ ಹಾಗೂ ನೋ ಕಾಸ್ಟ್‌ ಇಎಮ್‌ಐ ಸೌಲಭ್ಯ ಸಹ ಗ್ರಾಹಕರಿಗೆ ಲಭ್ಯ ಆಗಲಿದೆ.

ಈ ಒನ್‌ಪ್ಲಸ್‌ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಸಖತ್ ಉಳಿತಾಯ!

ಒನ್‌ಪ್ಲಸ್‌ ಕಂಪನಿಯ ಈ 5G ಮೊಬೈಲ್‌ ಹಿಂಭಾಗದಲ್ಲಿ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಪ್ರಾಥಮಿಕ ಕ್ಯಾಮೆರಾ 48 ಮೆಗಾ ಪಿಕ್ಸಲ್‌ ಸೆನ್ಸಾರ್‌ನಲ್ಲಿ ಇದೆ. ಇದು 8GB RAM + 128 GB ಹಾಗೂ 12GB RAM + 256 GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳನ್ನು ಪಡೆದಿದೆ. ಇನ್ನುಳಿದಂತೆ ಒನ್‌ಪ್ಲಸ್‌ 10 ಪ್ರೊ 5G ಸ್ಮಾರ್ಟ್‌ಫೋನಿನ ಇತರೆ ಫೀಚರ್ಸ್‌ಗಳ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಈ ಒನ್‌ಪ್ಲಸ್‌ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಸಖತ್ ಉಳಿತಾಯ!

ಒನ್‌ಪ್ಲಸ್‌ 10 ಪ್ರೊ 5G - ಫೀಚರ್ಸ್‌

ಒನ್‌ಪ್ಲಸ್‌ ಸಂಸ್ಥೆಯ ಈ ಮೊಬೈಲ್‌ 1,440 x 3,216 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.7 ಇಂಚಿನ OLED ಅಮೋಲೆಡ್‌ ಡಿಸ್‌ಪ್ಲೇ ಅನ್ನು ಹೊಂದಿದೆ. ಇದು ಎರಡನೇ ತಲೆಮಾರಿನ ಲೋ-ಟೆಂಪ್‌ರೇಚರ್‌ ಪಾಲಿಕ್ರಿಸ್ಟಲಿನ್ ಆಕ್ಸೈಡ್ (LTPO) ತಂತ್ರಜ್ಞಾನವನ್ನು ಆಧರಿಸಿದೆ. ಇದು 1Hz ಮತ್ತು 120Hz ನಡುವೆ ಡೈನಾಮಿಕ್ ರಿಫ್ರೆಶ್ ರೇಟ್‌ ನೀಡಲಿದೆ. ಇದಲ್ಲದೆ, ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ಪ್ರೊಟೆಕ್ಷನ್‌ ಪಡೆದಿದೆ.

ಒನ್‌ಪ್ಲಸ್‌ 10 ಪ್ರೊ ಮೊಬೈಲ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್‌ 8 ಜೆನ್‌ 1 SoC ಪ್ರೊಸೆಸರ್‌ ಸಾಮರ್ಥ್ಯ ಪಡೆದಿದೆ. ಇದು ಆಂಡ್ರಾಯ್ಡ್‌ 12 ನಲ್ಲಿ ಆಕ್ಸಿಜನ್‌ OS 12.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ.

ಈ ಒನ್‌ಪ್ಲಸ್‌ ಫೋನಿನ ಬೆಲೆಯಲ್ಲಿ ಭರ್ಜರಿ ಇಳಿಕೆ!..ಗ್ರಾಹಕರಿಗೆ ಸಖತ್ ಉಳಿತಾಯ!

ಒನ್‌ಪ್ಲಸ್‌ನ ಈ ಮೊಬೈಲ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಹೊಂದಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೋನಿ IMX789 ಸೆನ್ಸಾರ್‌, ದ್ವಿತೀಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಅಲ್ಟ್ರಾ-ವೈಡ್ ಲೆನ್ಸ್‌ ಮತ್ತು ಮೂರನೇ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾ ಪಿಕ್ಸೆಲ್ ಸೋನಿ IMX615 ಸೆನ್ಸಾರ್‌ ಹೊಂದಿರುವ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.

ಈ ಮೊಬೈಲ್‌ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 80W ಸೂಪರ್‌ವೂಕ್‌ ವೈರ್ಡ್ ಚಾರ್ಜಿಂಗ್ ಮತ್ತು 50W ಏರ್‌ವೂಕ್‌ ವಾಯರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi 6, ಬ್ಲೂಟೂತ್ v5.2, GPS/ A-GPS, NFC, ಮತ್ತು USB ಟೈಪ್-C ಪೋರ್ಟ್ ಸೇರಿವೆ. ಇದಲ್ಲದೆ ಅಕ್ಸಿಲೆರೊಮೀಟರ್, ಆಂಬಿಯೆಂಟ್ ಲೈಟ್ ಸೆನ್ಸಾರ್‌, ಗೈರೊಸ್ಕೋಪ್, ಮ್ಯಾಗ್ನೆಟೋಮೀಟರ್ ಮತ್ತು ಪ್ರಾಕ್ಸಿಮಿಟಿ ಸೆನ್ಸಾರ್‌ ಅನ್ನು ಒಳಗೊಂಡಿದೆ.

Best Mobiles in India

English summary
OnePlus 10 Pro 5G biggest price down on amazon website. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+